ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಗೊಂದಲ

43 ಹೆಚ್ಚುವರಿ ಶಿಕ್ಷಕರ ವರ್ಗ•253 ಹುದ್ದೆಗಳು ಖಾಲಿ • ಮೇಲಧಿಕಾರಿಗಳ ಮೇಲೆ ಶಿಕ್ಷಕರ ಅಸಮಾಧಾನ

Team Udayavani, Jul 26, 2019, 11:07 AM IST

26-July-11

ಯಾದಗಿರಿ: ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿ.

ಯಾದಗಿರಿ: ಜಿಲ್ಲೆಯ ಪ್ರೌಢಶಾಲೆಗಳ 43 ಹೆಚ್ಚುವರಿ ಶಿಕ್ಷಕರನ್ನು ಜಿಲ್ಲಾ ಹಾಗೂ ಅಂತರ್‌ ಜಿಲ್ಲಾ ಮಟ್ಟದಲ್ಲಿ ಮಧ್ಯಂತರ ಅವಧಿಯಲ್ಲಿ ವರ್ಗಾವಣೆಯಾಗಿರುವುದು ಫಲಿತಾಂಶದ ಮೇಲೆ ಪರಿಣಾಮ ಬೀರುವ ಭೀತಿ ಎದುರಾಗಿದೆ. ಅಲ್ಲದೆ ಶಿಕ್ಷಕರ ವರ್ಗಾವಣೆ ಜತೆಗೆ ಅಲ್ಲಿನ ಹುದ್ದೆಯೂ ರದ್ದಾಗಲಿದೆ ಎನ್ನುವ ಆತಂಕವೂ ಮನೆ ಮಾಡಿದೆ.

ಜಿಲ್ಲೆಯಲ್ಲಿ ಈಗಾಗಲೇ ಪ್ರೌಢಶಾಲೆ ಶಿಕ್ಷಕರ ಕೊರತೆ ಇದೆ. ಮಂಜೂರಾಗಿರುವ ಒಟ್ಟು 1279 ಹುದ್ದೆಗಳಲ್ಲಿ ಸದ್ಯ 1026 ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದರೆ, 253 ಹುದ್ದೆಗಳು ಖಾಲಿ ಉಳಿದಿವೆ. ಈ ಮಧ್ಯೆಯೇ 43 ಹೆಚ್ಚುವರಿ ಶಿಕ್ಷಕರ ವರ್ಗವಾಗಿರುವುದು ವಿದ್ಯಾರ್ಥಿಗಳ ಅಭ್ಯಾಸದ ಮೇಲೆ ಪರಿಣಾಮ ಬೀರಲಿದೆ. ಮಾತ್ರವಲ್ಲದೇ ಪ್ರತಿ ಬಾರಿಯೂ ಜಿಲ್ಲೆಯ ಎಸ್‌ಎಸ್‌ಎಲ್ಸಿ ಫಲಿತಾಂಶ ಕುಸಿಯುತ್ತಿರುವುದು ಒಂದೆಡೆಯಾದರೇ ಶಿಕ್ಷಕರ ವರ್ಗಾವಣೆಯಿಂದ ಮತ್ತಷ್ಟು ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ.

ಹಿಂದುಳಿದ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಸರ್ಕಾರ ಶಿಕ್ಷಣ ಇಲಾಖೆಯಲ್ಲಿ ಖಾಲಿ ಹುದ್ದೆಗಳನ್ನು ತುಂಬುವ ಕೆಲಸ ಮಾಡಬೇಕಿತ್ತು. ಅದನ್ನು ಬಿಟ್ಟು ಇರುವ ಶಿಕ್ಷಕರ ವರ್ಗಾವಣೆ ಮಾಡುವುದು ಸರಿಯಾದ ಕ್ರಮವಲ್ಲ ಎಂದು ಶಿಕ್ಷಣ ಪ್ರೇಮಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಸಕ್ತ ಸಾಲಿನ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲೆಯ ಪ್ರೌಢಶಾಲೆಗಳ 26 ಶಿಕ್ಷಕರನ್ನು ಅಂತರ್‌ ಜಿಲ್ಲೆಗೆ ಮತ್ತು ಉಳಿದ 17 ಶಿಕ್ಷಕರನ್ನು ಜಿಲ್ಲಾ ಹಂತದಲ್ಲಿಯೇ ವರ್ಗಾವಣೆ ಮಾಡಿದೆ. ಅಂತರ್‌ ಜಿಲ್ಲೆಗೆ ನಮ್ಮ ಜಿಲ್ಲೆಯ ಶಿಕ್ಷಕರು ವರ್ಗವಾಗುವುದರಿಂದ ಇಲ್ಲಿನ ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ.

ಜಿಲ್ಲೆಯ ಪ್ರೌಢಶಾಲೆಗಳ ಸ್ಥಿತಿಗತಿ ಗಮನಿಸುವುದಾದರೇ ಪ್ರಸ್ತುತ ಭಾಷಾವಾರು ಶಿಕ್ಷಕರ ಕೊರತೆಯೂ ಕಾಡುತ್ತಿದೆ. ಈಗಷ್ಟೇ ವರ್ಗಾವಣೆಯಾಗಿರುವ ಕಲಾ ಶಿಕ್ಷಕರೇ ಇಂಗ್ಲಿಷ್‌, ಹಿಂದಿ, ಕನ್ನಡ ವಿಷಯಗಳನ್ನು ಬಹುತೇಕ ಕಡೆ ಬೋಧಿಸುತ್ತಿದ್ದರು. ಆದರೆ, ಏಕಾಏಕಿ ವರ್ಗಾವಣೆಯಿಂದ ಮಕ್ಕಳ ಭವಿಷ್ಯ ಅತಂತ್ರಸ್ಥಿತಿಗೆ ದೂಡಲ್ಪಡುವ ಪರಿಸ್ಥಿತಿ ನಿರ್ಮಾಣವಾಗಲಿದೆ.

ಜಿಪಂ ಅಧ್ಯಕ್ಷರ ಸೂಚನೆ: ಜಿಲ್ಲೆಯಲ್ಲಿನ ಹೆಚ್ಚುವರಿ ಶಿಕ್ಷಕರನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಬಾರದು. ಮೊದಲೇ ಶಿಕ್ಷಕರ ಕೊರತೆಯಿಂದ ಜಿಲ್ಲೆಯಲ್ಲಿ ಫಲಿತಾಂಶ ಮಟ್ಟ ಸುಧಾರಣೆಯಾಗುತ್ತಿಲ್ಲ. ಈ ಬಗ್ಗೆ ಇಲಾಖೆಗೆ ಪತ್ರ ಬರೆದು ವರ್ಗಾವಣೆಯಾಗಿರುವ ಹೆಚ್ಚುವರಿ ಶಿಕ್ಷಕರನ್ನು ಇಲ್ಲಿಯೇ ಉಳಿಸಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉನಿರ್ದೇಶಕರಿಗೆ ಜಿಪಂ ಅಧ್ಯಕ್ಷ ರಾಜಶೇಖರ ಪಾಟೀಲ ವಜ್ಜಲ ಇತ್ತೀಚೆಗೆ ನಡೆದ ಸಭೆಯಲ್ಲಿ ಸೂಚಿಸಿದ್ದರು. ಸಭೆಗೆ ಮಾಹಿತಿ ನೀಡಿದ್ದ ಡಿಡಿಪಿಐ ಶಿಕ್ಷಕರನ್ನು ಉಳಿಸಿಕೊಳ್ಳಲು ಇಲಾಖೆಗೆ ಪತ್ರ ಬರೆಯಲಾಗುವುದು ಎಂದು ಮಾಹಿತಿ ನೀಡಿದ್ದರು. ಆದರೆ ಶಿಕ್ಷಕರನ್ನು ಉಳಿಸಿಕೊಳ್ಳಲು ಪ್ರಯತ್ನ ನಡೆಯಲಿಲ್ಲವೇ ಎಂಬ ಪ್ರಶ್ನೆ ಅಂತರ್‌ ಜಿಲ್ಲೆಗೆ ವರ್ಗವಾಗಿರುವ ಶಿಕ್ಷಕರನ್ನು ಕಾಡುತ್ತಿದೆ. ವರ್ಗಾವಣೆಯಾದ ಹೆಚ್ಚುವರಿ ಶಿಕ್ಷಕರನ್ನು ಅತಿ ಅವಶ್ಯವಿರುವ ಮೂಲ ಶಾಲೆಗಳಲ್ಲಿ ಮುಂದುವರಿಸಲು ಪ್ರೌಢಶಿಕ್ಷಣ ಇಲಾಖೆ ನಿರ್ದೇಶಕರು ಪ್ರಸ್ತಾವನೆ ಸಲ್ಲಿಸುವಂತೆ ಎಲ್ಲ ಉಪನಿರ್ದೇಶಕರಿಗೆ ಸೂಚಿಸಿದ್ದರು. ಜಿಲ್ಲೆಯಿಂದ ವರ್ಗವಾಗಿ ಬೇರೆ ಜಿಲ್ಲೆಗೆ ತೆರಳುತ್ತಿರುವ ಹೆಚ್ಚವರಿ ಶಿಕ್ಷಕರನ್ನು ಉಳಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನವಾಗಿಲ್ಲ ಎಂದು ಶಿಕ್ಷಕರಿಂದಲೇ ಮೇಲಾಧಿಕಾರಿಗಳ ಮೇಲೆ ಅಸಮಾಧಾನ ವ್ಯಕ್ತವಾಗುತ್ತಿದೆ.

ಈ ಬಗ್ಗೆ ಅಧಿಕಾರಿಗಳನ್ನು ವಿಚಾರಿಸಿದರೆ, ಮುಖ್ಯಗುರುಗಳಿಗೆ ತಿಳಿಸಲಾಗಿತ್ತು. ಜುಲೈ 24ರ ವರೆಗೆ ಕೊನೆ ದಿನವಾಗಿತ್ತು. ಕೆಲವರು ಪ್ರಸ್ತಾವನೆ ಸಲ್ಲಿಸಿದ್ದು, ಇಲಾಖೆಗೆ ಕಳುಹಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಉಪನಿರ್ದೇಶಕರ ದ್ವಂದ್ವ ನೀತಿ?: ಒಂದೆಡೆ ಶಿಕ್ಷಕರನ್ನು ಇಲ್ಲಿಯೇ ಉಳಿಸಿಕೊಳ್ಳಲು ಮೇಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು ಎಂದು ಶಿಕ್ಷಣ ಇಲಾಖೆ ಉಪನಿರ್ದೇಶಕರು ಜಿಪಂ ಅಧ್ಯಕ್ಷರಿಗೆ ಹೇಳುತ್ತಾರೆ. ಮತ್ತೂಂದೆಡೆ ವರ್ಗವಾಗಿರುವ ಹೆಚ್ಚುವರಿ ಶಿಕ್ಷಕರನ್ನು ಬಿಡುಗಡೆ ಮಾಡುವಂತೆ ಶಾಲಾ ಮುಖ್ಯಸ್ಥರಿಗೆ ಆದೇಶ ನೀಡಿದ್ದು, ಹಾಗಾಗಿ ಇಲ್ಲಿ ಉಪನಿರ್ದೇಶಕರೇ ಏನಾದರೂ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆಯೇ ಎನ್ನುವ ಪ್ರಶ್ನೆಯೂ ಉಬ್ಧವಗೊಂಡಿದ್ದು, ಇದಕ್ಕೆ ಉಪನಿರ್ದೇಶಕರೇ ಉತ್ತರ ನೀಡಬೇಕಿದೆ.

ಶಿಕ್ಷಕರ ಬಿಡುಗಡೆಗೆ ಅಪರ ಆಯುಕ್ತರ ಪತ್ರ: ಶಿಕ್ಷಕರ ವರ್ಗಾವಣೆಯಿಂದ ಜಿಲ್ಲೆಯ ಶಿಕ್ಷಣ ಮಟ್ಟ ಕುಸಿಯುವ ಭೀತಿ ಎದುರಿಸುತ್ತಿದ್ದರೆ, ಅತ್ತ ಶಿಕ್ಷಣ ಇಲಾಖೆ ಅಪರ ಆಯುಕ್ತರು ಡಿಡಿಪಿಐಗೆ ಪತ್ರ ಬರೆದು ವರ್ಗಾವಣೆಯಾದ ಹೆಚ್ಚುವರಿ ಶಿಕ್ಷಕರನ್ನು ಬಿಡುಗಡೆ ಮಾಡಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಜುಲೈ 25ರಂದು ಸೂಚನೆ ನೀಡಿರುವ ಅವರು, ವರ್ಗಾವಣೆಯಾದ ಶಿಕ್ಷಕರು ತಮ್ಮನ್ನು ಬಿಡುಗಡೆಗೊಳಿಸುತ್ತಿಲ್ಲ ಎಂದು ಕೆಲವರು ಅಪರ ಆಯುಕ್ತರ ಮೊರೆ ಹೋಗಿದ್ದು, ಹಾಗಾಗಿ ಬಿಡುಗಡೆ ಮಾಡಿ ವರದಿ ನೀಡುವಂತೆ ಸೂಚಿಸಿದ್ದಾರೆ ಎಂದು ಇಲಾಖೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಏನಿದು ಹೆಚ್ಚುವರಿ ಶಿಕ್ಷಕರ ಗೊಂದಲ?
ಒಂದು ಶಾಲೆಯಲ್ಲಿ ಮಕ್ಕಳ ಸಂಖ್ಯೆಗನುಗುಣವಾಗಿ 1 ಹುದ್ದೆ ಇರಬೇಕು. ಈಗಾಗಲೇ ಆ ಶಾಲೆಯಲ್ಲಿ ಒಂದಕ್ಕಿಂತ ಹೆಚ್ಚಿರುವ ಶಿಕ್ಷಕರನ್ನು ಹೆಚ್ಚುವರಿ ಎಂದು ಗುರುತಿಸಲಾಗಿದೆ. ಅವರನ್ನೇ ಬೇರೆಡೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಕೆಲವು ಶಾಲೆಗಳಲ್ಲಿ ಈ ಹಿಂದೆಯಿಲ್ಲದ ಹುದ್ದೆಗಳು ಮಂಜೂರಾಗಿ ಅನುಕೂಲವಾಗಿದ್ದು, ಇನ್ನೂ ಕೆಲವು ಕಡೆ ಇರುವ ಶಿಕ್ಷಕರು ವರ್ಗವಾಗಿದ್ದು, ಒಬ್ಬರ ಮೇಲೆಯೇ 8, 9, 10ನೇ ತರಗತಿ ವಿದ್ಯಾರ್ಥಿಗಳಿಗೆ ಪಾಠ ಮಾಡುವ ಹೊರೆ ಬಿದ್ದಂತಾಗಿದೆ. ಇನ್ನೊಂದೆಡೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯಿಂದ ನಷ್ಟವೇನಲ್ಲ ಲಾಭವೇ ಆಗಿದೆ. ಶಾಲೆಗಳಲ್ಲಿ ಈ ಮೊದಲು ಹುದ್ದೆ ಇರದ ಇಂಗ್ಲಿಷ್‌, ಪಿಸಿಎಂ, ಕನ್ನಡ ಹಾಗೂ ಗಣಿತ ಭಾಷಾ ಶಿಕ್ಷಕರ ಹುದ್ದೆಗಳು ಎಲ್ಲ ಶಾಲೆಗಳಲ್ಲಿ ಮಂಜೂರಾಗಿವೆ. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ ಎನ್ನುತ್ತಾರೆ ಮೇಲಾಧಿಕಾರಿಗಳು.

ಪ್ರಸಕ್ತ ಸಾಲಿನ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯಾಗಿದೆ. ವರ್ಗಾವಣೆಯಾದ ಕಲಾ ಶಿಕ್ಷಕರೇ ಶಾಲೆಗಳಲ್ಲಿ ಕನ್ನಡ, ಇಂಗ್ಲಿಷ್‌ ಹಾಗೂ ಹಿಂದಿ ವಿಷಯ ಬೋಧಿಸುತ್ತಿರುವುದು ಅನುಕೂಲವಾಗಿತ್ತು. ಭಾಷಾ ಶಿಕ್ಷಕರು ಬರೆವವರೆಗೂ ಹೆಚ್ಚುವರಿ ಶಿಕ್ಷಕರನ್ನು ಮುಂದುವರಿಸಲು ಈಗಾಗಲೇ ಆಯುಕ್ತರಿಗೆ ಪತ್ರ ಬರೆಯಲಾಗಿದೆ.
•ಶ್ರೀಶೈಲ ಬಿರಾದಾರ,
ಡಿಡಿಪಿಐ ಯಾದಗಿರಿ

ಟಾಪ್ ನ್ಯೂಸ್

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.