ಪ್ರಾಥಮಿಕ, ಪ್ರೌಢಶಿಕ್ಷಣ ರಾಷ್ಟ್ರೀಕರಣಗೊಳಿಸಿ


Team Udayavani, Jul 26, 2019, 3:37 PM IST

mysuru-tdy-3

ಎನ್‌.ಆರ್‌. ಮೊಹಲ್ಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೋಟ್ಬುಕ್‌ ವಿತರಣೆ ಮತ್ತು ಅಭಿನಂದನಾ ಸಮಾರಂಭ ನಡೆಯಿತು. ಸಾಹಿತಿ ಬನ್ನೂರು ಕೆ.ರಾಜು, ಹಿರಣ್ಮಯಿ ಪ್ರತಿಷ್ಠಾನದ ಅಧ್ಯಕ್ಷ ಎ.ಸಂಗಪ್ಪ ಇತರರು ಉಪಸ್ಥಿತರಿದ್ದರು.

ಮೈಸೂರು: ಸರ್ಕಾರಿ ಶಾಲೆಗಳನ್ನು ಉಳಿಸಿ ಕೊಳ್ಳುವತ್ತ ಸರ್ಕಾರ ಗಂಭೀರ ಚಿಂತನೆ ನಡೆಸಬೇಕಾಗಿದೆ ಎಂದು ಸಾಹಿತಿ ಬನ್ನೂರು ಕೆ.ರಾಜು ತಿಳಿಸಿದರು.

ಹಿರಣ್ಮಯಿ ಪ್ರತಿಷ್ಠಾನ ಹಾಗೂ ಕಾವೇರಿ ಬಳಗದ ಸಂಯುಕ್ತಾಶ್ರಯದಲ್ಲಿ ಎನ್‌.ಆರ್‌.ಮೊಹಲ್ಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ನೋಟ್ಬುಕ್‌ ವಿತರಣೆ ಮತ್ತು ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಖಾಸಗಿ ಶಾಲೆ ಮೋಹ: ಸರ್ಕಾರಿ ಶಾಲೆಗಳಿಗೆ ಸರ್ಕಾರ ಸಕಲ ಸವಲತ್ತುಗಳನ್ನು ನೀಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿದ್ದರೂ ಖಾಸಗಿ ಶಾಲೆಗಳ ಭ್ರಮೆಯಲ್ಲಿರುವವ ರಿಂದಾಗಿ ಸರ್ಕಾರಿ ಶಾಲೆಗೆ ಮಕ್ಕಳು ಬಾರದೆ, ಮುಚ್ಚುವ ಹಂತಕ್ಕೆ ತಲುಪುತ್ತಿವೆ. ಆದ್ದರಿಂದ ಸರ್ಕಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ರಾಷ್ಟ್ರೀಕರಣಗೊಳಿಸಬೇಕು ಅಥವಾ ಹಳ್ಳಿ ಹಳ್ಳಿಗೂ ನಾಯಿಕೊಡೆ ಗಳಂತೆ ಹುಟ್ಟಿಕೊಳ್ಳು ತ್ತಿರುವ ಖಾಸಗಿ ಶಾಲೆಗಳಿಗೆ ಅನುಮತಿ ನಿರಾಕರಿಸಬೇಕು. ಇದನ್ನು ಮಾಡದೇ ಹೋದರೆ ಸರ್ಕಾರಿ ಶಾಲೆಗಳನ್ನು ಸರಸ್ವತಿ ಮನಸ್ಸು ಮಾಡಿದರೂ ಉಳಿಸಿ ಕೊಳ್ಳಲಾಗುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ಗುರು ಶಿಷ್ಯ ಸಂಬಂಧ ಶ್ರೇಷ್ಠ: ಜಗತ್ತಿನಲ್ಲಿ ಗುರು – ಶಿಷ್ಯರ ಸಂಬಂಧ ಎಲ್ಲಾ ಸಂಬಂಧ ಗಳಿಗಿಂತ ಅತ್ಯಂತ ಶ್ರೇಷ್ಠ. ಯಾರೂ ಕದಿಯ ಲಾಗದ, ಎಂದೂ ನಶಿಸಿಹೋಗದ ಸಂಪತ್ತು ವಿದ್ಯೆ. ಇಂತಹ ಶಾಶ್ವತ ಸಂಪತ್ತನ್ನು ಶಿಷ್ಯರಿಗೆ ನೀಡುವ ಗುರುಗಳು ಮತ್ತು ಗುರುಗಳಿಂದ ವಿದ್ಯೆ ಕಲಿತು, ಅವರಲ್ಲಿನ ಜ್ಞಾನ ಪಡೆದು ಭವಿಷ್ಯದಲ್ಲಿ ವಿವಿಧ ರಂಗಗಳಲ್ಲಿ ಸಮಾಜದ ಸತ್ಪಜೆ ಗಳಾಗಿ ಬೆಳೆಯುವ ಶಿಷ್ಯರು, ಇವರಿಬ್ಬರ ಕರುಳು ಬಳ್ಳಿಯಂತಹ ಸಂಬಂಧಕ್ಕೆ ಸಮ ಮತ್ತೂಂದಿಲ್ಲ ಎಂದು ತಿಳಿಸಿದರು.

ವಿದ್ಯೆಯಷ್ಟೇ ಶಾಶ್ವತವಾದುದು ಗುರು – ಶಿಷ್ಯರ ಸಂಬಂಧ. ಹಾಗಾಗಿ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಪ್ರಾಚೀನ ಕಾಲದಿಂದಲೂ ಗುರು ಶಿಷ್ಯ ಪರಂಪರೆಗೆ ಮಹತ್ತರವಾದ ಮೌಲಿಕ ಸ್ಥಾನವಿದೆ. ಗುರು ಮನಸ್ಸು ಮಾಡಿದರೆ ಎಂತಹ ಕಗ್ಗಲ್ಲಿನಂತಹ ಶಿಷ್ಯರನ್ನೂ ಕೆತ್ತಿ, ತಿದ್ದಿ, ತೀಡಿ ಸುಂದರ ಜ್ಞಾನ ಶಿಲ್ಪಗಳಾಗಿ ಮಾಡಬಲ್ಲ. ಹಾಗೆಯೇ ಒಳ್ಳೆಯ ಶಿಷ್ಯನಾದವನು ಎಂತಹ ಕಠಿಣ ಮನಸ್ಸಿನ ಕೋಪಿಷ್ಠ ಗುರುವನ್ನೂ ತನ್ನ ವಿನಯಪೂರ್ವಕ ಸದ್ಗುಣಗಳಿಂದ ಕರಗುವಂತೆ ಮಾಡಿ ಅವರಿಂದ ಜ್ಞಾನವನ್ನು ಪಡೆದುಕೊಳ್ಳಬಲ್ಲ ಎಂದ ಅವರು, ಈ ದಿಸೆಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಗುರು ಭಕ್ತಿಯನ್ನು ಮೆರೆಸಿ ಒಳ್ಳೆ ಶಿಷ್ಯರಾಗಿ ಸಾಧಕರಾಗಬೇಕೆಂದು ಸಲಹೆ ನೀಡಿದರು.

ನಿವೃತ್ತರಾಗುತ್ತಿರುವ ಶಿಕ್ಷಕಿ ಮಹಾಲಕ್ಷ್ಮೀ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಶಿಕ್ಷಕಿ ಫಾತಿಮಾ, ಹಿರಣ್ಮಯಿ ಪ್ರತಿಷ್ಠಾನದ ಅಧ್ಯಕ್ಷ ಎ.ಸಂಗಪ್ಪ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಶುಭಾ, ಕಾವೇರಿ ಬಳಗದ ಅಧ್ಯಕ್ಷೆ ಎನ್‌.ಕೆ.ಕಾವೇರಿಯಮ್ಮ, ಓರಿಗಾಮಿ ಕಲಾವಿದ ಎಚ್.ವಿ.ಮುರಳೀಧರ, ಶಿಕ್ಷಕಿಯರಾದ ವೈಜಯಂತಿ, ಜಯಮೇರಿ, ಶಿವಮ್ಮ, ರಶ್ಮಿ, ಭಾರತಿ, ಅನ್ನಪೂರ್ಣ ಇನ್ನಿತರರು ಕಾರ್ಯ ಕ್ರಮದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.