ಶಿಕ್ಷಣಕ್ಕಿಂತ ಕೌಶಲವೇ ಬದುಕಿಗೆ ಆಧಾರ

•ಧಾರವಾಡ ಐಐಐಟಿ ಪ್ರಥಮ ಘಟಿಕೋತ್ಸವ•29 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Team Udayavani, Jul 28, 2019, 9:54 AM IST

hubali-tdy-3

ಧಾರವಾಡ: ಸತ್ತೂರಿನ ಡಾ| ಡಿ. ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಜರುಗಿದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಧಾರವಾಡ: ನಮ್ಮ ಶಿಕ್ಷಣ ಪದ್ಧತಿ ಬದಲಾಗಲೇಬೇಕಿದ್ದು, ಪ್ರಾಥಮಿಕ ಹಂತದಲ್ಲಿಯೇ ಮಕ್ಕಳಿಗೆ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಕಲಿಸಬೇಕು. ಈ ಮೂಲಕ ಅವರ ಮುಂದಿನ ಭವಿಷ್ಯಕ್ಕೆ ದಾರಿ ಮಾಡಿಕೊಡುವ ಕುರಿತು ಚಿಂತನೆ ನಡೆಯಬೇಕು ಎಂದು ಮೈಂಡ್‌ ಟ್ರೀ ಸಂಸ್ಥೆ ಸಂಸ್ಥಾಪಕ ಸುಬ್ರೊತೊ ಬಾಗ್ಚಿ ಹೇಳಿದರು.

ಸತ್ತೂರಿನ ಡಾ| ಡಿ. ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಜರುಗಿದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ(ಐಐಐಟಿ)ಯ ಮೊದಲ ಘಟಿಕೋತ್ಸವದಲ್ಲಿ ಘಟಿಕೋತ್ಸವ ಭಾಷಣ ಮಾಡಿದ ಅವರು, ಶಿಕ್ಷಣಕ್ಕಿಂತ ಕೌಶಲ್ಯವೇ ನಮ್ಮ ಬದುಕಿಗೆ ಆಧಾರವಾಗಲಿದೆ. ಆದ್ದರಿಂದ ಪ್ರತಿಯೊಬ್ಬರಲ್ಲೂ ಕೌಶಲ್ಯ ಅಗತ್ಯವಾಗಿ ಬೇಕು ಎಂದರು.

ಮಾಹಿತಿ ತಂತ್ರಜ್ಞಾನ ಹೊರತುಪಡಿಸಿ ಇಂದಿನ ಯುಗವನ್ನು ಊಹಿಸಲು ಸಾಧ್ಯವಿಲ್ಲ. ಇಡೀ ಜಗತ್ತಿನಲ್ಲಿ ಎಲ್ಲ ದೇಶಗಳು ವಿನೂತನ ತಂತ್ರಜ್ಞಾನ ಅಳವಡಿಸಿಕೊಂಡಿದ್ದು, ಮನುಷ್ಯನ ಜೀವನದಲ್ಲಿ ಐಟಿ-ಬಿಟಿ ಹಾಸುಹೊಕ್ಕಾಗಿದೆ.ಪ್ರಸ್ತುತ ಎಲ್ಲರೂ ವೈಟ್ಕಾಲರ್‌ ನೌಕರಿಗಳೇ ಬೇಕೆಂದು ಹಠ ಹಿಡಿಯುತ್ತಿರುವುದು ಸಹ ನಿರುದ್ಯೋಗ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು.

ಭಾರತ ದೇಶದಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಸಂಖ್ಯೆ ಇಡೀ ಸಿಂಗಾಪುರದ ಜನಸಂಖ್ಯೆಯಷ್ಟು. ಶಾಲೆಯಿಂದ ಹೀಗೆ ಹೊರಗುಳಿಯುವ ಮಕ್ಕಳಲ್ಲಿ ಯಾವುದೇ ರೀತಿಯ ಕೌಶಲ್ಯ ಇರದ ಕಾರಣ ಯಾವ ನಿರ್ದಿಷ್ಟ ಉದ್ಯೋಗಕ್ಕೂ ಹೊಂದಿಕೊಳ್ಳದೇ ಕೊನೆಗೆ ನಿರುದ್ಯೋಗಿಗಳಾಗುತ್ತಿದ್ದಾರೆ. ಈ ಸಮಸ್ಯೆ ಭಾರತವನ್ನು ಪಿಡುಗಾಗಿ ಕಾಡುತ್ತಿದ್ದು, ಅಭಿವೃದ್ಧಿಗೆ ತೊಡಕಾಗಿದೆ ಎಂದು ವಿಶ್ಲೇಷಿಸಿದರು.

ಐಐಟಿ, ಐಐಐಟಿ ಅಂತಹ ಉನ್ನತ ಸಂಸ್ಥೆಗಳಿಂದ ಹೊರಹೊಮ್ಮಿದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅನುಭವದ ಆಧಾರದ ಮೇಲೆ ಸ್ವ ಉದ್ಯೋಗ ಸೃಷ್ಟಿಸಿಕೊಳ್ಳಬೇಕು. ಹತ್ತಾರು ಜನರಿಗೆ ಉದ್ಯೋಗ ಒದಗಿಸಬೇಕು. ಎಲ್ಲ ಪದವೀಧರರೂ ಉತ್ತಮ ಕಂಪನಿಗಳಲ್ಲಿ ನೌಕರಿ ಬೇಕೆಂದು ಕಾಯದೇ ಸ್ವಯಂ ಉದ್ಯೋಗ ಸೃಷ್ಟಿಸಿಕೊಂಡು ಉತ್ತಮ ಭವಿಷ್ಯ ಕಂಡುಕೊಳ್ಳಬೇಕು ಎಂದರು.

ಇನ್ಫೋಸಿಸ್‌ ಫೌಂಡೇಷನ್‌ ಮುಖ್ಯಸ್ಥೆ ಸುಧಾ ಮೂರ್ತಿ ಮಾತನಾಡಿ, ಶೈಕ್ಷಣಿಕ ಬದುಕು ಮುಗಿಸಿ ಔದ್ಯೋಗಿಕ ಬದುಕಿಗೆ ಹೆಜ್ಜೆ ಇಡುತ್ತಿದ್ದು, ಇನ್ಮುಂದೆ ನಿಮ್ಮ ನಿಜವಾದ ಬದುಕು ಶುರುವಾಗಲಿದೆ. ಉನ್ನತ ಮೌಲ್ಯಗಳು, ಪ್ರಾಮಾಣಿಕತೆ ಹಾಗೂ ಪ್ರೀತಿಯಿಂದ ಕೆಲಸ ಮಾಡಿ. ತಂದೆ-ತಾಯಿ, ಶಿಕ್ಷಕರಿಗೆ ಎಂದೆಂದಿಗೂ ಗೌರವ ಕೊಡಿ ಎಂದು ಕಿವಿಮಾತು ಹೇಳಿದರು.

ಐಐಐಟಿ ನಿರ್ದೇಶಕ ಪ್ರೊ| ಕವಿ ಮಹೇಶ, ಮೌಲ್ಯಮಾಪನ ಕುಲಸಚಿವ ಡಾ| ಜಗದೀಶ ಡಿ.ಎನ್‌. ಇದ್ದರು. ಮಾಯಾ ರಾಮನ್‌ ನಿರೂಪಿಸಿದರು. ಪ್ರೊ| ಎಸ್‌. ಬಸವರಾಜಪ್ಪ ವಂದಿಸಿದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.