ಬಾಲ್ಯವಿವಾಹ ನಡೆಯದಂತೆ ಕ್ರಮ ವಹಿಸಿ
ಪ್ರಗತಿ ಪರಿಶೀಲನಾ ಸಭೆ•ಬಾಲ್ಯ ವಿವಾಹ ತಡೆಗೆ ಸ್ಥಳೀಯರ ಸಹಾಯ ಪಡೆಯಿರಿ-ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ
Team Udayavani, Jul 27, 2019, 1:24 PM IST
ದಾವಣಗೆರೆ: ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ದಾವಣಗೆರೆ: ಬಾಲ್ಯವಿವಾಹಗಳೇ ನಡೆಯದಂತೆ ಆಂದೋಲನದ ರೀತಿಯಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿದ್ದಾರೆ.
ಶುಕ್ರವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ-2005, ಸ್ವಾಧಾರ ಯೋಜನೆ, ಬಾಲ್ಯ ವಿವಾಹ ನಿಷೇಧ ಯೋಜನೆ, ಸ್ಥೈರ್ಯನಿಧಿ, ಮಹಿಳಾ ವಿಶೇಷ ಘಟಕ, ರಾಜ್ಯ ಮಹಿಳಾ ನಿಲಯ ಸಂಸ್ಥೆಯ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂರಕ್ಷಣಾಧಿಕಾರಿ ಪೂರ್ಣಿಮಾ, ಜಿಲ್ಲೆಯಲ್ಲಿ ಕಳೆದ ಜೂನ್ ಅಂತ್ಯಕ್ಕೆ ಒಟ್ಟು 35 ಬಾಲ್ಯ ವಿವಾಹ ಪ್ರಕರಣ ದಾಖಲಾಗಿವೆ. 33 ಬಾಲ್ಯ ವಿವಾಹ ತಡೆಗಟ್ಟಲಾಗಿದೆ. 2 ಬಾಲ್ಯ ವಿವಾಹ ನಡೆದಿದ್ದು, ಎಫ್‌ಐಆರ್ ದಾಖಲಿಸಲಾಗಿದೆ. 5 ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿ, ಇಬ್ಬರು ಮಕ್ಕಳಿಗೆ ವಿದ್ಯಾಭ್ಯಾಸ ಮುಂದುವರೆಸಲಾಗಿದೆ ಮಾಹಿತಿ ನೀಡಿದರು.
ಬಾಲ್ಯ ವಿವಾಹ ಜರುಗುತ್ತಿದೆ ಎಂಬ ಮಾಹಿತಿ ಮೇರೆಗೆ ಬಾಲ್ಯವಿವಾಹವನ್ನು ತಡೆಯುವುದಕ್ಕಿಂತ ಎಲ್ಲಿಯೂ ಬಾಲ್ಯವಿವಾಹಗಳೇ ಆಗದಂತೆ ಇಲಾಖೆ, ಸ್ವಯಂ ಸೇವಾ ಸಂಸ್ಥೆ, ಸಾರ್ವಜನಿಕರ ಸಹಭಾಗಿತ್ವದಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಸೂಚಿಸಿದರು.
ಹೆಚ್ಚಾಗಿ ಬಾಲ್ಯವಿವಾಹ ನಡೆಯುತ್ತವೆ ಎಂಬ ಪ್ರದೇಶ ಗುರುತಿಸಿ ಜಾಗೃತಿ ಕಾರ್ಯಕ್ರಮ ಏರ್ಪಡಿಸಬೇಕು. ಬಾಲ್ಯ ವಿವಾಹ ಗುರುತಿಸಿ ಮಾಹಿತಿ ನೀಡಲು ಪ್ರೋತ್ಸಾಹಧನದ ಆಧಾರದಲ್ಲಿ ಸ್ಥಳೀಯರನ್ನೇ ನಿಯೋಜಿಸಿಕೊಳ್ಳಬಹುದು. ಪ್ರತಿ ಗ್ರಾಮದ ಪಂಚಾಯ್ತಿ ಸದಸ್ಯರು, ಮುಖ್ಯೋಪಾಧ್ಯಾಯರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಸ್ಥಳೀಯರನ್ನೊಳಗೊಂಡ ಸಮಿತಿ ರಚಿಸಿ ಜಾಗೃತಿ ಹಾಗೂ ಬಾಲ್ಯ ವಿವಾಹ ನಡೆಯದಂತೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಲ್ಲಿ ಬಾಲ್ಯವಿವಾಹ ಸಂಪೂರ್ಣ ತಡೆ ಸಾಧ್ಯವಾಗುತ್ತದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಎಚ್. ವಿಜಯ್‌ಕುಮಾರ್ ಮಾತನಾಡಿ, ಬಾಲ್ಯ ವಿವಾಹ ನಿಷೇಧದ ಕುರಿತು ಎಲ್ಲಾ ಕಡೆ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.
ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ ಜಿಲ್ಲೆಯಲ್ಲಿ ದೌರ್ಜನ್ಯ, ಕೌಟುಂಬಿಕ ಹಿಂಸೆಯಂತಹ ಪ್ರಕರಣಗಳಡಿ ಒಟ್ಟು 24 ಪ್ರಕರಣ ದಾಖಲಾಗಿದ್ದು, 6 ಪ್ರಕರಣ ಡಿಎಆರ್ ಕೋರ್ಟಿನಲ್ಲಿವೆ. 8 ಪ್ರಕರಣಗಳನ್ನು ಇಲಾಖೆಯ ಸಂರಕ್ಷಣಾಧಿಕಾರಿ ಇತ್ಯರ್ಥಪಡಿಸಿದ್ದಾರೆ. ಕಾಯ್ದೆ ಪ್ರಕಾರ ಪ್ರಕರಣ ದಾಖಲಾದ 60 ದಿನಗಳಲ್ಲಿ ವಿಲೇವಾರಿ ಆಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಎಚ್. ವಿಜಯ್‌ಕುಮಾರ್ ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಭು ಎನ್.ಬಡಿಗೇರ್ ಮಾತನಾಡಿ, ನ್ಯಾಯಾಲಯಗಳಲ್ಲಿ ಅತಿ ಹೆಚ್ಚಿನ ಪ್ರಕರಣಗಳಿರುವುದರಿಂದ ಈ ರೀತಿಯ ವಿಳಂಬವಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಪ್ರಕರಣಗಳ ಶೀಘ್ರ ವಿಲೇವಾರಿಗೆ ಕ್ರಮ ವಹಿಸಲಾಗುವುದು ಎಂದರು.
ಜೂನ್ ಅಂತ್ಯದವರೆಗೆ ಅತ್ಯಾಚಾರಕ್ಕೊಳಗಾದ 18 ವರ್ಷದೊಳಗಿನ ಮೂರು ಮಕ್ಕಳು ಹಾಗೂ 18 ರಿಂದ 35 ವರ್ಷದೊಳಗಿನವರ ಇಬ್ಬರು ಸೇರಿದಂತೆ ಒಟ್ಟು 5 ಪ್ರಕರಣ ದಾಖಲಿಸಲಾಗಿದೆ ಎಂದು ವಿಜಯ್‌ಕುಮಾರ್ ತಿಳಿಸಿದರು.
ಅತ್ಯಾಚಾರ ಮತ್ತು ಇತರೆ ದೌರ್ಜನ್ಯಕ್ಕೀಡಾದ ಹೆಣ್ಣುಮಕ್ಕಳಿಗೆ ನೀಡುವ ಸ್ಥೈರ್ಯನಿಧಿ ಯೋಜನೆಯಡಿ ನಿಗದಿತ ಸಮಯದೊಳಗೆ ನೀಡಲು ಅವಶ್ಯಕವಾದ ಎಫ್‌ಎಸ್‌ಎಲ್ ವರದಿಯನ್ನು ಬೇಗ ತರಿಸಿಕೊಂಡು ಶೀಘ್ರ ಸೌಲಭ್ಯ ನೀಡುವಂತೆ ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಸೂಚಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಂ.ಎಸ್. ರಾಘವೇಂದ್ರಸ್ವಾಮಿ, ಜಿಲ್ಲಾ ಆಸ್ಪತ್ರೆ ಅಧೀಕ್ಷಕಿ ಡಾ| ನೀಲಾಂಬಿಕೆ, ಬಾಲಕರ ಸರ್ಕಾರಿ ಬಾಲ ಭವನದ ಅಧೀಕ್ಷಕ ಮಹಾಂತಸ್ವಾಮಿ ವಿ.ಪೂಜಾರ್, ಬಾಲಕಿಯರ ಸರ್ಕಾರಿ ಬಾಲ ಭವನದ ಅಧೀಕ್ಷಕಿ ವೈ.ಆರ್. ಯಶೋಧಮ್ಮ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ವೈ. ರಾಮನಾಯ್ಕ, ವಕೀಲೆ ಮಂಜುಳಾ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.