ಯಾರಿಗೆ ಒಲಿಯುತ್ತೆ ಪಟ್ಟ?
•ಪಾಟೀಲ, ಕಳಕಪ್ಪ ಬಂಡಿ ಹೆಸರು ಮುಂಚೂಣಿ•ಅಚ್ಚರಿ ಬೆಳವಣಿಗೆಯಲ್ಲಿ ಲಮಾಣಿಗೆ ಮಣೆ?
Team Udayavani, Jul 27, 2019, 9:39 AM IST
ಗದಗ: ಬರೋಬ್ಬರಿ 14 ತಿಂಗಳ ಬಳಿಕ ಬಿ.ಎಸ್. ಯಡಿಯೂರಪ್ಪ ಶುಕ್ರವಾರ ಸಂಜೆ ರಾಜಭವನದ ಗಾಜಿನ ಮನೆಯಲ್ಲಿ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಜಿಲ್ಲೆಯ ಯಾವ ಶಾಸಕರಿಗೆ ಉಸ್ತುವಾರಿ ಹಾಗೂ ಸಚಿವ ಸ್ಥಾನ ಪಟ್ಟ ದೊರೆಯುತ್ತದೆ ಎಂಬುದು ಚರ್ಚೆಗೆ ಗ್ರಾಸವಾಗಿದೆ.
ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅತೃಪ್ತ ಶಾಸಕರ ರಾಜೀನಾಮೆಯಿಂದ ಅಲ್ಪಮತಕ್ಕೆ ಕುಸಿದು, ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಅಧಿಕಾರ ಕಳೆದುಕೊಳ್ಳುವಂತಾಯಿತು. ಇದರ ಬೆನ್ನಲ್ಲೇ ಹೊಸ ಸರ್ಕಾರ ರಚನೆಗೆ ಮುಂದಾಗಿರುವ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ಶುಕ್ರವಾರ ಸಂಜೆ ರಾಜ್ಯದ 19ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೀಗಾಗಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಗದಗ ಹೊರತುಪಡಿಸಿ ಇನ್ನುಳಿದ ಮೂರರಲ್ಲಿ ಬಿಜೆಪಿ ಶಾಸಕರಿದ್ದು, ಯಾರಿಗೆ ಒಲಿಯಲಿದೆ ಮಂತ್ರಿಗಿರಿ ಎಂಬ ಚರ್ಚೆಗಳು ಜೋರಾಗಿವೆ.
ಸಚಿವ ಸ್ಥಾನದ ರೇಸ್‌ನಲ್ಲಿ ನರಗುಂದ ಶಾಸಕ ಸಿ.ಸಿ. ಪಾಟೀಲ, ರೋಣ ಕ್ಷೇತ್ರದ ಕಳಕಪ್ಪ ಬಂಡಿ ಅವರ ಹೆಸರುಗಳು ಮುಂಚೂಣಿಯಲ್ಲಿವೆ. 2008ರಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗಿ ಉಭಯ ನಾಯಕರು ಸಚಿವರಾಗಿದ್ದರಿಂದ ಸಹಜವಾಗಿಯೇ ಈ ಮಾತುಗಳು ಕೇಳಿ ಬರುತ್ತಿವೆ. ಅದರಲ್ಲೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಪ್ತರಲ್ಲಿ ಒಬ್ಬರಾಗಿರುವ ಸಿ.ಸಿ. ಪಾಟೀಲ್ ಬಿಜೆಪಿ ಹಾಲಿ ಜಿಲ್ಲಾಧ್ಯಕ್ಷರಾಗಿದ್ದಾರೆ. 2004, 2008 ಮತ್ತು 2018ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2008ರಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಸಂಸದೀಯ ಕಾರ್ಯದರ್ಶಿಯಾಗಿ (2008-2010), ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾಗಿ (2010-2012) ಕಾರ್ಯನಿರ್ವಹಿಸಿದ್ದಾರೆ.
ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ಆಪ್ತರಾದ ರೋಣ ಶಾಸಕ ಕಳಕಪ್ಪ ಬಂಡಿ, 2004, 2008 ಮತ್ತು 2018ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2008ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಗದೀಶ ಶೆಟ್ಟರ್ ನೇತೃತ್ವದ ಸಚಿವ ಸಂಪುಟದಲ್ಲಿ ಸಂಪುಟ ದರ್ಜೆ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಕೆಲಸ ಮಾಡಿದ್ದ ಅನುಭವವಿದ್ದು, ಅವರೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.
ಈಗಾಗಲೇ ಕೇಂದ್ರ ಸರಕಾರ ಸಂಪುಟದಲ್ಲಿ ಬಿಜೆಪಿ ಹೊಸಬರಿಗೆ ಮಣೆ ಹಾಕುವ ಮೂಲಕ ಇಡೀ ದೇಶವನ್ನೇ ಬೆರಗಾಗಿಸಿತ್ತು. ಅದರಂತೆ ಶಿರಹಟ್ಟಿ (ಮೀಸಲು) ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾಗಿರುವ ರಾಮಣ್ಣ ಲಮಾಣಿ ಅವರಿಗೆ ಅನಿರೀಕ್ಷಿತ ಬೆಳವಣಿಗೆಯಲ್ಲಿ ಸಚಿವ ಸ್ಥಾನದ ಭಾಗ್ಯ ಬಾಗಿಲು ತಟ್ಟಿದರೂ ಅಚ್ಚರಿಯಿಲ್ಲ ಎನ್ನಲಾಗುತ್ತಿದೆ.
ಮತ್ತೂಂದೆಡೆ ಕಾಂಗ್ರೆಸ್-ಜೆಡಿಎಸ್‌ನ ಅತೃಪ್ತ ಶಾಸಕರಿಗೆ ಬಿಜೆಪಿ ಸರಕಾರದಲ್ಲಿ ಮಂತ್ರಿಸ್ಥಾನ ನೀಡಲಾಗುತ್ತದೆ ಎಂಬ ಮಾತು ಕೇಳಿ ಬರುತ್ತಿದೆ. ಒಂದೊಮ್ಮೆ ಅದು ನಿಜವಾದರೆ, ಬಿಜೆಪಿ ಶಾಸಕರಿಗಿಂತ ಹೊರಗಿನವರಿಗೆ ಮೊದಲ ಆದ್ಯತೆ ನೀಡಬೇಕಾಗುತ್ತದೆ. ಅದರಂತೆ 2018ರ ವಿಧಾನಸಭೆ ಚುನಾವಣೆಯಲ್ಲಿ ಗದಗ ಮತಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಗೆಲುವು ಸಾಧಿಸುವಲ್ಲಿ ಸಫಲವಾಗಿತ್ತು. ಬಳಿಕ ಅಸ್ಥಿತ್ವಕ್ಕೆ ಬಂದ ಕಾಂಗ್ರೆಸ್-ಜೆಡಿಎಸ್ ಸರಕಾರದಲ್ಲಿ ನಾನಾ ಕಾರಣಗಳಿಂದಾಗಿ ಶಾಸಕ ಎಚ್.ಕೆ.ಪಾಟೀಲ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡಿರಲಿಲ್ಲ. ಬಿಜೆಪಿ ಸರಕಾರದಲ್ಲೂ ಅಂತಹ ಪರಿಸ್ಥಿತಿಯೇ ಎದುರಾಗಿ, ಪ್ರದೇಶ, ಜಾತಿ, ಹಿರಿತನದ ಲೆಕ್ಕಾಚಾರದಲ್ಲಿ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ತಪ್ಪುವ ಸಾಧ್ಯತೆಗಳನ್ನೂ ತಳ್ಳಿಹಾಕಲಾಗದು ಎಂದು ವಿಶ್ಲೇಷಿಸಲಾಗುತ್ತಿದೆ.
ಇನ್ನು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗದಗ ಮತಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಹಾಗೂ ಬಿ. ಶ್ರೀರಾಮುಲು ಅವರ ಶಿಷ್ಯ ಅನಿಲ್ ಮೆಣಸಿನಕಾಯಿಗೆ ನಿಗಮ ಮಂಡಳಿಯೊಂದರ ಅಧ್ಯಕ್ಷ ಸ್ಥಾನ ಒಲಿಯಲಿದೆ ಎನ್ನುತ್ತಿವೆ ಪಕ್ಷದ ಮೂಲಗಳು.
•ವಿಶೇಷ ವರದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.