ಸಂಸ್ಕೃತಿ ಇಲ್ಲದ ವ್ಯಕ್ತಿ ಸತ್ತ ಹೆಣಕ್ಕಿಂತ ಕೀಳು
Team Udayavani, Jul 28, 2019, 2:52 PM IST
ಸೇಡಂ: ನೃಪತುಂಗ ಪದವಿ ಮಹಾ ವಿದ್ಯಾಲಯ ಆವರಣದಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಸಮಗ್ರ ಶೈಕ್ಷಣಿಕ ಚಿಂತನಾ ಸಮಾವೇಶದಲ್ಲಿ ಬೀದರ ಚಿದಂಬರ ಮಠದ ಡಾ| ಶಿವಕುಮಾರ ಸ್ವಾಮೀಜಿ ಮಾತನಾಡಿದರು.
ಸೇಡಂ: ಸಂಸ್ಕಾರ, ಸಂಸ್ಕೃತಿ, ಸಭ್ಯತೆ ಅರಿವಿಲ್ಲದೆ ಎಷ್ಟೇ ದೊಡ್ಡ ವ್ಯಕ್ತಿಯಾದರೂ ಆತ ಸತ್ತ ಹೆಣಕ್ಕಿಂತ ಕೀಳು ಎಂದು ಬೀದರ ಚಿದಂಬರ ಮಠದ ಡಾ| ಶಿವಕುಮಾರ ಸ್ವಾಮೀಜಿ ಹೇಳಿದರು.
ಪಟ್ಟಣದ ನೃಪತುಂಗ ಪದವಿ ಮಹಾ ವಿದ್ಯಾಲಯ ಆವರಣದಲ್ಲಿ ಶ್ರೀ ಕೊತ್ತಲ ಬಸವೇಶ್ವರ ಶಿಕ್ಷಣ ಸಮಿತಿ ಮತ್ತು ವಿಕಾಸ ಅಕಾಡೆಮಿ ವತಿಯಿಂದ ಏರ್ಪಡಿಸಿದ್ದ ಕಲ್ಯಾಣ ಕರ್ನಾಟಕ ಸಮಗ್ರ ಶೈಕ್ಷಣಿಕ ಚಿಂತನಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣ ಸಂಸ್ಥೆಗಳು ಮೌಲ್ಯಯುತ ಶಿಕ್ಷಣ ನೀಡುವಲ್ಲಿ ಎಡವುತ್ತಿವೆ. ಇದರ ದುಷ್ಪರಿಣಾಮ ದೇಶದ ಸಂಸ್ಕೃತಿ ಮೇಲೆ ಬೀಳುತ್ತಿದೆ. ಶಿಕ್ಷಣ ಸಂಸ್ಥೆಗಳು ಈ ನಿಟ್ಟಿನಲ್ಲಿ ಗಂಭೀರವಾಗಿ ಚರ್ಚಿಸುವ ಅವಶ್ಯಕತೆ ಇದೆ ಎಂದರು.
ರಾಜಕೋಟನ ಅತ್ಮಿಯಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ| ಆನಂದ ಜೋಷಿ ಮಾತನಾಡಿ, ಭಾರತ ಅತಿ ಹೆಚ್ಚು ಎಂಜಿನಿಯರ್ ಮತ್ತು ಡಾಕ್ಟರ್‌ಗಳನ್ನು ಲೋಕಕ್ಕೆ ನೀಡುತ್ತಿದೆ ಎಂದು ಹೇಳಿದರು.
ಶಿವಲಿಂಗೇಶ್ವರ ಸ್ವಾಮೀಜಿ, ಶಂಕರಾನಂದ ಸ್ವಾಮೀಜಿ, ವಿಜಯಪುರ ಚಾಣಕ್ಯ ಕರಿಯರ್ ಅಕಾಡೆಮಿ ಮುಖ್ಯಸ್ಥ ಎನ್.ಎಂ. ಬಿರಾದಾರ, ವಿಕಾಸ ಅಕಾಡೆಮಿ ಮುಖ್ಯಸ್ಥ ಡಾ| ಬಸವರಾಜ ಪಾಟೀಲ ಸೇಡಂ, ಸಂಪನ್ಮೂಲ ವ್ಯಕ್ತಿಗಳಾದ ಉಪನ್ಯಾಸಕಿ ಲೀಲಾ ಕಾರಟಗಿ, ಸಿ.ಆರ್. ಆನಂದ, ಮುಕುಂದ ಮೈಗೂರು, ಸುರೇಶ ಕುಲಕರ್ಣಿ, ಯು. ಭೀಮರಾವ್, ನರೇಂದ್ರ ಬಡಶೇಷಿ, ವಿವೇಕಾನಂದ, ಸಯಿದಾ, ಕನಕವಲ್ಲಿ, ಡಾ| ಹೇಮಲತಾ ಹಾಜರಿದ್ದರು.
ಉಪನ್ಯಾಸಕ ಜಗದೀಶ ಕಡಬಗಾಂವ ನಿರೂಪಿಸಿದರು, ಬಸವರಾಜ ಮಾಲಿಪಾಟೀಲ ವಂದಿಸಿದರು. ನಂತರ ವಿವಿಧ ಶಾಲಾ ಕೋಣೆಗಳಲ್ಲಿ ಕಲಬುರಗಿ, ಯಾದಗಿರಿ, ರಾಯಚೂರು, ಬೀದರ ಜಿಲ್ಲೆಗಳಿಂದ ಆಗಮಿಸಿದ ನೂರಾರು ಶಿಕ್ಷಕರು ಮತ್ತು ಪಾಲಕರಿಗೆ ತರಬೇತಿ ನೀಡಲಾಯಿತು.
ಸಮಾರೋಪ ಸಮಾರಂಭ: ಮಧ್ಯಾಹ್ನ ಸಮಾರೋಪ ಸಮಾರಂಭ ನಡೆಯಿತು. ವಿಜಯಪುರ ಚಾಣಕ್ಯ ಕರಿಯರ್ ಅಕಾಡೆಮಿ ಮುಖ್ಯಸ್ಥ ಎನ್.ಎಂ. ಬಿರಾದಾರ ಮಾತನಾಡಿದರು.
ವಿಕಾಸ ಅಕಾಡೆಮಿ ಮುಖ್ಯಸ್ಥ ಡಾ| ಬಸವರಾಜ ಪಾಟೀಲ ಸೇಡಂ ಮಾತನಾಡಿ, 2025ಕ್ಕೆ ಜರುಗುವ ಸ್ವರ್ಣ ಜಯಂತಿ ಕಾರ್ಯಕ್ರಮಕ್ಕೂ ಮುನ್ನ ಒಂದು ಕೋಟಿ ಸಸಿ ನೆಡುವ ಉದ್ದೇಶ ಹೊಂದಲಾಗಿದೆ ಎಂದರು.
ರೇಣುಕಾ ತಾಡೇಪಲ್ಲಿ ವೈಯಕ್ತಿಕ ಗೀತೆ ಹಾಡಿದರು, ಶಶಿಕಾಂತ ಕುಲಕರ್ಣಿ ಸ್ವಾಗತಿಸಿದರು, ಡಾ| ಬಿದರಿ ಚಂದ್ರಕಲಾ ನಿರೂಪಿಸಿದರು, ಭೀಮರೆಡ್ಡಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.