ಸಂಸ್ಕೃತಿ ಬಿಂಬಿಸುವ ಅರ್ಥಪೂರ್ಣ ಕಾರ್ಯಕ್ರಮಗಳು ಮಾದರಿ: ಚಂದ್ರಹಾಸ ಶೆಟ್ಟಿ


Team Udayavani, Jul 28, 2019, 3:42 PM IST

mumbai-tdy-2

ಮುಂಬಯಿ, ಜು. 27: ಬಂಟ ಸಮಾಜದ ಶ್ರೇಯೋಭಿವೃದ್ಧಿಗೆ ಬಂಟರ ಸಂಘವು ಹಗಲಿರುಳು ಶ್ರಮಿಸುತ್ತಿದೆ. ಸಮಾಜದ ಆರ್ಥಿಕವಾಗಿ ಹಿಂದುಳಿದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ದೃಷ್ಟಿಯಿಂದ ಕೋಟ್ಯಂತರ ರೂ.ಗಳನ್ನು ವ್ಯಯಿಸುತ್ತಿದೆ. ಬಂಟರ ಸಂಘದ ಆವರಣದಲ್ಲಿ ಉನ್ನತ ಶಿಕ್ಷಣ ಸಂಕುಲವಿದ್ದು, ಇಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಕೋರ್ಸ್‌ಗಳು ಲಭ್ಯವಿದೆ. ಪೊವಾಯಿಯ ಎಸ್‌ಎಂ ಶೆಟ್ಟಿ ಕಾಲೇಜಿನಲ್ಲೂ ರಿಯಾಯಿತಿಯಲ್ಲಿ ಶಿಕ್ಷಣವನ್ನು ಒದಗಿಸಲಾಗುತ್ತಿದೆ. ಇವೆಲ್ಲವುಗಳ ಸದುಪಯೋಗವನ್ನು ಸಮಾಜ ಬಾಂಧವರು ಪಡೆದುಕೊಳ್ಳಬೇಕು. ನವಿಮುಂಬಯಿ ಪ್ರಾದೇಶಿಕ ಸಮಿತಿಯು ಪ್ರಾರಂಭದಿಂದಲೇ ಸಮಾಜಪರ ಕಾರ್ಯಕ್ರಮಗಳಿಂದ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಇಂದು ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರದೊಂದಿಗೆ ಆಟಿದ ಅಟಿಲ್ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿರುವ ಸಂತೋಷ ತಂದಿದೆ. ಇದರಿಂದ ನಾಡಿನ ಸಂಸ್ಕೃತಿ, ಸಂಸ್ಕಾರಗಳು, ಆಚಾರ-ವಿಚಾರಗಳು ಇಂದಿನ ಮಕ್ಕಳಿಗೆ ತಿಳಿಯಲು ಸಾಧ್ಯವಾಗುತ್ತಿದೆ ಎಂದು ಬಂಟರ ಸಂಘ ಮುಂಬಯಿ ಉಪಾಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ ಅವರು ನುಡಿದರು.

ಜು. 24ರಂದು ಸಿಬಿಡಿಯ ಹೊಟೇಲ್ ಅಶ್ವಿ‌ತ್‌ ಬ್ಯಾಂಕ್ವೆಟ್‌ನಲ್ಲಿ ಬಂಟರ ಸಂಘ ನವಿಮುಂಬಯಿ ಪ್ರಾದೇಶಿಕ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ಆಟಿದ ಅಟಿಲ್ ವಿಶೇಷ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದಿನ ಕಾರ್ಯಕ್ರಮದಲ್ಲಿ ಮಹಿಳೆಯರು ಉತ್ಸಾಹದಿಂದ ಪಾಲ್ಗೊಂಡಿರುವುದನ್ನು ಕಂಡಾಗ ಸಂತೋಷವಾಗುತ್ತಿದೆ. ಆಟಿ ತಿಂಗಳ ಮಹತ್ವವನ್ನು ಸಾರುವ ಇಂತಹ ಕಾರ್ಯಕ್ರಮಗಳಿಗೆ ವಿಶೇಷ ಮಹತ್ವವಿದೆ. ಸಂಘದ ಶಿಕ್ಷಣ ಯೋಜನೆಗಳು ಸೇರಿದಂತೆ ಇನ್ನಿತರ ಸಮಾಜಪರ ಯೋಜನೆಗಳ ಯಶಸ್ಸಿಗೆ ಎಲ್ಲರ ಸಹಕಾರ ಸದಾಯಿರಲಿ ಎಂದು ನುಡಿದು ಶುಭ ಹಾರೈಸಿದರು.

ಲೀಲಾಧರ ಶೆಟ್ಟಿ ಪಾದೂರು ಅವರು ಆಟಿ ತಿಂಗಳ ಮಹತ್ವವನ್ನು ವಿವರಿಸಿದರು. ಅತಿಥಿ-ಗಣ್ಯರು ಮಕ್ಕಳಿಗೆ ಶೈಕ್ಷಣಿಕ ನೆರವು ವಿತರಿಸಿ ಶುಭ ಹಾರೈಸಿದರು. ಆಟಿದ ಅಟಿಲ್ ಕಾರ್ಯಕ್ರಮದ ಅಡುಗೆ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಗಣ್ಯರು ಬಹುಮಾನ ವಿತರಿಸಿದರು.

ಬಂಟರ ಸಂಘ ಮಧ್ಯ ವಲಯ ಪ್ರಾದೇಶಿಕ ಸಮಿತಿಗಳ ಸಮನ್ವಯಕ ಇಂದ್ರಾಳಿ ದಿವಾಕರ ಶೆಟ್ಟಿ ಇವರು ಮಾತನಾಡಿ, ಬಂಟರ ಸಂಘದಲ್ಲಿ ನವರತ್ನದಂತೆ ಒಂಭತ್ತು ಪ್ರಾದೇಶಿಕ ಸಮಿತಿಗಳು ಶೋಭಿಸುತ್ತಿವೆಯಾದರೂ ಮೊದಲ ಪ್ರಾದೇಶಿಕ ಸಮಿತಿ ಎಂಬ ಹೆಗ್ಗಳಿಕೆಗೆ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಪಾತ್ರವಾಗಿದೆ. ಇದೊಂದು ಮಾದರಿ ಸಮಿತಿ ಎನ್ನಬಹುದು. ಬಂಟರು ತಾವು ಬದುಕುವುದರೊಂದಿಗೆ ಇತರರಿಗೂ ಬದುಕಲು ಪ್ರೇರಣೆ ನೀಡುವವರಾಗಿದ್ದಾರೆ. ಪಾಲಕರು ಮಕ್ಕಳನ್ನು ಆದಷ್ಟು ವಿದ್ಯಾವಂತರನ್ನಾಸಲು ಮುಂದಾಗಬೇಕು ಎಂದರು.

ಬಂಟರ ಸಂಘ ಮುಂಬಯಿ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳ್ತೂರು ಮೋಹನ್‌ದಾಸ್‌ ಶೆಟ್ಟಿ ಅವರು ಮಾತನಾಡಿ, ಸಮಾಜದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಬಂಟರ ಸಂಘವು ಪ್ರತಿ ವರ್ಷ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನಿಧಿಯನ್ನು ಅರ್ಪಿಸುತ್ತಿದೆ. ನವಿಮುಂಬಯಿ ಪ್ರಾದೇಶಿಕ ಸಮಿತಿಯು ಈ ಕಾರ್ಯಕ್ರಮವನ್ನು ಪ್ರಾರಂಭಿಸಿದ ಹಿನ್ನಲೆಯಲ್ಲಿ ಇಂದು ನಮ್ಮ ಸಂಘದ ಎಲ್ಲ ಸಮಿತಿಗಳಲ್ಲಿ ಇಂತಹ ಕಾರ್ಯಕ್ರಮಗಳು ನಡೆಯುತ್ತಿರುವುದು ಅಭಿಮಾನದ ವಿಷಯವಾಗಿದೆ. ಉತ್ತಮ ಶಿಕ್ಷಣ ಪಡೆದು ಮಕ್ಕಳು ಸಮಾಜದ ಹೆಸರನ್ನು ಬೆಳೆಸಬೇಕು ಎಂದು ನುಡಿದರು.

ಸಮಿತಿಯ ಉಪ ಕಾರ್ಯಾಧ್ಯಕ್ಷ ಹರೀಶ್‌ ಶೆಟ್ಟಿ ಪಡುಬಿದ್ರೆ ಇವರು ಮಾತನಾಡಿ, ನಮ್ಮಲ್ಲಿ ಒಗ್ಗಟ್ಟು ಮತ್ತು ಒಮ್ಮತ ಬಹಳ ಮುಖ್ಯವಾಗಿದೆ. ಇಂತಹ ಕಾರ್ಯಕ್ರಮಗಳು ಹತ್ತು ಕೈಗಳು ಸೇರಿದಾಗ ಮಾತ್ರ ಯಶಸ್ಸು ಕಾಣಲು ಸಾಧ್ಯವಾಗುತ್ತದೆ. ಸಹಕರಿಸಿದ ದಾನಿಗಳನ್ನು ಎಂದಿಗೂ ಮರೆಯುವಂತಿಲ್ಲ. ಮುಂದೆಯೂ ಸಮಿತಿಯ ಇಂತಹ ಕಾರ್ಯಕ್ರಮಗಳಿಗೆ ಎಲ್ಲರ ಸಹಕಾರ ಇರಲಿ ಎಂದರು.

ವೇದಿಕೆಯಲ್ಲಿ ಬಂಟರ ಸಂಘ ಮುಂಬಯಿ ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್‌ ಭೋಜ ಶೆಟ್ಟಿ, ಬಂಟರ ಸಂಘದ ಜತೆ ಕೋಶಾಧಿಕಾರಿ ಗುಣಪಾಲ್ ಶೆಟ್ಟಿ ಐಕಳ, ಜತೆ ಕಾರ್ಯದರ್ಶಿ ಮಹೇಶ್‌ ಎಸ್‌. ಶೆಟ್ಟಿ, ನವಿಮುಂಬಯಿ ಪ್ರಾದೇಶಿಕ ಸಮಿತಿಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಅನಿಲ್ ಶೆಟ್ಟಿ ಪಾಂಗಾಳ, ಜತೆ ಕೋಶಾಧಿಕಾರಿ ನಾಗೇಶ್‌ ಶೆಟ್ಟಿ, ಜತೆ ಕಾರ್ಯದರ್ಶಿ ರವೀಶ್‌ ಶೆಟ್ಟಿ, ಗೌರವ ಕಾರ್ಯದರ್ಶಿ ದಯಾನಂದ್‌ ಶೆಟ್ಟಿ ಶಿಮಂತೂರು, ಉಪ ಕಾರ್ಯಾಧ್ಯಕ್ಷ ಹರೀಶ್‌ ಶೆಟ್ಟಿ ಪಡುಬಿದ್ರೆ, ಸಮಿತಿಯ ಕಾರ್ಯಾಧ್ಯಕ್ಷ ಜಗದೀಶ್‌ ಶೆಟ್ಟಿ ನಂದಿಕೂರು, ಸಮಿತಿಯ ಸಲಹಾ ಸಮಿತಿಯ ಕಾರ್ಯಾಧ್ಯಕ್ಷ ಭಾಸ್ಕರ್‌ ಶೆಟ್ಟಿ ತಾಳಿಪಾಡಿಗುತ್ತು, ಸಮಿತಿಯ ಕೋಶಾಧಿಕಾರಿ ಭಾಸ್ಕರ್‌ ಶೆಟ್ಟಿ ದಕ್ಷಿಣ್‌, ಬಂಟರ ಸಂಘ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರೂಪಾ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಅಕ್ಷಯ್‌ ಶೆಟ್ಟಿ ಮೊದಲಾದವರು ಮಾತನಾಡಿ ಶುಭ ಹಾರೈಸಿದರು.

ವಿಜಯಲಕ್ಷ್ಮೀ ಶೆಟ್ಟಿ ಪ್ರಾರ್ಥನೆಗೈದರು. ಗಣ್ಯರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಮಿತಿಯ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಸಂಜೀವ ಎನ್‌. ಶೆಟ್ಟಿ ಅವರು ಸಭಾಗೃಹ ಮತ್ತು ಭೋಜನದ ವ್ಯವಸ್ಥೆಯನ್ನು ಆಯೋಜಿಸಿದ್ದರು. ನವಿಮುಂಬಯಿ ಸಮಿತಿಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಆದ್ಯಪಾಡಿ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ರವೀಶ್‌ ಶೆಟ್ಟಿ ವಂದಿಸಿದರು. ಸಮಾಜ ಬಾಂಧವರು, ಮಕ್ಕಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಬಂಟರ ಸಂಘವು ಈ ವರ್ಷ 3,874 ವಿದ್ಯಾರ್ಥಿಗಳಿಗೆ 1.75 ಕೋ. ರೂ. ಗಳಿಗೂ ಅಧಿಕ ನಿಧಿಯನ್ನು ಹಂಚಿದೆ. ಬಂಟರ ಸಂಘದಲ್ಲಿ ಕಳೆದ 14 ವರ್ಷಗಳಿಂದ ಆರ್ಥಿಕ ಸಹಾಯವನ್ನು ವಿತರಿಸಲಾಗುತ್ತಿದೆ. ನವಿಮುಂಬಯಿ ಪ್ರಾದೇಶಿಕ ಸಮಿತಿಯು ಶೈಕ್ಷಣಿಕವಾಗಿ ಮಕ್ಕಳನ್ನು ಸ್ವೀಕರಿಸುತ್ತಿರುವುದು ಅಭಿಮಾನದ ವಿಷಯವಾಗಿದೆ. ದತ್ತು ಸ್ವೀಕಾರಗೊಂಡ ಮಕ್ಕಳು ಉನ್ನತ ಹುದ್ದೆಯನ್ನು ಅಲಂಕರಿಸಿ ಸಂಘದ ಋಣವನ್ನು ತೀರಿಸುವ ಕಾರ್ಯದಲ್ಲಿ ತೊಡಗಬೇಕು – ಖಾಂದೇಶ್‌ ಭಾಸ್ಕರ್‌ ಶೆಟ್ಟಿ (ಸಮನ್ವಯಕರು: ನವಿಮುಂಬಯಿ ಪ್ರಾದೇಶಿಕ ಸಮಿತಿ). ನಮ್ಮ ಸಮಿತಿಯ ಪ್ರತಿಯೊಂದು ಕಾರ್ಯಕ್ರಮಗಳ ಯಶಸ್ಸಿನಲ್ಲಿ ದಾನಿಗಳ ಪಾತ್ರ ಮಹತ್ತರವಾಗಿದೆ. ಮಹಿಳೆಯರು ಮುತುವರ್ಜಿಯಿಂದ, ಉಲ್ಲಾಸದಿಂದ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದು ಸಮಿತಿಯ ಬಲವನ್ನು ಇಮ್ಮಡಿಗೊಳಿಸುತ್ತಿದೆ. ಆಟಿ ತಿಂಗಳ ಮಹತ್ವವನ್ನು ಸಾರುವ ಇಂತಹ ಕಾರ್ಯಕ್ರಮವು ಯುವ ಪೀಳಿಗೆಗೆ ಮಾದರಿಯಾಗಿದೆ. ಮಕ್ಕಳ ಶೈಕ್ಷಣಿಕ ದತ್ತು ಸ್ವೀಕಾರಕ್ಕೆ ಸಹಕರಿಸಿದ ಮಹಾನೀಯರನ್ನು ಮರೆಯುವಂತಿಲ್ಲ. ಅವರ ಯೋಗದಾನ ಮಹತ್ತರವಾಗಿದೆ. ಸಮಿತಿಯ ಸಮಾಜಪರ ಕಾರ್ಯಕ್ರಮಗಳಿಗೆ ಎಲ್ಲರ ಸಹಕಾರ, ಪ್ರೋತ್ಸಾಹ ಸದಾಯಿರಲಿ – ಜಗದೀಶ್‌ ಶೆಟ್ಟಿ ನಂದಿಕೂರು (ಕಾರ್ಯಾಧ್ಯಕ್ಷರು: ನವಿಮುಂಬಯಿ ಪ್ರಾದೇಶಿಕ ಸಮಿತಿ).

ಟಾಪ್ ನ್ಯೂಸ್

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

9-desi

Kannada Alphanbets: “ಕ’ ಕಾರದಲ್ಲಿನ ವಿಶೇಷ:‌ ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ

8-

ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.