ವಿದ್ಯುತ್‌ ಸ್ಪರ್ಶಿಸಿ ಲೈನ್‌ಮನ್‌ ಸಾವು-ಆಕ್ರೋಶ

•ಘಟನೆ ಖಂಡಿಸಿ ವಿವಿಧ ಗ್ರಾಮಸ್ಥರ ಪ್ರತಿಭಟನೆ•ಮೃತ ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹ

Team Udayavani, Jul 28, 2019, 11:13 AM IST

bg-tdy-3

ಬೈಲಹೊಂಗಲ: ರೈತನ ಜಮೀನಿನಲ್ಲಿ ವಿದ್ಯುತ್‌ ಪರಿಕರ ದುರಸ್ತಿಗೊಳಿಸುತ್ತಿದ್ದ ವೇಳೆ ಲೈನ್‌ಮನ್‌ ವಿದ್ಯುತ್‌ ಸ್ಪರ್ಶಿಸಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಗುಡದೂರ ಮತ್ತು ಸಂಗೊಳ್ಳಿ ಗ್ರಾಮಗಳ ಮಧ್ಯೆ ಶನಿವಾರ ನಡೆದಿದೆ.

ತಾಲೂಕಿನ ಕೆಂಗಾನೂರ ಗ್ರಾಮದ ಶರೀಫ ಶಬ್ಬೀರ ನದಾಫ್‌ (25) ಮೃತ ಲೈನ್‌ಮನ್‌ ಎಂದು ಗುರುತಿಸಲಾಗಿದೆ. ಈತ ಸಂಗೊಳ್ಳಿ ಗ್ರಾಮದ ಹದ್ದಿನಲ್ಲಿರುವ ರೈತನ ಜಮೀನಲ್ಲಿ ವಿದ್ಯುತ್‌ ಪರಿಕರ ದುರಸ್ತಿಗೊಳಿಸುತ್ತಿದ್ದರು. ಪರಿಕರದಿಂದ ಏಕಾಏಕಿ ವಿದ್ಯುತ್‌ ಸರಬರಾಜುಗೊಂಡಿದ್ದರಿಂದ ವಿದ್ಯುತ್‌ ಕಂಬದ ಪರಿಕರ ಮೇಲೆ ಬಿದ್ದು ಸುಟ್ಟು ಭಸ್ಮವಾಗಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಮಲ್ಲಮ್ಮನ ಬೆಳವಡಿ ಹೆಸ್ಕಾಂ ಶಾಖಾಧಿಕಾರಿ ಎಲ್.ಎಫ್‌. ದಾಸರ, ಮೃತಪಟ್ಟ ಸಿಬ್ಬಂದಿ ಶವವನ್ನು ವಿದ್ಯುತ್‌ ಪರಿಕರದಿಂದ ಬಿಡಿಸಿ ಕೆಳಗಿಳಿಸಿದರು. ಇದನ್ನು ಕಂಡ ಗ್ರಾಮಸ್ಥರು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಲೈನ್‌ಮನ್‌ ಮೃತಪಟ್ಟಿದ್ದಾನೆಂದು ಆರೋಪಿಸಿ ಶಾಖಾಧಿಕಾರಿ ದಾಸರ ಅವರನ್ನು ಥಳಿಸಿ ವಾಹನ ಜಖಂಗೊಳಿಸಿದರು. ಥಳಿತಕ್ಕೊಳಗಾದ ಶಾಖಾಧಿಕಾರಿ ಘಟನಾ ಸ್ಥಳದಿಂದ ಪರಾರಿಯಾದರು. ಇದರಿಂದ ಆಕ್ರೋಶಗೊಂಡ ಕೆಂಗಾನೂರ, ಗುಡದೂರ, ಸಂಗೊಳ್ಳಿ ಗ್ರಾಮಸ್ಥರು ಇದ್ದಕ್ಕಿದ್ದಂತೆ ಬೀದಿಗಿಳಿದು ಪ್ರತಿಭಟನೆ ಆರಂಭಿಸಿದರು. ವಿಷಯ ತಿಳಿದು ಸ್ಥಳಕ್ಕೆ ಬಂದ ಡಿವೈಎಸ್ಪಿ ಜೆ.ಎಂ. ಕರುಣಾಕರಶೆಟ್ಟಿ, ಸಿಪಿಐ ಮಂಜುನಾಥ ಕುಸುಗಲ್ಲ, ಪಿಎಸ್‌ಐ ಎಂ.ಎಸ್‌. ಹೂಗಾರ ಪ್ರತಿಭಟನಾಕಾರರ ಮನವೊಲಿಸಿದರು. ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು. ಇಷ್ಟಕ್ಕೂ ಜಗ್ಗದ ಗ್ರಾಮಸ್ಥರು ಹೆಸ್ಕಾಂ ಮೇಲಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮೃತಪಟ್ಟ ಲೈನ್‌ಮನ್‌ಗೆ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿದರು.

ಈ ವೇಳೆ ಸಂಗೊಳ್ಳಿ ಗ್ರಾಮದ ಯುವ ಮುಖಂಡ ನಾಗರಾಜ ಬಡಿಗೇರ ಮಾತನಾಡಿ, ಮೃತ ಲೈನ್‌ಮನ್‌ ಮಲ್ಲಮ್ಮನ ಬೆಳವಡಿ ಗ್ರಾಮದ ಹೆಸ್ಕಾಂ ಶಾಖೆಗೆ ಎರಡು ವರ್ಷಗಳ ಹಿಂದೆಯೇ ಸೇರಿದ್ದರು. ಅಲ್ಲಿಂದ ಸಂಗೊಳ್ಳಿ ಶಾಖೆಗೆ ಬಂದು ಎರಡು ತಿಂಗಳು ಸೇವೆ ಆರಂಭಿಸಿದ್ದರು. ಗ್ರಾಹಕರೊಂದಿಗೆ ಉತ್ತಮ ಒಡನಾಟ ಇಟ್ಟುಕೊಂಡಿದ್ದರು. ಹೆಸ್ಕಾಂನವರ ನಿರ್ಲಕ್ಷ್ಯದಿಂದ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಮೃತಪಟ್ಟಿರುವುದು ನೋವಿನ ಸಂಗತಿಯಾಗಿದೆ ಎಂದರು.

ನಂತರ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ಮಾದೇಶ ಮಾತನಾಡಿ, ಘಟನೆ ಕುರಿತು ಠಾಣೆಯಲ್ಲಿ ದೂರು ದಾಖಲಾಗಿದೆ. ಹೆಸ್ಕಾಂ ನಿಮಗದ ನಿಯಮಾನುಸಾರ ಮೃತ ಲೈನ್‌ಮನ್‌ ಕುಟುಂಬಕ್ಕೆ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಆಗ ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟರು. ಎಇಇ ಅಣ್ಣಪ್ಪಾ ಲಮಾಣಿ, ವಿದ್ಯುತ್‌ ಪರಿವೀಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು. ಘಟನಾ ಸ್ಥಳದಲ್ಲಿ ನೂರಾರು ಯುವಕರು, ಗ್ರಾಮಸ್ಥರು ಜಮಾಯಿಸಿದ್ದರು. ಬೈಲಹೊಂಗಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

IPL 2024: Pant has the ambition to become India’s cricket captain: Parth Jindal

IPL 2025: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

13-

Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.