ಬಸ್ ನಿಲ್ಲಿಸದ್ದಕ್ಕೆ ರಸ್ತೆ ಸುತ್ತುವರಿದು ಪ್ರತಿಭಟನೆ
ಕಾಲೇಜು ಬಳಿ ಬಸ್ ನಿಲುಗಡೆಗೆ ವಿದ್ಯಾರ್ಥಿಗಳ ಆಗ್ರಹ • ಬಸ್‌ನಲ್ಲಿ ನಿರ್ವಾಹಕರಿಂದ ಅಸಭ್ಯ ವರ್ತನೆ: ವಿದ್ಯಾರ್ಥಿನಿಯರ ಅಳಲು
Team Udayavani, Jul 28, 2019, 4:54 PM IST
ಪಿರಿಯಾಪಟ್ಟಣ ಹರವೆ ಮಲ್ಲರಾಜಪಟ್ಟಣದ ಬಳಿ ಇರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಳಿ ಬಸ್ ನಿಲುಗಡೆಗೆ ಆಗ್ರಹಿಸಿ ಕಾಲೇಜಿನ ವಿದ್ಯಾರ್ಥಿಗಳು ಶನಿವಾರ ರಸ್ತೆ ತಡೆದು ಪ್ರತಿಭಟಿಸಿದರು.
ಪಿರಿಯಾಪಟ್ಟಣ: ಕೆಎಸ್‌ಆರ್‌ಟಿಸಿ ಬಸ್ ನಿಲುಗಡೆಗೆ ಆಗ್ರಹಿಸಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಶನಿವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಶನಿವಾರ ಬೆಳಗ್ಗೆ 11 ಗಂಟೆಗೆ ಕಾಲೇಜಿನಿಂದ ಹೊರಬಂದ ವಿದ್ಯಾರ್ಥಿ ಗಳು ಪಿರಿಯಾಪಟ್ಟಣ – ಬೆಟ್ಟದಪುರ ಹಾಸನ ಮುಖ್ಯ ರಸ್ತೆಯನ್ನು ಸುತ್ತು ವರಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ಅಡ್ಡಗಟ್ಟಿದ್ದರಿಂದ ಎರಡೂ ಬದಿಗಳಲ್ಲಿ ವಾಹನಗಳು ಸಾಲು ಗಟ್ಟಿ ನಿಂತಿದ್ದವು. ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಪಟ್ಟಣದಿಂದ 3 ಕಿ.ಮೀ. ದೂರ: ಪಿರಿಯಾಪಟ್ಟಣದ ಹರವೆ ಮಲ್ಲರಾಜ ಪಟ್ಟಣದ ಬಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇದ್ದು ಪಟ್ಟಣದಿಂದ ಸುಮಾರು 3 ಕಿ.ಮೀ. ದೂರವಾಗುತ್ತದೆ. ಪಿರಿಯಾಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಿಂದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಕಾಲೇಜಿಗೆ ತೆರಳಲು ಮತ್ತು ಕಾಲೇಜಿ ನಿಂದ ಪಟ್ಟಣಕ್ಕೆ ಹಿಂದಿರುಗಲು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಅವಲಂಬಿಸಿದ್ದಾರೆ. ಈ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಕಾಲೇಜು ಬಳಿ ನಿಲುಗಡೆ ನೀಡದೆ ನಿತ್ಯ ಕಾಲೇಜಿಗೆ ಆಗಮಿಸುವ ವಿದ್ಯಾರ್ಥಿ ಗಳಿಗೆ ತೊಂದರೆಯಾಗುತ್ತಿದೆ.
ಬೆಳಗ್ಗೆ ಕಾಲೇಜಿಗೆ ಬರುವಾಗ ಹಾಗೂ ಸಂಜೆ ವೇಳೆ ಕಾಲೇಜಿನಿಂದ ತೆರಳುವಾಗ ಸೂಕ್ತ ಸಮಯದಲ್ಲಿ ಬಸ್‌ಗಳು ಸಿಗದೆ ಪರದಾಡುವಂತಾಗಿದೆ. ಗ್ರಾಮೀಣ ಪ್ರದೇಶಗಳಿಗೆ ತೆರಳಲು ಇರುವ ಬಸ್‌ಗಳ ಸಂಖ್ಯೆ ವಿರಳವಾಗಿರುವುದರಿಂದ ಮನೆಗಳಿಗೆ ನಿಗದಿತ ಸಮಯದಲ್ಲಿ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ವಿದ್ಯಾರ್ಥಿನಿಯರು ತಮ್ಮ ಅಳಲು ತೋಡಿಕೊಂಡರು.
ಸೂಚನಾ ಪ್ರತಿ: ಪಟ್ಟಣದ ಬಸ್ ನಿಲ್ದಾಣದಲ್ಲಿರುವ ಸಂಚಾರ ನಿಯಂತ್ರ ಣಾಧಿಕಾರಿಗಳ ಕೊಠಡಿಯಲ್ಲಿ ಕಾಲೇಜು ಬಳಿ ಬಸ್ ನಿಲುಗಡೆ ಮಾಡುವಂತೆ ಸೂಚನಾ ಪ್ರತಿಯನ್ನು ನೀಡಲಾಗಿದೆ. ಈ ಬಗ್ಗೆ ಹಲವು ಬಾರಿ ನಿರ್ವಾಹಕ ಮತ್ತು ಚಾಲಕರಲ್ಲಿ ಮನವಿ ಮಾಡಿದ್ದರೂ ಸ್ಪಂದಿಸುತ್ತಿಲ್ಲ. ಕೆಲವು ನಿರ್ವಾಹಕರು ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂದು ಅವಲತ್ತು ಕೊಂಡರು.
ಸುದ್ದಿ ತಿಳಿದ ಕೂಡಲೇ ಡಿಪೋ ವ್ಯವ ಸ್ಥಾಪಕ ದರ್ಶನ್ ಮತ್ತು ಮೈಮುಲ್ ನಿರ್ದೇಶಕ ಪಿ.ಎಂ. ಪ್ರಸನ್ನ ಧಾವಿಸಿ, ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದರು.
ಬೇಡಿಕೆ: ಬಳಿಕ ಮಾತನಾಡಿದ ಮೈಮುಲ್ ನಿರ್ದೇಶಕ ಪಿ.ಎಂ.ಪ್ರಸನ್ನ, ಕಾಲೇಜು ಬಳಿ ಕೋರಿಕೆ ನಿಲುಗಡೆ ಫಲಕ ಅಳವಡಿಸಬೇಕು. ಈ ಮಾರ್ಗದಲ್ಲಿ ಸಂಚರಿಸುವ ಪ್ರತಿ ಬಸ್ ಹಾಗೂ ಈ ಮಾರ್ಗದಲ್ಲಿರುವ ಡಿಪೋಗೆ ತೆರಳುವ ಮತ್ತು ಡಿಪೋದಿಂದ ಬಸ್ ನಿಲ್ದಾಣಕ್ಕೆ ಬರುವ ಬಸ್‌ಗಳು ಕಾಲೇಜು ಬಳಿ ಕಡ್ಡಾಯ ನಿಲುಗಡೆ ಮಾಡುವಂತೆ ಸಿಬ್ಬಂದಿಗೆ ಸೂಚಿಸಲು ಡಿಪೋ ವ್ಯವಸ್ಥಾಪಕ ದರ್ಶನ್‌ಗೆ ತಿಳಿಸಿದರು.
ಭರವಸೆ: ಕಾಲೇಜು ಬಳಿ ಇರುವ ಎರಡು ಬಸ್ ತಂಗುದಾಣಗಳು ಅಶು ಚಿತ್ವದಿಂದ ಕೂಡಿದ್ದು, ಕೂಡಲೆ ಸ್ವಚ್ಛಗೊಳಿ ಸುವಂತೆ ಕಾಲೇಜಿನ ಪ್ರಾಂಶುಪಾಲ ಡಾ.ದೇವರಾಜ್ ಅವರಿಗೆ ಸೂಚಿಸಿದರು. ಡಿಪೋ ವ್ಯವಸ್ಥಾಪಕರು ಬಸ್ ನಿಲುಗಡೆಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರಾದ ಮಹದೇವ್, ಡಾ. ಮಂಜುನಾಥ್, ಯಶಸ್ವಿನಿ ಸೇರಿದಂತೆ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.