ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರ: ಖಾದರ್ ಭೇಟಿ
Team Udayavani, Jul 29, 2019, 5:16 AM IST
ಉಳ್ಳಾಲ: ಗ್ರಾಮಮಟ್ಟದಲ್ಲಿ ವಿಶೇಷ ಅನುಮತಿಯಿಂದ ನಗರದಿಂದ ಕೇವಲ ಆರು ಕಿ.ಮೀ. ದೂರದ ಉಳ್ಳಾಲದಲ್ಲಿ ಸುಸಜ್ಜಿತವಾಗಿ ನಿರ್ಮಾಣ ಗೊಂಡಿರುವ ಉಳ್ಳಾಲ ನಗರ ಸಮುದಾಯ ಆರೋಗ್ಯಕೇಂದ್ರ ಜನರ ಸೇವೆಗೆ ಸಿದ್ಧಗೊಂಡಿದ್ದು ಶೀಘ್ರದಲ್ಲೇ ಲೋಕಾರ್ಪಣೆಗೊಳ್ಳಲಿದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು.
ನೂತನವಾಗಿ ನಿರ್ಮಾಣಗೊಂಡಿ ರುವ ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರದ ಸವಲತ್ತು, ಉಪಕರಣಗಳನ್ನು ವೀಕ್ಷಿಸಿ ಬಳಿಕ ಅವರು ಮಾತನಾಡಿದರು.
ಸುಸಜ್ಜಿತ ವ್ಯವಸ್ಥೆ
ಹಿಂದೆ ಉಳ್ಳಾಲ ಗ್ರಾಮವಾಗಿದ್ದ ಸಂದರ್ಭ ವಿಶೇಷ ಅನುಮತಿ ಪಡೆಯಲಾಗಿತ್ತು. ಈಗ ಸುಸಜ್ಜಿತ ಆಸ್ಪತ್ರೆ ಕಟ್ಟಡ ನಿರ್ಮಾಣವಾಗಿ ಶವಾಗಾರ, ಪೋಸ್ಟ್ ಮಾರ್ಟಂ ವ್ಯವಸ್ಥೆ, ವೈದ್ಯರ ಕ್ವಾಟ್ರರ್ಸ್, ಅತ್ಯಾಧುನಿಕ ಉಪಕರಣಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಿಬಂದಿ, ವೈದ್ಯರು ಹಾಗೂ ಉಪಕರಣಗಳ ಕೊರತೆಯಿಂದಾಗಿ ಉದ್ಘಾಟನೆ ವಿಳಂಬವಾಗಿದೆ. ಸದ್ಯ ಕಿರು ಆಸ್ಪತ್ರೆಯಲ್ಲಿರುವ ಎಲ್ಲ ರೀತಿಯ ಉಪಕರಣಗಳು ಆರೋಗ್ಯ ಕೇಂದ್ರದಲ್ಲಿ ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭ ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರಾಮಕೃಷ್ಣ , ಈಶ್ವರ್ ಉಳ್ಳಾಲ್, ನಗರಸಭೆ ಮಾಜಿ ಅಧ್ಯಕ್ಷ ಹುಸೈನ್ ಕುಂಞಿಮೋನು, ಉಳ್ಳಾಲ ನಗರಸಭೆ ಸದಸ್ಯರು, ಮಾಜಿ ಸದಸ್ಯರು, ಉಳ್ಳಾಲ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
MUST WATCH
ಹೊಸ ಸೇರ್ಪಡೆ
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.