ಶಮಿಗೆ ಸಿಗದ ಅಮೇರಿಕಾ ವೀಸಾ: ಬಿಸಿಸಿಐ ಮಧ್ಯಪ್ರವೇಶ
Team Udayavani, Jul 27, 2019, 12:12 PM IST
ಹೊಸದೆಹಲಿ: ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಅಮೇರಿಕಾ ವೀಸಾ ನಿರಾಕರಿಸಿದ್ದು, ಬಿಸಿಸಿಐ ಮಧ್ಯಪ್ರವೇಶದಿಂದ ಸಮಸ್ಯೆ ಬಗೆಹರಿದಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಭಾರತ ಕ್ರಿಕೆಟ್ ತಂಡ ಆಗಸ್ಟ್ ಮೂರರಿಂದ ವೆಸ್ಟ್ ಇಂಡೀಸ್ ನಲ್ಲಿ ಟಿ ಟ್ವೆಂಟಿ, ಏಕದಿನ, ಟೆಸ್ಟ್ ಸರಣಿ ಆಡಲಿದೆ.
ಕೌಟುಂಬಿಕ ವಿಚಾರಗಳಿಗಾಗಿ ಮೊಹಮ್ಮದ್ ಶಮಿಯ ಮೇಲೆ ಪೊಲೀಸ್ ಕೇಸುಗಳಿರುವುದರಿಂದ ಅಮೇರಿಕಾ ವೀಸಾ ನೀಡಲು ನಿರಾಕರಣೆ ಮಾಡಿತ್ತು. ನಂತರದ ಬೆಳವಣಿಗೆಯಲ್ಲಿ ಬಿಸಿಸಿಐ ಅಧಿಕಾರಿಗಳು ಮಧ್ಯಪ್ರವೇಶ ಮಾಡಿ ಅಮೇರಿಕಾದ ರಾಯಭಾರಿ ಕಚೇರಿಗೆ ಪತ್ರ ಬರೆದಿದ್ದು, ಶಮಿ ಕೇಸುಗಳ ವಿವಾದ ಈಗ ಬಗೆಹರಿದಿದೆ ಎಂದು ಮನವರಿಕೆ ಮಾಡಲಾಗಿದೆ ಎಂದು ವರದಿಯಾಗಿದೆ.
ಬಂಗಾಲ ಮೂಲದ ಕ್ರಿಕೆಟರ್ ಶಮಿ ಮತ್ತು ಪತ್ನಿ ಹಸೀನ್ ಜಹಾನ್ ನಡುವೆ ವೈಮನಸ್ಸಿನ ವಿಚಾರವಾಗಿ ಪತ್ನಿ ಕೋರ್ಟ್ ಮೆಟ್ಟಿಲೇರಿದ್ದರು. ನಂತರ ಸತತವಾಗಿ ಮಾಧ್ಯಮಗಳ ಮುಂದೆ ಶಮಿಯ ಮೇಲೆ ಆರೋಪಗಳ ಸುರಿಮಳೆಗರೆಯುತ್ತಿದ್ದರು.
ಕೌಟುಂಬಿಕ ವಿವಾದಗಳಿಂದ ಬೇಸತ್ತಿದ್ದ ಶಮಿ ಕಳಪೆ ಪ್ರದರ್ಶನ ನೀಡಿ ವರ್ಷಗಳ ಕಾಲ ಟೀಂ ಇಂಡಿಯಾದಿಂದ ದೂರವಾಗಿದ್ದರು. ಆದರೆ ನಂತರ ಉತ್ತಮ ಫಿಟ್ ನೆಸ್ ಮಾಡಿ, ಫಾರ್ಮ್ ಗೆ ಮರಳಿದ ಶಮಿ ಇತ್ತೀಚೆಗಷ್ಟೇ ನಡೆದ ವಿಶ್ವಕಪ್ ನಲ್ಲಿ ಕೇವಲ ನಾಲ್ಕು ಪಂದ್ಯಗಳಲ್ಲಿ 14 ವಿಕೆಟ್ ಪಡೆದು ಮಿಂಚಿದ್ದರು.
ಭಾರತ ವೆಸ್ಟ್ ಇಂಡೀಸ್ ವಿರುದ್ದ ಮೂರು ಟಿ ಟ್ವೆಂಟಿ, ಮೂರು ಏಕದಿನ ಮತ್ತು ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಮೊದಲೆರಡು ಟಿ ಟ್ವೆಂಟಿ ಪಂದ್ಯಗಳು ಫ್ಲೋರಿಡಾದಲ್ಲಿ ನಡೆಯಲಿದೆ.
ಪತ್ನಿ ಹಸಿನ್ ಜಹಾನ್ ಜೊತೆ ಶಮಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.