ರಾಜ್ಯದಲ್ಲಿ ಗಮನ ಸೆಳೆದ ಹಾವೇರಿ ಶಾಸಕರು


Team Udayavani, Jul 27, 2019, 9:30 AM IST

hv-tdy-1

ಹಾವೇರಿ: ಜಿಲ್ಲೆಯ ಆರು ಶಾಸಕರಲ್ಲಿ ನಾಲ್ವರು ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ಮುಂಚೂಣಿಯಲ್ಲಿದ್ದು, ರಾಜ್ಯ ರಾಜಕಾರಣದಲ್ಲಿ ಹಾವೇರಿ ಮತ್ತೆ ಗಮನ ಸೆಳೆಯುತ್ತಿದೆ.

ಹಿರಿಯ ಮುಖಂಡ ಸಿ.ಎಂ. ಉದಾಸಿ, ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಮೊದಲಿನಿಂದಲೂ ರಾಜ್ಯ ರಾಜಕಾರಣದಲ್ಲಿ ಹಿರಿಯರಾಗಿ ಗುರುತಿಸಿಕೊಂಡವರು. ಸಚಿವರಾಗಿ ಹಲವಾರು ವರ್ಷ ಸೇವೆ ಸಲ್ಲಿಸಿದ ರಾಜ್ಯಮಟ್ಟದಲ್ಲಿ ಬೆಳೆದವರು. ಇವರ ಜತೆಗೆ ಈಗ ಹಿರೇಕೆರೂರಿನ ಶಾಸಕ ಬಿ.ಸಿ. ಪಾಟೀಲ ಹಾಗೂ ಪಕ್ಷೇತರ ಶಾಸಕ ಆರ್‌. ಶಂಕರ್‌ ಇಬ್ಬರೂ ರಾಜ್ಯ ರಾಜಕಾರಣದಲ್ಲಿ ಬೇರೆಯದೇ ಆದ ರೀತಿಯಲ್ಲಿ ಗಮನ ಸೆಳೆದ ಶಾಸಕರಾಗಿದ್ದಾರೆ.

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದೇ ಬಹಿರಂಗವಾಗಿ ಅತೃಪ್ತಿ ಹೊರಹಾಕುವ ಮೂಲಕ ಹಾಗೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅತೃಪ್ತ ಶಾಸಕರ ಗುಂಪಿನಲ್ಲಿ ಗುರುತಿಸಿಕೊಳ್ಳುವ ಮೂಲಕ ಬಿ.ಸಿ. ಪಾಟೀಲ ಪ್ರಸ್ತುತ ರಾಜ್ಯ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ಇನ್ನೋರ್ವ ಶಾಸಕ ಆರ್‌. ಶಂಕರ್‌ ಆ ಪಕ್ಷ, ಈ ಪಕ್ಷ ಎಂದು ವಿವಿಧ ಪಕ್ಷಗಳಿಗೆ ಬೆಂಬಲ ಸೂಚಿಸಿ, ಈಗ ಶಾಸಕ ಸ್ಥಾನ ಅನರ್ಹತೆಗೆ ಒಳಗಾಗುವ ಮೂಲಕ ರಾಜ್ಯದ ಜನರ ಗಮನ ಸೆಳೆದಿದ್ದಾರೆ.

ಇಮ್ಮಡಿಯಾದ ಉತ್ಸಾಹ: ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಜಿಲ್ಲೆಯ ಈ ಪ್ರಭಾವಿ ಮುಖಂಡರಲ್ಲಿ ಉತ್ಸಾಹ ಇಮ್ಮಡಿಸಿದೆ. ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗಲೂ ಜಿಲ್ಲೆಯ ಸಿ.ಎಂ. ಉದಾಸಿ ಹಾಗೂ ಬಸವರಾಜ ಬೊಮ್ಮಾಯಿ ಇಬ್ಬರೂ ಅವರ ಜತೆಗಿದ್ದು ಸರ್ಕಾರ, ಪಕ್ಷ ಹಾಗೂ ರಾಜಕಾರಣದ ಎಲ್ಲ ಹಂತದಲ್ಲಿ ಮಾರ್ಗದರ್ಶನ ನೀಡುವ ಮಟ್ಟಿಗೆ ಆಪ್ತರಾಗಿದ್ದವರು. ಈಗ ಮತ್ತೆ ಈ ಇಬ್ಬರೂ ನಾಯಕರಿಗೆ ಸರ್ಕಾರದಲ್ಲಿ ಪ್ರಬಲ ಅಧಿಕಾರ ಸಿಗುವ ನಿರೀಕ್ಷೆ ಇದೆ.

ಜಿಲ್ಲೆಗೆ ನಾಲ್ಕು ಸಚಿವ ಸ್ಥಾನ: ಸಿ.ಎಂ. ಉದಾಸಿ ಹಾಗೂ ಬಸವರಾಜ ಬೊಮ್ಮಾಯಿ ಇಬ್ಬರೂ ಪ್ರಭಾವಿಗಳಾಗಿರುವುದರಿಂದ ಇಬ್ಬರೂ ಯಡಿಯೂರಪ್ಪ ಸರ್ಕಾರದಲ್ಲಿ ಪ್ರಮುಖ ಖಾತೆಯ ಸಚಿವ ಸ್ಥಾನ ಸಿಗುವುದು ಖಚಿತ ಎನ್ನಬಹುದಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಜಿಲ್ಲೆಗೆ ಎರಡು ಪ್ರಮುಖ ಖಾತೆಗಳ ಸಚಿವ ಸ್ಥಾನ ಸಿಕ್ಕಿತ್ತು. ಹಿರಿಯ ಮುಖಂಡ ಸಿ.ಎಂ. ಉದಾಸಿಯವರಿಗೆ ಲೋಕೋಪಯೋಗಿ ಖಾತೆ ಕೊಟ್ಟಿದ್ದರೆ ಬಸವರಾಜ ಬೊಮ್ಮಾಯಿಗೆ ನೀರಾವರಿ ಖಾತೆ ಕೊಡಲಾಗಿತ್ತು. ಸಿ.ಎಂ. ಉದಾಸಿಯವರಿಗೆ ಹಾವೇರಿ ಜಿಲ್ಲಾ ಉಸ್ತುವಾರಿ ಕೊಡಲಾಗಿತ್ತು. ಈಗ ಮತ್ತೆ ಅದೇ ರೀತಿ ಪ್ರಮುಖ ಖಾತೆಗಳ ಎರಡು ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂಬ ಲೆಕ್ಕಾಚಾರ ಜಿಲ್ಲೆಯಲ್ಲಿ ನಡೆದಿದೆ.

ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಸರ್ಕಾರಕ್ಕೆ ಕೈಕೊಟ್ಟು ಬಿಜೆಪಿ ಬೆಂಬಲಿಸಬಹುದಾದ ಶಾಸಕರ ಗುಂಪಿನಲ್ಲಿ ಗುರುತಿಸಿಕೊಂಡಿರುವ ಶಾಸಕ ಬಿ.ಸಿ. ಪಾಟೀಲ ಅವರಿಗೂ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ. ಇನ್ನು ಶಾಸಕ ಸ್ಥಾನದ ಅನರ್ಹತೆ ಶಿಕ್ಷೆಗೊಳಗಾದ ಆರ್‌. ಶಂಕರ್‌ ಅವರಿಗೂ ಸಾಧ್ಯಾಸಾಧ್ಯತೆ ಆಲೋಚಿಸಿ ವಿ.ಪ. ಸದಸ್ಯತ್ವ ನೀಡಿಯಾದರೂ ಸಚಿವ ಸ್ಥಾನ ನೀಡಬಹುದು ಎಂಬ ಚರ್ಚೆ ನಡೆದಿದೆ. ಹೀಗೆ ಜಿಲ್ಲೆಯ ನಾಲ್ವರು ಶಾಸಕರಿಗೆ ಯಡಿಯೂರಪ್ಪ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗಬಹುದು ಎಂಬ ಲೆಕ್ಕಾಚಾರ ಪಕ್ಷದ ವಲಯದಲ್ಲಿ ನಡೆದಿದೆ.

ಬಿಜೆಪಿ ಅವಧಿಯಲ್ಲಿ ಭರಪೂರ: ಈ ಹಿಂದೆ ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಗೆ ಭರಪೂರ ಸ್ಥಾನಮಾನ ದೊರಕಿತ್ತು. ಸಿ.ಎಂ. ಉದಾಸಿ ಹಾಗೂ ಬಸವರಾಜ ಬೊಮ್ಮಾಯಿ ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಇದರ ಜತೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಬುಡಕಟ್ಟು ಆಯೋಗದ ಅಧ್ಯಕ್ಷ ಸ್ಥಾನ ಹಾವೇರಿ ಶಾಸಕ ನೆಹರು ಓಲೇಕಾರ ಅವರಿಗೆ, ಮಲಪ್ರಭಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಸೋಮಣ್ಣ ಬೇವಿನಮರದ ಅವರಿಗೆ, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನವನ್ನು ಭೋಜರಾಜ ಕರೂದಿ ಅವರಿಗೆ ನೀಡಲಾಗಿತ್ತು. ಇಷ್ಟೇ ಅಲ್ಲ ಸೋಮಣ್ಣ ಬೇವಿನಮರದ ಅವರಿಗೆ ವಿಧಾನ ಪರಿಷತ್‌ ಸದಸ್ಯ ಸ್ಥಾನವನ್ನೂ ನೀಡಲಾಗಿತ್ತು.

‘ಕೈ’ ಅವಧಿಯಲ್ಲಿ ಕಡಿಮೆ: ಸಿದ್ದರಾಮಯ್ಯ ಸಿಎಂ ಆಗಿದ್ದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಜಿಲ್ಲೆಗೆ ಹೆಚ್ಚಿನ ರಾಜಕೀಯ ಸ್ಥಾನಮಾನ ಸಿಕ್ಕಿರಲಿಲ್ಲ. ಒಂದು ಸಚಿವ ಸ್ಥಾನ ಕೊಡಲು ಸಹ ಭಾರಿ ಮೀನಾಮೇಷ ಎಣಿಸಿ ಒಂದೂವರೆ ವರ್ಷದ ಬಳಿಕ ಹಾನಗಲ್ಲ ಶಾಸಕ ಮನೋಹರ ತಹಸೀಲ್ದಾರ್‌ ಅವರಿಗೆ ಸಚಿವ (ಅಬಕಾರಿ)ಸ್ಥಾನ ಕೊಟ್ಟು ವರ್ಷದೊಳಗೇ ಅವರಿಂದ ಸಚಿವ ಸ್ಥಾನ ವಾಪಸ್‌ ಪಡೆಯಲಾಗಿತ್ತು. ಬಳಿಕ ನಡೆದ ರಾಜಕೀಯ ತಲ್ಲಣಗಳ ನಡುವೆ (ಸಚಿವ ಪರಮೇಶ ನಾಯ್ಕ ರಾಜೀನಾಮೆ)ಲಂಬಾಣಿ ಸಮುದಾಯದವರಿಗೆ ಸಚಿವ ಸ್ಥಾನ ನೀಡುವ ಸಂದರ್ಭ ನಿರ್ಮಾಣವಾಗಿ ನಿರಾಯಾಸವಾಗಿ ಹಾವೇರಿ ಕ್ಷೇತ್ರದ ಶಾಸಕ ರುದ್ರಪ್ಪ ಲಮಾಣಿಯವರಿಗೆ ಸಚಿವ ಸ್ಥಾನ ಒಲಿದಿತ್ತು.2018ರಲ್ಲಿ ಬಂದ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಸರ್ಕಾರದ ಅವಧಿಯಲ್ಲಂತೂ ಜಿಲ್ಲೆಗೆ ಹೆಚ್ಚಿನ ಸ್ಥಾನಮಾನ ಮರೀಚಿಕೆಯಾಗಿತ್ತು. ಆರ್‌. ಶಂಕರ್‌ಗೆ ಬಿಟ್ಟರೆ ಬೇರೆ ಯಾರಿಗೂ ಸಚಿವ ಸ್ಥಾನ ಸಿಗಲಿಲ್ಲ. ಆರಂಭದಿಂದಲೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಬಿ.ಸಿ. ಪಾಟೀಲ ಇದೇ ಕಾರಣಕ್ಕಾಗಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಈಗ ಇತಿಹಾಸ.

ಒಟ್ಟಾರೆ ಈ ಬಾರಿ ಬಿಜೆಪಿ ಸರ್ಕಾರ ರಚನೆಗೂ ಮೊದಲೇ ಜಿಲ್ಲೆಗೆ ಹೆಚ್ಚು ಸಚಿವ ಸ್ಥಾನ ಹಾಗೂ ಇತರೆ ಸ್ಥಾನಮಾನ ಲಭಿಸುವ ನಿರೀಕ್ಷೆ ಹೆಚ್ಚಾಗಿದೆ. ಶಾಸಕರು, ಮುಖಂಡರು ವಿವಿಧ ಸ್ಥಾನಮಾನಕ್ಕಾಗಿ ಪಕ್ಷದ ಗಮನಸೆಳೆಯಲು ಮುಂದಾಗಿದ್ದಾರೆ.

 

•ಎಚ್.ಕೆ. ನಟರಾಜ

ಟಾಪ್ ನ್ಯೂಸ್

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.