ಅನರ್ಹಗೊಂಡು ಅಸಹಾಯಕರಾದ ಅತೃಪ್ತ ಶಾಸಕರು


Team Udayavani, Jul 29, 2019, 5:55 AM IST

as

ಬೆಂಗಳೂರು: ಮೈತ್ರಿ ಸರ್ಕಾರವನ್ನು ಪತನಗೊಳಿಸ ಲೇಬೇಕೆಂದು ಬಂಡಾಯ ಸಾರಿದ್ದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಕೆಲ ಶಾಸಕರು ಸರ್ಕಾರ ಬೀಳಿಸುವ ತಮ್ಮ ಹಠ ಸಾಧನೆಯಲ್ಲಿ ಯಶಸ್ವಿಯಾಗಿದ್ದರೂ, ತಾವೇ ಹೆಣೆದ ಬಲೆಯಲ್ಲಿ ತಾವೇ ಸಿಲುಕಿಕೊಂಡಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವವಾಗುವಂತೆ ಮಾಡಿದೆ.

ಮೈತ್ರಿ ಸರ್ಕಾರ ರಚನೆಯಾದ ಆರು ತಿಂಗಳಲ್ಲಿಯೇ ಬೆಳಗಾವಿ ಪಿಎಲ್ಡಿ ಬ್ಯಾಂಕ್‌ ಅಧ್ಯಕ್ಷರ ಆಯ್ಕೆ ಚುನಾವಣೆಯ ಸಂದರ್ಭದಲ್ಲಿ ರಮೇಶ್‌ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಟಾಳಕರ್‌ ನಡುವಿನ ಸಂಘರ್ಷ, ರಮೇಶ್‌ ಜಾರಕಿಹೊಳಿ ಮೈತ್ರಿ ಸರ್ಕಾರದ ವಿರುದ್ಧ ಬಂಡಾಯ ಸಾರುವಂತೆ ಮಾಡಿತು. ಹಲವು ಬಾರಿ ಅವರ ಪ್ರಯತ್ನ ವಿಫ‌ಲವಾದರೂ, ಕಡೆಗೆ ಬೆಂಗಳೂರಿನ ನಾಲ್ವರು ಶಾಸಕರು ದಿಢೀರ್‌ ಅತೃಪ್ತರ ಬಣ ಸೇರಿಕೊಳ್ಳುವ ಮೂಲಕ ಬಂಡಾಯ ಶಾಸಕರ ಪ್ರಯತ್ನ ಫ‌ಲ ನೀಡಿತು. ಇದು ಅತೃಪ್ತ ಶಾಸಕರಿಗೆ ಹಠ ಸಾಧಿಸಿದ ತೃಪ್ತಿ ನೀಡಿದರೂ, ರಾಜಕೀಯವಾಗಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಎರಡೂ ಪಕ್ಷಗಳು ಅವರ ವಿರುದ್ಧ ತೆಗೆದುಕೊಂಡ ನಿರ್ಧಾರ, ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಸ್ಪೀಕರ್‌ ರಮೇಶ್‌ಕುಮಾರ್‌ ನೀಡಿದ ತೀರ್ಪು ಅತೃಪ್ತ ಶಾಸಕರು ತಾವೇ ಹೆಣೆದ ಬಲೆಯಲ್ಲಿ ತಾವೇ ಸಿಲುಕಿದಂತೆ ಮಾಡಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಮೈತ್ರಿ ಪಕ್ಷಗಳಿಗೆ ಏನು ಲಾಭ: ಮೈತ್ರಿ ಸರ್ಕಾರದ ವಿರುದ್ಧ ಬಂಡಾಯ ಸಾರಿ ಸರ್ಕಾರವನ್ನು ಪತನಗೊಳಿಸಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ಹಿನ್ನಡೆ ಅನುಭವಿಸುವಂತೆ ಮಾಡಿದ್ದ ಬಂಡಾಯ ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಅನರ್ಹಗೊಳಿಸಿ ಅವರ ರಾಜಕೀಯ ಭವಿಷ್ಯವನ್ನು ಮುಕ್ತಾಯ ಮಾಡಬೇಕೆಂಬ ಬಯಕೆ ಈಡೇರಿದಂತಾಗಿದೆ.

ಈ ಮೂಲಕ ಒಂದು ರಾಜಕೀಯ ಪಕ್ಷದಿಂದ ಆಯ್ಕೆಯಾಗಿರುವ ಶಾಸಕರು ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ರಾಜೀನಾಮೆ ಸಲ್ಲಿಸಿ, ಪಕ್ಷದ ವಿರುದ್ಧವೇ ಬಂಡಾಯ ಸಾರಿ, ರೆಸಾರ್ಟ್‌ ರಾಜಕಾರಣ ಮಾಡುವುದಕ್ಕೆ ತಕ್ಕ ಪಾಠ ಕಲಿಸಿದಂತಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿಯ ಬೆಳವಣಿಗೆಗಳಿಗೆ ಬ್ರೇಕ್‌ ಹಾಕಿದ್ದೇವೆಂಬ ತೃಪ್ತಿ ಮೈತ್ರಿ ಪಕ್ಷಗಳ ನಾಯಕರಿಗೆ ಮೂಡುವಂತೆ ಮಾಡಿದೆ.

ಬಿಜೆಪಿಗೆ ಏನು ಲಾಭ?: 2018 ರ ವಿಧಾನಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಪಡೆದರೂ ಬಹುಮತ ಸಾಬೀತು ಪಡಿಸಲಾಗದೆ ಪ್ರತಿಪಕ್ಷದಲ್ಲಿ ಕೂರುವಂತ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ನ ಮೈತ್ರಿ ಸರ್ಕಾರವನ್ನು ಹೇಗಾದರೂ ಮಾಡಿ ಪತನಗೊಳಿಸಬೇಕೆಂಬ ಪ್ರಯತ್ನವನ್ನು ನಿರಂತರ ಮಾಡುತ್ತಿದ್ದ ಬಿಜೆಪಿ ನಾಯಕರಿಗೆ ಮೈತ್ರಿ ಪಕ್ಷಗಳ ಬಂಡಾಯ ಶಾಸಕರ ರಾಜೀನಾಮೆ ವರವಾಗಿ ಪರಿಣಮಿಸಿತು.

ಹಲವಾರು ಬಾರಿ ಬಂಡಾಯ ಶಾಸಕರನ್ನು ರಾಜೀನಾಮೆ ಸಲ್ಲಿಸುವಂತೆ ಒತ್ತಡ ಹೇರುತ್ತಿದ್ದರೂ, ಸಂಖ್ಯಾ ಬಲದ ಕೊರತೆಯಿಂದ ಹಿನ್ನಡೆಯನ್ನೂ ಅನುಭವಿಸುವಂತಾಗಿತ್ತು. ಮೈತ್ರಿ ಪಕ್ಷಗಳು ಲೋಕಸಭೆ ಚುನಾವಣೆ ನಂತರ ಇಬ್ಬರು ಪಕ್ಷೇತರರನ್ನು ಸಚಿವರನ್ನಾಗಿ ಮಾಡಿದಾಗ ಕಾಂಗ್ರೆಸ್‌ನಲ್ಲಿ ಹೆಚ್ಚಾದ ಅಸಮಾಧಾನವನ್ನೇ ಬಂಡವಾಳ ಮಾಡಿಕೊಂಡು, ಅತೃಪ್ತರನ್ನು ಮತ್ತೆ ಸಂಘಟಿಸುವ ಯತ್ನ ಮಾಡಿದರು. ಅದಕ್ಕೆ ಪೂರಕ ಎನ್ನುವಂತೆ ಬೆಂಗಳೂರಿನ ಶಾಸಕರಾದ ರಾಮಲಿಂಗಾ ರೆಡ್ಡಿ, ಎಸ್‌.ಟಿ.ಸೋಮಶೇಖರ್‌, ಬೈರತಿ ಬಸವರಾಜು, ಗೋಪಾಲಯ್ಯ ರಾಜೀನಾಮೆ ಸಲ್ಲಿಸಿದ್ದು ಬಿಜೆಪಿಗೆ ವರವಾಗಿ ಪರಿಣಮಿಸಿತು.

ಅದನ್ನೇ ಬಂಡವಾಳ ಮಾಡಿಕೊಂಡ ಬಿಜೆಪಿಯವರು ಅತೃಪ್ತರು ಮುಂಬೈನ ಹೊಟೇಲ್ನಲ್ಲಿ ಗಟ್ಟಿಯಾಗಿ ಉಳಿದುಕೊಳ್ಳುವಂತೆ ನೋಡಿಕೊಂಡು ಮೈತ್ರಿ ಸರ್ಕಾರ ಪತನಗೊಳಿಸುವಲ್ಲಿ ಯಶಸ್ವಿಯಾದರು. ಅದರ ಬೆನ್ನಲ್ಲೆ ತಮ್ಮ ಸರ್ಕಾರವನ್ನೂ ರಚಿಸಿದರು. ಅಲ್ಲದೇ ಈಗ ಸ್ಪೀಕರ್‌ ಕೂಡ ಬಂಡಾಯಗಾರರನ್ನು ಅನರ್ಹಗೊಳಿಸಿರುವುದರಿಂದ ಬಿಜೆಪಿಗೆ ಬಹುಮತ ಸಾಬೀತಿಗೆ ಇದ್ದ ಅಡ್ಡಿಯೂ ನಿವಾರಣೆಯಾದಂತಾಗಿದೆ. ಅಲ್ಲದೇ ಅತೃಪ್ತರಿಗೆ ತಕ್ಷಣಕ್ಕೆ ಮಂತ್ರಿ ಮಾಡಬೇಕೆಂಬ ತೊಂದರೆಯೂ ಇಲ್ಲದಂತಾಗಿರುವುದರಿಂದ ಬಿಜೆಪಿಯಲ್ಲಿ ನಿರಾಳತೆಯ ಭಾವ ಮೂಡುವಂತೆ ಮಾಡಿದೆ.

ಅತೃಪ್ತರಿಗೆ ಆಗಿದ್ದೇನು: ರಮೇಶ್‌ ಜಾರಕಿಹೊಳಿ ಹಾಗೂ ಅವರ ತಂಡ ಹೇಗಾದರೂ ಮಾಡಿ ಸರ್ಕಾರವನ್ನು ಪತನ ಮಾಡಲೇಬೇಕೆಂದು ಹಠ ತೊಟ್ಟು ಬಂಡಾಯ ಸಾರಿದ್ದರು. ಆದರೆ, ಅದಕ್ಕೆ ಪೂರಕವಾಗಿ ಸಂಖ್ಯಾಬಲದ ಕೊರತೆ ಅವರನ್ನು ಕಾಡುತ್ತಿತ್ತು. ಈ ಸಂದರ್ಭದಲ್ಲಿ ಪಕ್ಷದ ನಾಯಕರನ್ನು ಹೆದರಿಸಿ ಅಧಿಕಾರದ ಗದ್ದುಗೆ ಏರಲು ಬೆಂಗಳೂರಿನ ಶಾಸಕರು ಮಾಡಿದ ಕಾರ್ಯತಂತ್ರ ದಾರಿ ತಪ್ಪಿದಂತೆ ಕಾಣಿಸುತ್ತದೆ.

ಡಾ.ಜಿ.ಪರಮೇಶ್ವರ್‌ ಅವರಿಂದ ಬೆಂಗಳೂರು ಉಸ್ತುವಾರಿಯನ್ನು ಪಡೆದು ರಾಮಲಿಂಗಾ ರೆಡ್ಡಿ ಅವರಿಗೆ ವಹಿಸಬೇಕೆಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ನ ನಾಲ್ವರು ಹಾಗೂ ಜೆಡಿಎಸ್‌ನ ಗೋಪಾಲಯ್ಯ ಸೇರಿ ಐವರು ರಾಜೀನಾಮೆ ಸಲ್ಲಿಸಿದ್ದರು. ರಾಮಲಿಂಗಾರೆಡ್ಡಿ ರಾಜೀನಾಮೆ ಸಲ್ಲಿಸಿದರೂ, ಬಂಡಾಯ ಶಾಸಕರ ಗುಂಪು ಸೇರದೇ ತಟಸ್ಥವಾಗಿ ಉಳಿದುಕೊಂಡರು. ಆದರೆ, ಎಸ್‌.ಟಿ.ಸೋಮಶೇಖರ್‌, ಮುನಿರತ್ನ, ಬೈರತಿ ಬಸವರಾಜು ಹಾಗೂ ಗೋಪಾಲಯ್ಯ ಅತೃಪ್ತರೊಂದಿಗೆ ಮುಂಬೈ ಹೊಟೇಲ್ ಸೇರಿಕೊಂಡು ಬಿಜೆಪಿಯ ಹಿಡಿತದಿಂದ ಹೊರಬರಲಾಗದೇ ಅಸಹಾಯಕ ರಾಗಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.

ರಾಜಕೀಯ ಭವಿಷ್ಯ ಮಂಕು
ಬಂಡಾಯ ಸಾರಿ ಅನರ್ಹಗೊಂಡಿರುವ 17 ಶಾಸಕರು ತಮ್ಮ ಹಠ ಸಾಧಿಸುವಲ್ಲಿ ಯಶಸ್ವಿ ಯಾಗಿದ್ದರೂ, ಈಗ ಅನರ್ಹಗೊಂಡಿರು ವುದರಿಂದ ಕಾನೂನು ಹೋರಾಟ ನಡೆಸುವುದು ಅನಿವಾರ್ಯವಾಗಿದೆ. ಈ ಹೋರಾಟದಲ್ಲಿ ಜಯಗಳಿಸಿದರೂ, ಮತ್ತೆ ಚುನಾವಣೆಯಲ್ಲಿ ಜನರನ್ನು ಎದುರಿಸಿ ಗೆಲ್ಲಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಕಾನೂನು ಸಂಘರ್ಷ ಹಾಗೂ ರಾಜಕೀಯ ಹೋರಾಟದಲ್ಲಿ ಜಯಗಳಿಸುವಷ್ಟರಲ್ಲಿ ಅನರ್ಹಗೊಂಡ ಶಾಸಕರಿಗೆ ರಾಜಕೀಯದ ಬಗ್ಗೆಯೇ ಜಿಜ್ಞಾಸೆ ಮೂಡಿದರೂ ಆಶ್ಚರ್ಯ ಪಡುವಂತಿಲ್ಲ. ಕೆಲವರು ರಾಜಕೀಯ ನಿವೃತ್ತಿ ಪಡೆಯುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ.

-ಶಂಕರ ಪಾಗೋಜಿ

ಟಾಪ್ ನ್ಯೂಸ್

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.