ಅನಿಶ್ಚಿತತೆಯ ನಡುವೆಯೂ ‘ವಿಶ್ವಾಸ’ದ ವಚನ
ಯಡಿಯೂರಪ್ಪ ನಡೆಗೆ ಮೈತ್ರಿ ದಂಗು; ಕಾಂಗ್ರೆಸ್-ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾದ ಬಿಎಸ್‌ವೈ ದಿಟ್ಟ ನಿಲುವು
Team Udayavani, Jul 27, 2019, 5:01 AM IST
ಬೆಂಗಳೂರು: ರಾಜಕೀಯ ಚದುರಂಗದಾಟದಲ್ಲಿ ಯಾವಾಗ, ಯಾರ ಕೈ ಮೇಲಾಗುತ್ತದೆಯೋ ಗೊತ್ತಿಲ್ಲ. ಶುಕ್ರವಾರದವರೆಗೂ ಅನಿಶ್ಚಿತತೆಯಲ್ಲಿಯೇ ಅಲೆದಾಡುತ್ತಿದ್ದ ಯಡಿಯೂರಪ್ಪ, ಬೆಳಗಾಗುವಷ್ಟರಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಪ್ರಮಾಣ ವಚನ ಸ್ವೀಕರಿಸಲು ತೀರ್ಮಾನಿಸಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರನ್ನು ದಂಗು ಬಡಿಸಿದೆ.
ಪಕ್ಷದ ನಾಯಕರ ವಿರುದ್ಧ ಬಂಡಾಯ ಸಾರಿದ್ದ 16 ಶಾಸಕರ ರಾಜೀನಾಮೆ ಅಂಗೀಕಾರ ಹಾಗೂ ಅನರ್ಹತೆ ಪ್ರಕರಣ ಸ್ಪೀಕರ್ ಅಂಗಳದಲ್ಲಿ ಇರುವುದರಿಂದ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುವುದು ಸುಲಭದ ಮಾರ್ಗವಲ್ಲ ಎಂದು ಎರಡೂ ಪಕ್ಷಗಳ ನಾಯಕರು ನಂಬಿಕೊಂಡಿದ್ದರು. ಯಡಿಯೂರಪ್ಪ ದಿಢೀರ್ ಪ್ರಮಾಣ ವಚನ ಸ್ವೀಕರಿಸುವ ನಿರ್ಧಾರ ತೆಗೆದುಕೊಂಡಿದ್ದು, ಮೈತ್ರಿ ಪಕ್ಷಗಳ ನಾಯಕರನ್ನು ಮೂಕವಿಸ್ಮಿತರನ್ನಾಗಿ ಮಾಡಿದೆ.
ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿಗೂ ಸ್ಪಷ್ಟ ಬಹುಮತ ಇಲ್ಲ. ರಾಜೀನಾಮೆ ಸಲ್ಲಿಸಿರುವ ಶಾಸಕರ ರಾಜೀನಾಮೆಯನ್ನು ಬಿಜೆಪಿಯ ನಡೆ ನೋಡಿ ಅಂಗೀಕರಿಸುವುದಾ ಅಥವಾ ತಿರಸ್ಕರಿಸುವುದಾ ಎನ್ನುವ ಲೆಕ್ಕಾಚಾರ ಕಾಂಗ್ರೆಸ್‌ನಿಂದ ಪರೋಕ್ಷವಾಗಿ ಸ್ಪೀಕರ್ ಮೂಲಕ ಮಾಡಿಸಲಾಗುತ್ತಿದೆ ಎಂಬ ಗುಮಾನಿ ಹಿನ್ನೆಲೆಯಲ್ಲಿ ಯಡಿಯೂರಪ್ಪ ದಿಟ್ಟ ನಿಲುವು ತೆಗೆದುಕೊಂಡಿರುವುದು, ಮೈತ್ರಿ ನಾಯಕರುಗಳಿಗೆ ನುಂಗಲಾರದ ತುತ್ತಾಗಿದೆ.
ರಾಜ್ಯಪಾಲರದು ನೈತಿಕ ನಡೆಯಲ್ಲ: ಸಂಖ್ಯಾಬಲದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿಲ್ಲ. ರಾಜೀನಾಮೆ ಸಲ್ಲಿಸಿರುವ ಶಾಸಕರ ಪ್ರಕರಣ ಇತ್ಯರ್ಥವಾಗಿಲ್ಲ. ಇಂತಹ ಸಂದರ್ಭದಲ್ಲಿ ರಾಜ್ಯಪಾಲರು ಯಾವುದನ್ನೂ ಪರಿಗಣಿಸದೆ ಏಕಾಏಕಿ ಒಂದೇ ದಿನದಲ್ಲಿ ಪ್ರಮಾಣ ವಚನ ಸ್ವೀಕರಿಸಲು ಆಹ್ವಾನಿಸಿದ್ದು, ನೈತಿಕವಾಗಿ ಸರಿಯಾದ ನಡೆಯಲ್ಲ ಎನ್ನುವುದು ಮೈತ್ರಿ ಪಕ್ಷಗಳ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಕಾಂಗ್ರೆಸ್ ನಾಯಕರು ರಾಜ್ಯಪಾಲರ ನಡೆಯನ್ನು ಖಂಡಿಸಿದ್ದಾರೆ. ಅಲ್ಲದೆ, ಇದೊಂದು ಸಂವಿಧಾನ ವಿರೋಧಿ ನಡೆ ಎಂದು ಆರೋಪಿಸಿದ್ದಾರೆ.
ಮೈತ್ರಿ ವಿರುದ್ಧ ಬಂಡಾಯ ಸಾರಿದ್ದ ಮೂವರು ಶಾಸಕರನ್ನು ಅನರ್ಹಗೊಳಿಸಿ, ಉಳಿದವರನ್ನು ವಾಪಸ್ ಕರೆಸಿಕೊಳ್ಳಬಹುದೆಂಬ ಮೈತ್ರಿ ನಾಯಕರ ಲೆಕ್ಕಾಚಾರ ತಲೆಕೆಳಗಾಗಿದೆ. ಆದರೆ, ಜುಲೈ 29ರಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಬಹುಮತ ಸಾಬೀತು ಪಡಿಸಬೇಕಾಗಿರುವುದರಿಂದ ಆಗೇನಾದರೂ ಚಮತ್ಕಾರಗಳು ನಡೆದು, ಬಿಜೆಪಿ ಸರ್ಕಾರ ಪತನವಾಗಬಹುದು ಎನ್ನುವ ಅಸ್ಪಷ್ಟ ಆಶಾ ಭಾವನೆಯನ್ನು ಮೈತ್ರಿ ಪಕ್ಷಗಳ ನಾಯಕರು ಇಟ್ಟುಕೊಳ್ಳುವಂತಾಗಿದೆ.
“ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಎಂಬ ನಾನು ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆ
ಹೊಂದಿರುತ್ತೇನೆಂದು, ನಾನು ಭಾರತದ ಸಾರ್ವಭೌಮತ್ವವನ್ನು, ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಮತ್ತು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ, ಅಂತ:ಕರಣ ಪೂರ್ವಕವಾಗಿ ನಿರ್ವಹಿಸುತ್ತೇನೆಂದು ಭಯ, ಪಕ್ಷಪಾತ ಇಲ್ಲದೆ, ರಾಗದ್ವೇಷ ಇಲ್ಲದೆ ಎಲ್ಲ ಬಗೆಯ ಜನರಿಗೆ ಸಂವಿಧಾನಕ್ಕೆ ಮತ್ತು ಕಾನೂನಿಗೆ ಅನುಸಾರವಾಗಿ ನ್ಯಾಯದಾನ ಮಾಡುತ್ತೇನೆಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ…’
ಕಾಂಗ್ರೆಸ್-ಜೆಡಿಎಸ್ ನಾಯಕರು ಗೈರು
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ
ಎಚ್.ಡಿ.ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ಹಾಗೂ
ಜೆಡಿಎಸ್‌ನ ಯಾವ ನಾಯಕರೂ ಯಡಿಯೂರಪ್ಪ ಅವರ ಪ್ರಮಾಣ ವಚನ
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿಲ್ಲ. ರಾಜ್ಯ ಸರ್ಕಾರದಿಂದ ಎಲ್ಲ ಶಾಸಕರು
ಹಾಗೂ ನಾಯಕರಿಗೂ ಸಮಾರಂಭಕ್ಕೆ ಹಾಜರಾಗುವಂತೆ ಅಧಿಕೃತ ಆಹ್ವಾನ
ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ಹೆಬ್ಬಾಳ್ಕರ್ ಕ್ಷಮೆ ಕೇಳದೆ ಹೋದ್ರೆ ಹತ್ಯೆ: ಸಿ.ಟಿ.ರವಿಗೆ ಬೆದರಿಕೆ ಪತ್ರ ರವಾನೆ
Naxal Surrender: ‘ಶರಣಾಗುವಾಗ ಬಂದೂಕು ಹಿಡಿದುಕೊಂಡು ಬರುತ್ತಾರಾ?’: ಡಿ.ಕೆ.ಶಿವಕುಮಾರ್
ಇಂದು ಜೆಡಿಎಸ್ ಸಭೆ: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗೆ ಒತ್ತು
Support Price: ಬೆಂಬಲ ಬೆಲೆ ಘೋಷಿಸದಿದ್ರೆ ರೈತ ಸಂಪರ್ಕ ಕೇಂದ್ರಕ್ಕೆ ಬೀಗ: ಆರ್.ಅಶೋಕ್
Actor Darshan: ಇಂದು ನಟ ದರ್ಶನ್ ಮೈಸೂರಿಗೆ ಆಗಮನ
MUST WATCH
ಹೊಸ ಸೇರ್ಪಡೆ
Threat: ಹೆಬ್ಬಾಳ್ಕರ್ ಕ್ಷಮೆ ಕೇಳದೆ ಹೋದ್ರೆ ಹತ್ಯೆ: ಸಿ.ಟಿ.ರವಿಗೆ ಬೆದರಿಕೆ ಪತ್ರ ರವಾನೆ
Daily Horoscope: ವಸ್ತ್ರ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ, ಆರೋಗ್ಯ ತಕ್ಕಮಟ್ಟಿಗೆ ಉತ್ತಮ
Naxal Surrender: ‘ಶರಣಾಗುವಾಗ ಬಂದೂಕು ಹಿಡಿದುಕೊಂಡು ಬರುತ್ತಾರಾ?’: ಡಿ.ಕೆ.ಶಿವಕುಮಾರ್
ಅಂಗಾಂಗ ದಾನ ಮಾಡುವ ನೌಕರರಿಗೆ 42 ದಿನ ಸಾಂದರ್ಭಿಕ ರಜೆ
Fraud: ಅರಣ್ಯ ಸಚಿವರ ಆಪ್ತನ ಸೋಗಿನಲ್ಲಿ 6 ಲಕ್ಷ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.