ಸಂಘಟನಾ ಚತುರ,ಸಾರ್ವಕಾಲಿಕ ಜಾತ್ಯತೀತ ನಾಯಕ ಬಿಎಸ್‌ವೈ

Team Udayavani, Jul 27, 2019, 5:01 AM IST

BSY-RSS

ಬೆಂಗಳೂರು: ನಿರಂತರ ಜನ ಸಂಪರ್ಕ, ಜನಪರ ಹೋರಾಟ ಮತ್ತು ರಾಜ್ಯ ಸಂಚಾರದ ಮೂಲಕ ಬಿ.ಎಸ್‌.ಯಡಿಯೂರಪ್ಪ ಅವರು ಸಾರ್ವಕಾಲಿಕ ಜನನಾಯಕರಾಗಿ ಬೆಳೆದಿದ್ದಾರೆ. ಕಠಿನ ಪರಿಶ್ರಮ, ಸಂಘಟನ ಚತುರತೆ ಜತೆಗೆ ಸರ್ವಸ್ಪರ್ಶಿ ಜಾತ್ಯತೀತ ವ್ಯಕ್ತಿತ್ವವೇ ಅವರನ್ನು ಉನ್ನತ ಸ್ಥಾನಕ್ಕೇರುವಂತೆ ಮಾಡಿದಂತಿದೆ.

ರಾಜ್ಯ ಬಿಜೆಪಿಯ ಪ್ರಬಲ ನಾಯಕರಾಗಿರುವ ಬಿ.ಎಸ್‌. ಯಡಿಯೂರಪ್ಪ ಅವರು ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಎರಡನೇ ಬಾರಿಗೆ ಕರ್ನಾಟಕದಲ್ಲಿ ಬಿಜೆಪಿ ಸರಕಾರ ರಚಿಸುವ ಮೂಲಕ ದಕ್ಷಿಣ ಭಾರತದಲ್ಲಿ ಎರಡನೇ ಬಾರಿಗೆ ಕಮಲ ಪಕ್ಷವನ್ನು ಅರಳಿಸಿದ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಈ ಯಶಸ್ಸಿಗೆ ಬಿಜೆಪಿಗಿರುವ ಜನಪ್ರಿಯತೆ ಜತೆಗೆ ಯಡಿಯೂರಪ್ಪ ಅವರ ವೈಯಕ್ತಿಕ ವರ್ಚಸ್ಸು ಮತ್ತು ಸರ್ವ ಜನಾಂಗದವರೊಂದಿಗಿನ ಸೌಹಾರ್ದ ಸಂಬಂಧವೂ ಕಾರಣ ಎನ್ನುತ್ತದೆ ಆಪ್ತ ವಲಯ.

ರಾಜ್ಯದಲ್ಲಿ ಪ್ರಭಾವಿ ನಾಯಕರಾಗಿ ರೂಪುಗೊಂಡವರ ಹಿಂದೆ ಅವರು ಬಯಸಲಿ, ಬಯಸದಿರಲಿ ಅವರು ಪ್ರತಿನಿಧಿಸುವ ಸಮುದಾಯದ ಜನರು ದೊಡ್ಡ ಸಂಖ್ಯೆಯಲ್ಲಿ ಬೆಂಬಲಿಸುತ್ತಾ ಬಂದಿರುವುದನ್ನು ಕಾಣಬಹುದು. ಇದಕ್ಕೆ ಯಡಿಯೂರಪ್ಪ ಅವರೂ ಹೊರತಲ್ಲ. ಅವರು ಪ್ರತಿನಿಧಿಸುವ ಲಿಂಗಾಯತ ಸಮುದಾಯದ ದೊಡ್ಡ ವರ್ಗ ಅವರ ಬೆನ್ನಿಗೆ ಬೆಂಬಲವಾಗಿ ನಿಂತಿದೆ. ಯಡಿಯೂರಪ್ಪ ಅವರು ಕೆಜೆಪಿ ಪಕ್ಷ ಸೇರಿ ಚುನಾವಣೆ ಎದುರಿಸಿ ದಾಗಲೂ ಇದು ಸಾಬೀತಾಗಿದೆ.

ಜಾತ್ಯತೀತ ವ್ಯಕ್ತಿತ್ವ
ಯಡಿಯೂರಪ್ಪ ಅವರ ಬಗ್ಗೆ ಅನ್ಯ ಸಮುದಾಯದ ಬೆಂಬಲ ಇಲ್ಲವೆಂದಲ್ಲ. ನಾನಾ ವರ್ಗದ ಜನರೊಂದಿಗೆ ನಿರಂತರ ಸಂಪರ್ಕವಿಟ್ಟುಕೊಂಡು ಅವರ ಮನವಿಗೆ ಸ್ಪಂದಿಸುತ್ತ ಬಂದಿರುವುದರಿಂದ ಅವರನ್ನು ಒಂದು ಸಮುದಾಯಕ್ಕೆ ಸೀಮಿತವಾಗಿ ನೋಡುವಸ್ಥಿತಿ ಇಲ್ಲ. 2008ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಬಹುತೇಕ ಎಲ್ಲ ಪ್ರಮುಖ ಮತ್ತು ಹಿಂದುಳಿದ ಸಮುದಾಯಗಳ ಮಠ ಮಾನ್ಯಗಳಿಗೂ ಸಹಾಯಧನ ನೀಡಿದ್ದನ್ನು ಇಂದಿಗೂ ಸ್ಮರಿಸಲಾಗುತ್ತದೆ.

ಕಟ್ಟಾ ಹಿಂದುತ್ವವಾದಿಯಲ್ಲ
ಹಿಂದುತ್ವ ಪ್ರತಿಪಾದನೆಯೇ ಬಿಜೆಪಿಯ ಮುಖ್ಯ ಸಿದ್ಧಾಂತ. ಆ ಮೂಲಕವೇ ದೇಶದಲ್ಲಿ ಉಚ್ಛ್ರಾಯ ಸ್ಥಿತಿಗೆ ಏರಿದೆ. ಹಾಗಿದ್ದರೂ ಯಡಿಯೂರಪ್ಪ ಅವರು ಈವರೆಗೆ ಕಟ್ಟರ್‌ ಹಿಂದುತ್ವವಾದಿಯಂತೆ ಕಂಡಿಲ್ಲ.ಹಿಂದುತ್ವ ವಿಚಾರ ಬಂದಾಗ ಅದರ ಪರವಾಗಿದ್ದರೂ ಪ್ರಖರ ಹಿಂದುತ್ವ ಪ್ರತಿಪಾದಕರಂತಿಲ್ಲ. ಘಟನಾವಳಿ ಆಧರಿಸಿ ಸಂದರ್ಭ, ಸನ್ನಿವೇಶಕ್ಕೆ ಪೂರಕವಾಗಿ ಹಿಂದುತ್ವ ಪ್ರತಿಪಾದಿಸುವುದಕ್ಕೆ ಯಡಿಯೂರಪ್ಪ ಸೀಮಿತರಾಗಿದ್ದಾರೆ. ಅಲ್ಪಸಂಖ್ಯಾಕ ಸಮುದಾಯದವರು ಸಹ ಅವರನ್ನು ವಿರೋಧಿಸಿದ್ದು ವಿರಳ.

ಬಿಜೆಪಿಯ ಅದ್ವಿತೀಯ ನಾಯಕ‌

ರಾಜ್ಯ ಬಿಜೆಪಿಯಲ್ಲಿ ಸದ್ಯದ ಮಟ್ಟಿಗೆ ಬಿಜೆಪಿಯವರನ್ನು ಮೀರಿಸುವ ಮತ್ತೂಬ್ಬ ಜನನಾಯಕರು ಇದ್ದಂ ತಿಲ್ಲ. ತಮ್ಮ ಒಂದು ಕರೆಯ ಮೂಲಕವೇ ಹೋರಾಟದ ದಿಕ್ಕು ದೆಸೆ ಬದಲಾಯಿಸುವಷ್ಟರ ಮಟ್ಟಿಗೆ ಪ್ರಭಾವಿ ನಾಯಕರಾಗಿರುವ ಅವರ ಸಾಮರ್ಥಯದ ಬಗ್ಗೆ ಬಿಜೆಪಿಗೂ ಸ್ಪಷ್ಟ ಅರಿವಿದೆ. ಹಾಗಾಗಿಯೇ ವರಿಷ್ಠರು ಸಹ ಯಡಿಯೂರಪ್ಪನವರ ವಿಚಾರದಲ್ಲಿ ಸ್ವಲ್ಪ ಎಚ್ಚರಿಕೆಯಿಂದಲೇ ವರ್ತಿಸುತ್ತಾ ಬಂದಿರುವುದನ್ನು ಕಾಣಬಹುದು. ಅಧಿಕಾರ ನಿರ್ವಹಣೆಗೆ ವಯೋಮಿತಿ ನಿಗದಿಪಡಿಸಿದ್ದರೂ ಯಡಿಯೂರಪ್ಪ ಅವರಿಗೆ ವಿನಾಯಿತಿ ನೀಡಿದಂತಿದೆ. ಜತೆಗೆ ಏಕಕಾಲಕ್ಕೆ ಎರಡು ಪ್ರಮುಖ ಹುದ್ದೆ ನಿರ್ವ ಹಿಸಬಾರದೆಂಬ ನಿಯಮವಿದ್ದರೂ ಯಡಿಯೂರಪ್ಪ ಅವರು ರಾಜ್ಯಾಧ್ಯಕ್ಷ ಸ್ಥಾನದ ಜತೆಗೆ ವಿಧಾನಸಭೆ ವಿಪಕ್ಷರಾಗಿಯೂ ಮುಂದುವರಿದಿದ್ದರು. ರಾಜ್ಯ ಬಿಜೆಪಿಯಲ್ಲಿ ಸದ್ಯಕ್ಕೆ ಯಡಿ ಯೂರಪ್ಪ ಅವರಂಥ ಜನನಾಯಕರಿಲ್ಲ. ಅವರ ಸಂಘಟನ ಶಕ್ತಿ, ಸಾಮರ್ಥಯದ ಬಗ್ಗೆ ಪಕ್ಷಕ್ಕೂ ಅರಿವಿದೆ. ಒಂದೆಡೆ ಕುಳಿತು ಕಾರ್ಯತಂತ್ರ ರೂಪಿಸಿ ಅದನ್ನು ಜಾರಿಗೊಳಿಸಿ ಅದರಲ್ಲಿ ಯಶಸ್ಸು ಸಾಧಿಸುವ ಪ್ರವೃತ್ತಿ ಯಡಿಯೂರಪ್ಪ ಅವರಿಗೆ ಹೆಚ್ಚು ಒಗ್ಗುವುದಿಲ್ಲ. ಭಿನ್ನಾಭಿಪ್ರಾಯವುಳ್ಳ ನಾಯಕರನ್ನು ಒಟ್ಟಿಗೆ ಸೇರಿಸಿ ಮನವೊಲಿಸಿ ಒಗ್ಗಟ್ಟಾಗಿ ಮುಂದುವರಿಯುವಂತೆ ಮಾಡುವ ಗುರಿ ನೀಡಿದರೆ ಅದನ್ನು ಯಶಸ್ವಿಯಾಗಿ ಮಾಡಿ ಮುಗಿಸುತ್ತಾರೆ. ಅವರ ಸಂಘಟನ ಶಕ್ತಿ, ಪ್ರವಾಸ, ಜನ ಸಂಪರ್ಕ ಕಾರಣಕ್ಕೆ ಇಂದಿಗೂ ಅವರಿಗೆ ಪಕ್ಷದಲ್ಲಿ ಮಹತ್ವದ ಸ್ಥಾನ ನೀಡಲಾಗಿದೆ. ಅಧಿಕಾರದಲ್ಲಿದ್ದಾಗ ಸರ್ವ ಸಮುದಾಯದವರ ಕಲ್ಯಾಣಕ್ಕೆ ಕೊಡುಗೆ ನೀಡುವ ಮೂಲಕ ತಮ್ಮ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸಿಕೊಂಡು ಗಟ್ಟಿಗೊಳಿಸಿದ್ದಾರೆ. ಹಾಗಾಗಿ ಯಡಿಯೂರಪ್ಪ ಅವರ ಸಂಘಟನ ಶಕ್ತಿಯನ್ನು ಪಕ್ಷ ಮುಂದೆಯೂ ಪರಿಣಾಮಕಾರಿಯಾಗಿ ಬಳಸಿಕೊಂಡು ರಾಜ್ಯದಲ್ಲಿ ಇನ್ನಷ್ಟು ಗಟ್ಟಿಯಾಗಿ ಪಕ್ಷವನ್ನು ಸಂಘಟಿಸಲು ಒತ್ತು ನೀಡಲಾಗಿದೆ ಎಂದು ಹೇಳಿದರು.

ನಿರಂತರ ಪ್ರವಾಸ ಆರೋಗ್ಯದ ಗುಟ್ಟು

ಯಡಿಯೂರಪ್ಪ ಅವರು ವಿಪಕ್ಷ ಸ್ಥಾನದಲ್ಲಿದ್ದಾಗಲೆಲ್ಲ ನಾನು ಜನರ ಬಳಿಗೆ ಹೋಗಿ ಬೀದಿಗಿಳಿದು ಹೋರಾಟ ನಡೆಸುತ್ತೇನೆ ಎಂಬ ಮಾತು ನಿರಂತರವಾಗಿ ಕೇಳಿಬರುತ್ತಿತ್ತು. ಅಂದರೆ ವಿಪಕ್ಷದಲ್ಲೇ ಸುದೀರ್ಘ‌ ಕಾಲ ಕಾರ್ಯ ನಿರ್ವಹಿಸಿರುವ ಯಡಿಯೂರಪ್ಪ ಅವರಿಗೆ ಇಂದಿಗೂ ರಾಜ್ಯ ಪ್ರವಾಸ ಮತ್ತು ಹೋರಾಟಕ್ಕೆ ಮೊದಲ ಆದ್ಯತೆ. ಯಡಿಯೂರಪ್ಪ ಅವರಷ್ಟು ರಾಜ್ಯವನ್ನು ಸುತ್ತಿದ ಮತ್ತೂಬ್ಬ ನಾಯಕರಿಲ್ಲ ಎಂಬುದನ್ನು ಎಲ್ಲರೂ ಒಪ್ಪುತ್ತಾರೆ. ಕಳೆದ ಲೋಕಸಭಾ ಚುನಾವಣೆ ಮತದಾನಕ್ಕೂ ಮುನ್ನ ‘ಉದಯವಾಣಿ’ ಕಚೇರಿಯಲ್ಲಿ ಸಂವಾದದಲ್ಲಿ ಪಾಲ್ಗೊಂಡಿದ್ದ ಯಡಿಯೂರಪ್ಪ ಅವರು ತಮ್ಮ ಆರೋಗ್ಯ ಗುಟ್ಟು ಬಿಚ್ಚಿಟ್ಟರು. ನಿರಂತರ ಪ್ರವಾಸವೇ ನನ್ನ ಆರೋಗ್ಯದ ಗುಟ್ಟು. ನಾನು ಒಂದೆಡೆ ಸುಮ್ಮನೆ ಕುಳಿತರೆ ಆರೋಗ್ಯ ಕೆಡುತ್ತದೆ. ಪ್ರವಾಸ ಮಾಡುತ್ತಿದ್ದರೆ ಯಾವುದೇ ಬಳಲಿಕೆ ಕಾಣದು ಎಂದು ಹೇಳಿದ್ದರು.
-ಎಂ.ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.