ಅನ್ಯಾಯ ನಡೆದರೆ ಪ್ರಾಧಿಕಾರಕ್ಕೆ ದೂರು ಸಲ್ಲಿಸಿ: ಸಿದ್ರಾಮ ಟಿ.ಪಿ
Team Udayavani, Jul 26, 2019, 5:24 PM IST
ಬೀದರ: ಪೊಲೀಸ್ ದೂರು ಪ್ರಾಧಿಕಾರ ಹಾಗೂ ಸಂತ್ರಸ್ತ ಪರಿಹಾರ ಯೋಜನೆ ಕುರಿತು ನಡೆದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.
ಬೀದರ: ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯಿಂದ ಕಿರುಕುಳ ಅಥವಾ ಅನ್ಯಾಯ ನಡೆದರೆ ಪೊಲೀಸ್ ದೂರು ಪ್ರಾಧಿಕಾರದ ಸಹಾಯ ಪಡೆಯಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧಿಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಬಾಲಕರ ಪದವಿ ಕಾಲೇಜು ಆಶ್ರಯದಲ್ಲಿ ಏರ್ಪಡಿಸಿದ್ದ ಪೊಲೀಸ್ ದೂರು ಪ್ರಾಧಿಕಾರ ಹಾಗೂ ಸಂತ್ರಸ್ತ ಪರಿಹಾರ ಯೋಜನೆ-2011 ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಡಿವೈಎಸ್‌ಪಿ ದರ್ಜೆಗಿಂತ ಕೆಳಗಿನ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಜಿಲ್ಲಾ ಮಟ್ಟದಲ್ಲಿ ಅಸ್ತಿತ್ವದಲ್ಲಿರುವ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರಕ್ಕೆ ಹಾಗೂ ಡಿವೈಎಸ್‌ಪಿ ದರ್ಜೆಗಿಂತ ಮೇಲ್ಪಟ್ಟ ಅಧಿಕಾರಿಗಳ ವಿರುದ್ಧ ರಾಜ್ಯ ಪೊಲೀಸ್ ದೂರು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದರು.
ಯಾವುದೋ ಒಂದು ಸನ್ನಿವೇಶದಲ್ಲಿ ಕೊಲೆ ನಡೆದಲ್ಲಿ ಅಂತಹ ಕುಟುಂಬಸ್ಥರು ಬೀದಿಗೆ ಬರುವ ಸಾಧ್ಯತೆ ಇರುತ್ತದೆ. ಅವರ ಕುಟುಂಬದವರಿಗೆ ನೆರವಾಗಲು ಉಚ್ಛ ನ್ಯಾಯಾಲಯ ನಿರ್ದೇಶನದಂತೆ ರಾಜ್ಯದಲ್ಲಿ ಸಂತ್ರಸ್ತ ಪರಿಹಾರ ಯೋಜನೆ-2011 ಜಾರಿಗೆ ತರಲಾಗಿದೆ. ಅಪರಾಧಿಕ ಕೃತ್ಯದಲ್ಲಿ ವ್ಯಕ್ತಿ ಮರಣ ಹೊಂದಿದ್ದಲ್ಲಿ ಅವನನ್ನು ಅವಲಂಬಿಸಿದ ವ್ಯಕ್ತಿಗೆ ಪರಿಹಾರ ನೀಡಲಾಗುತ್ತದೆ. ಮರಣ ಹೊಂದಿದ ವ್ಯಕ್ತಿ 20 ರಿಂದ 40 ವರ್ಷದವರಾಗಿದ್ದರೆ 3 ಲಕ್ಷ, 40ರಿಂದ 60 ವರ್ಷದೊಳಗಿದ್ದಲ್ಲಿ 2 ಲಕ್ಷ ಹಾಗೂ 60 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರಿದ್ದರೆ 1 ಲಕ್ಷ ರೂ. ಸಹಾಯಧನ ನೀಡಲು ಅವಕಾಶವಿರುತ್ತದೆ ಎಂದು ಹೇಳಿದರು.
ಅತ್ಯಾಚಾರ ಪ್ರಕರಣಗಳಲ್ಲಿ ಸಂತ್ರಸ್ತರು ಅಥವಾ ಅವರ ಕುಟುಂಬದವರಿಗೆ ಪರಿಹಾರಧನ ಕೊಡಲು ಕಾನೂನಿನಲ್ಲಿ ಅವಕಾಶವಿರುತ್ತದೆ. ಇಂತಹ ಕೃತ್ಯಗಳು ನಡೆದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯ ಪಡೆಯಬಹುದು ಎಂದು ತಿಳಿಸಿದರು.
ಸರ್ಕಾರಿ ಪ.ಪೂ ಕಾಲೇಜು ಪ್ರಾಚಾರ್ಯ ಹಳ್ಳಿಖೇಡ ಎ.ಎಂ, ಉಪ ಪ್ರಾಚಾರ್ಯ ಪ್ರಕಾಶ ಡೊಂಗರೆ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಪ್ರಕಾಶ ವಿ.ಎಂ, ಜಂಟಿ ಕಾರ್ಯದರ್ಶಿ ಅಂಬಾದಾಸ ವಾಗರಾಜ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
MUST WATCH
ಹೊಸ ಸೇರ್ಪಡೆ
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.