ಕಾಲುವೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ

ನೀರು ಸಂರಕ್ಷಿಸುವ ಕೆಲಸವಾಗಲಿ•ಕೃಷಿಯಲ್ಲಿ ಆಧುನಿಕತೆ ಅಳವಡಿಸಿಕೊಳ್ಳಲು ಸಲಹೆ

Team Udayavani, Jul 27, 2019, 3:08 PM IST

27-July-29

ಹೊಳಲ್ಕೆರೆ: ಜಲಶಕ್ತಿ ಅಭಿಯಾನ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮವನ್ನು ಈಚಘಟ್ಟದ ಸಿದ್ದವೀರಪ್ಪ ಹಾಗೂ ಸಹಾಯಕ ಕೃಷಿ ನಿರ್ದೇಶಕಿ ಭಾರತಿ ಉದ್ಘಾಟಿಸಿದರು.

ಹೊಳಲ್ಕೆರೆ: ಭದ್ರಾ ಮೇಲ್ದಂಡೆ ಕಾಲುವೆ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಬೇಕು ಎಂದು ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಈಚಘಟ್ಟದ ಸಿದ್ದವೀರಪ್ಪ ಸರಕಾರವನ್ನು ಆಗ್ರಹಿಸಿದರು.

ಪಟ್ಟಣದಲ್ಲಿ ತಾಲೂಕು ಕೃಷಿ ಇಲಾಖೆ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಲಶಕ್ತಿ ಅಭಿಯಾನ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ತೀವ್ರವಾಗಿರುವ ಬರಗಾಲ ಕಾಣಿಸಿಕೊಂಡಿದೆ. ಅದೇ ಮಾದರಿಯಲ್ಲಿ ಜಿಲ್ಲೆಯಲ್ಲಿ ಬರಗಾಲ ಕಾಣಿಸಿಕೊಂಡಿದೆ. ನೂರು ವರ್ಷಗಳ ಇತಿಹಾಸದಲ್ಲಿ 70 ವರ್ಷಗಳ ಕಾಲ ಬರ ಕಾಣಿಸಿಕೊಳ್ಳಲು ನಿಗದಿತವಾಗಿರುವ ಪ್ರಮಾಣದಲ್ಲಿ ಮಳೆಯಾಗದಿರುವುದು. ಜತೆಗೆ ನೀರನ್ನು ಸಂರಕ್ಷಣೆ ಮಾಡಿಕೊಳ್ಳದೆ ನೀರಿನ ಬಗ್ಗೆ ಅರಿವಿಲ್ಲದೆ ಅಪವ್ಯಯ ಮಾಡುವ ಮನೋಭಾವದಿಂದಾಗಿ ನೀರಿಲ್ಲದೆ ಬರಗಾಲ ಅನುಭವಿಸುವಂತಾಗಿದೆ. ಹಾಗಾಗಿ ಪ್ರತಿಯೊಬ್ಬರು ನೀರಿನ ಬಗ್ಗೆ ಜಾಗೃತರಾಗಬೇಕು. ನೀರನ್ನು ಸಾಧ್ಯವಾದಷ್ಟು ಸಂರಕ್ಷಣೆ ಮಾಡುವ ಮೂಲಕ ಉಳಿಸುವ ಕೆಲಸ ಆಗಬೇಕು ಎಂದರು.

ಕೃಷಿ ಇಲಾಖೆ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದೆ. ನೀರು ಸಂಗ್ರಹಕ್ಕೆ ಬೇಕಾದ ಯೋಜನೆಗಳನ್ನು ನೀಡುತ್ತಿದೆ. ರೈತರು ಯೋಜನೆ ಪ್ರಯೋಜನ ಪಡೆದು ನೀರು ಸಂರಕ್ಷಣೆ ಮಾಡಿಕೊಳ್ಳಬೇಕು. ಆ ಮೂಲಕ ಕೃಷಿಯನ್ನು ಮಾಡುವ ಕಲೆ ಬೆಳೆಸಿಕೊಳ್ಳಬೇಕು. ಇಲ್ಲವಾದಲ್ಲಿ ಕೃಷಿ ಕ್ಷೇತ್ರ ಕಣ್ಮರೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕೃಷಿ ಸಂಶೋಧಕ ಹಾಗೂ ವಿಜ್ಞಾನಿ ಓಂಕಾರಪ್ಪ ಮಾತನಾಡಿ, ಆಧುನಿಕರಣ ಹೆಚ್ಚಾದಂತೆ ಕೃಷಿಯಲ್ಲಿ ಸಾಕಷ್ಟು ಬದಲಾವಣೆ ಕಾಣಿಸಿಕೊಂಡಿದೆ. ಕೃಷಿ ಉತ್ಪಾದನೆಯಲ್ಲಿ ಸಾಕಷ್ಟು ಏರಿಕೆಯಾಗಿದೆ. ಜತೆಗೆ ಸಾಂಪ್ರದಾಯಿಕ ಕೃಷಿ ಪದ್ಧತಿಗಿಂತ ಹೊಸ ಪದ್ಧತಿಗಳಿಂದ ಕೃಷಿ ಕ್ಷೇತ್ರ ಹೆಚ್ಚು ಆದಾಯ ತರುವಂತಾಗಿದೆ. ಪ್ರತಿಯೊಬ್ಬರು ಕೃಷಿಯನ್ನು ವ್ಯಾಪಾರೀಕರಣದಿಂದ ನೋಡುವ ಸ್ಥಿತಿ ಹೆಚ್ಚಾಗಿದೆ ಎಂದರು.

ಇಂದು ಕೃಷಿ ಕ್ಷೇತ್ರಕ್ಕೆ ಮಾರಕ ಎನ್ನುವಂತ ರೋಗ ಕಾಣಿಸಿಕೊಳ್ಳುತ್ತಿವೆ. ರೋಗಗಳಿಗೆ ಸೂಕ್ತ ನಿಯಂತ್ರಣಕ್ಕೆ ಪರಿಹಾರ ಕಂಡುಕೊಳ್ಳಬೇಕು. ಕಾಲಕಾಲಕ್ಕೆ ರೋಗ ನಿಯಂತ್ರಣಕ್ಕೆ ಔಷಧಗಳನ್ನು ಬಳಕೆ ಮಾಡಬೇಕು. ಈ ಭಾಗದಲ್ಲಿ ಕಾಣಿಸಿಕೊಂಡಿರುವ ಸೈನಿಕ ಹುಳು, ಅಡಿಗೆ ಬೆಳೆಗೆ ಕೊಳೆ ರೋಗ, ದಾಳಿಂಬೆಗೆ ಕಾಯಿಕೊರಕ ರೋಗ ಹಲವಾರು ರೋಗಗಳು ಬೆಳೆಯನ್ನು ಬಾಧಿಸುತ್ತಿವೆ. ಅವುಗಳನ್ನು ನಿಯಂತ್ರಿಸಲು ಸೂಕ್ತ ಮಾರ್ಗದರ್ಶನ ಬೇಕು ಎಂದರು.

ಸಹಾಯಕ ಕೃಷಿ ನಿರ್ದೇಶಕಿ ಭಾರತಿ ಮಾತನಾಡಿ, ಸರಕಾರ ಕೃಷಿ ಇಲಾಖೆಯ ಮೂಲಕ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಕೃಷಿ ಭಾಗ್ಯ, ಬೀಜ, ಗೊಬ್ಬರ, ಕ್ರಿಮಿನಾಶಕ, ಕೃಷಿ ಹೊಂಡ, ತಾಡಪಲ್, ಪೈಂಪು, ಬೇಸಾಯ ಪರಿಕರ, ಟ್ರ್ಯಾಕ್ಟರ್‌ ಪರಿಕರ ಸೇರಿದಂತೆ ಹಲವಾರು ಸೌಲಭ್ಯಗಳಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ರೈತರಿಗೆ ಸಲಹೆ ನೀಡಿದರು.

ಕೃಷಿ ಸಮಾಜದ ಅಧ್ಯಕ್ಷ ಮಹೇಶ್ವರಪ್ಪ, ತಾಪಂ ಸದಸ್ಯರಾದ ಶಿವಕುಮಾರ, ಗಿರಿಜಾ ಅಜ್ಜಯ್‌, ಕೃಷಿ ಇಲಾಖೆ ತಾಂತ್ರಿಕ ಸಹಾಯಕ ಗೋಪಿಕೃಷ್ಣ, ಕೃಷಿಕರಾದ ಈ.ಗಂಗಮ್ಮ, ತಾಲೂಕು ರೈತ ಸಂಘದ ಅಧ್ಯಕ್ಷ ಬಸವರಾಜಪ್ಪ, ರೈತ ಮುಖಂಡ ಗುರುಮೂರ್ತಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.