ಕಾರ್ಗಿಲ್ ವಿಜಯೋತ್ಸವ ಆಚರಣೆ: ಮಡಿಕೇರಿಯಲ್ಲಿ ರಕ್ತದಾನ ಶಿಬಿರ


Team Udayavani, Jul 28, 2019, 5:15 AM IST

kargil

ಮಡಿಕೇರಿ: ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತ ವಿಶ್ವ ಹಿಂದೂ ಪರಿಷತ್‌ ಹಾಗೂ ಭಜರಂಗದಳ ವತಿಯಿಂದ ಜಿಲ್ಲಾಸ್ಪತ್ರೆ ಮತ್ತು ಅಶ್ವಿ‌ನಿ ಆಸ್ಪತ್ರೆ ಸಹಯೋಗದೊಂದಿಗೆ ಮಡಿಕೇರಿಯ ಅಶ್ವಿ‌ನಿ ಆಸ್ಪತ್ರೆ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಿತು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ನಗರದ ಆರ್‌ ಆರ್‌ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ‌ ಡಾ.ನವೀನ್‌ಕುಮಾರ್‌ ಭಾರತೀಯ ಸೈನ್ಯದ ಶೌರ್ಯ, ಸೈನಿಕರ ಸಾಹಸವನ್ನು ಜಗತ್ತಿಗೆ ಪರಿಚಯಿಸಿದ್ದು ಕಾರ್ಗಿಲ್ ಯುದ್ದ. ಭಾರತೀಯ ಸೇನೆಯ ಪರಾಕ್ರಮ ಹಾಗೂ ದೇಶ ರಕ್ಷಣೆ ಮಾಡುವ ಸಲುವಾಗಿ ಅವರ ತ್ಯಾಗ ಹಾಗೂ ಬಲಿದಾನಗಳನ್ನು ಕಾರ್ಗಿಲ್ ವಿಜಯೋತ್ಸವ ದಿನ ನೆನಪಿಸುತ್ತದೆ ಎಂದರು.

ಯುದ್ಧದ ಸಂದರ್ಭದಲ್ಲಿ ದೇಶದ ಹೆಮ್ಮೆ ಮತ್ತು ನಾಗರಿಕರ ಭದ್ರತೆಗಾಗಿ ವೀರತ್ವದಿಂದ ಹೋರಾಡಿದ ನಮ್ಮ ಕೆಚ್ಚೆದೆಯ ಯೋಧರನ್ನು ಪ್ರತಿದಿನವೂ ನೆನಪಿಸಿಕೊಳ್ಳಬೇಕು. ಕಾಯಿಲೆ ಬಂದಾಗ ವೈದ್ಯರ ನೆನಪಾಗುವಂತೆ ಯುದ್ದ ಬಂದಾಗ ಮಾತ್ರ ಯೋಧರ ನೆನಪಾಗಬಾರದು. ದೇಶಪ್ರೇಮ ಎಂಬುದು ಬರೀ ಬಾಯಿ ಮಾತಿನಲ್ಲಿರದೆ ಎಲ್ಲರ ತನು ಮನದಲ್ಲೂ ಇರಬೇಕು ಎಂದು ಡಾ.ನವೀನ್‌ಕುಮಾರ್‌ ಕರೆ ನೀಡಿದರು.

ರಕ್ತನಿಧಿ ವೈದ್ಯಾಧಿಕಾರಿ ಕರುಂಬಯ್ಯ ಮಾತನಾಡಿ, ರಕ್ತದಾನದಿಂದ ರಕ್ತದ ಅವಶ್ಯಕತೆ ಇರುವವರಿಗೆ ಮಾತ್ರ ಲಾಭವಾಗುವುದಿಲ್ಲ. ರಕ್ತದಾನಿಗಳೂ ತಮ್ಮ ಆರೋಗ್ಯ ವೃದ್ದಿಸಿಕೊಳ್ಳಬಹುದು. ಇದರಿಂದ ರಕ್ತದಾನ ಮಾಡಿದವರಲ್ಲಿ ಹೊಸ ರಕ್ತ ಕಣಗಳು ಉತ್ಪತ್ತಿಯಾಗುತ್ತವೆ. ಜೊತೆಗೆ ಹೃದಯಾಘಾತದ ಸಂಭವ, ರಕ್ತದಲ್ಲಿ ಕೊಬ್ಬಿನ ಅಂಶ ಕಡಿಮೆಯಾಗುತ್ತದೆ. ಆದ್ದರಿಂದ ರಕ್ತದಾನ ಮಾಡಲು ಹಿಂಜರಿಯಬಾರದು. ದಾನ ಮಾಡಿದ ವ್ಯಕ್ತಿಯಲ್ಲಿ ಶುದ್ದ ರಕ್ತ ಮತ್ತೆ 3 ತಿಂಗಳಲ್ಲಿ ಪುನಃ ಉತ್ಪತ್ತಿಯಾಗುತ್ತದೆ. ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡುವ ಮೂಲಕ ಅಮೂಲ್ಯ ಜೀವವನ್ನು ಉಳಿಸಬಹುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಶ್ವಿ‌ನಿ ಆಸ್ಪತ್ರೆಯ ಆಡಳಿತಾಧಿಕಾರಿ ಶೆಣೈ, ಮೈ ಕೊರೆವ ಚಳಿಯಲ್ಲಿ, ರಕ್ತ ಹೆಪ್ಪುಗಟ್ಟಿಸುವ ಹಿಮದ ರಾಶಿಯ ನಡುವೆ ಉಗ್ರರೊಂದಿಗೆ ವೀರಾವೇಶದಿಂದ ಹೋರಾಡಿ, ಮಾತೃಭೂಮಿಗಾಗಿ ಸಾವಿರಾರು ಸೈನಿಕರು ಮಣ್ಣಲ್ಲಿ ಮಣ್ಣಾದ ದಿನವನ್ನು ಎಲ್ಲೆಡೆ ಅಭಿಮಾನದಿಂದ ಆಚರಿಸಲಾಗುತ್ತಿದೆ ಎಂದು ಕರುಂಬಯ್ಯ ಹೇಳಿದರು.

ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.

ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್‌ ಜಿಲ್ಲಾ ಕಾರ್ಯದರ್ಶಿ ಡಿ.ನರಸಿಂಹ, ಬಜರಂಗದಳ ಜಿಲ್ಲಾ ಸಂಚಾಲಕ ಚೇತನ್‌, ಅಶ್ವಿ‌ನಿ ಆಸ್ಪತ್ರೆಯ ವೈದ್ಯರಾದ ಡಾ.ಕುಲಕರ್ಣಿ ಮತ್ತಿತರರು ಹಾಜರಿದ್ದರು

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.