ಪ್ರಜಾಪ್ರಭುತ್ವಕ್ಕೆ ಸಂದ ನೈಜ ಗೆಲುವು: ಸಿದ್ದರಾಮಯ್ಯ
Team Udayavani, Jul 29, 2019, 5:01 AM IST
ಬೆಂಗಳೂರು: ವಿಧಾನಸಭಾಧ್ಯಕ್ಷರು 14 ಶಾಸಕರನ್ನು ಪಕ್ಷ ವಿರೋಧಿ ಚಟುವಟಿಕೆಯಡಿ ಅನರ್ಹಗೊಳಿಸಿ ಹೊರಡಿಸಿರುವ ಆದೇಶ ಪ್ರಜಾಪ್ರಭುತ್ವಕ್ಕೆ ಸಂದ ನೈಜ ಗೆಲುವು. ಸ್ವಾರ್ಥ ಸಾಧನೆ, ಅಧಿಕಾರದಾಸೆಯಿಂದ ಜನಾದೇಶವನ್ನು ಧಿಕ್ಕರಿಸಿ, ತಮ್ಮನ್ನು ತಾವು ಮಾರಿಕೊಳ್ಳುವ ಹೀನ ಸಂಸ್ಕೃತಿಗೆ ಈ ತೀರ್ಪು ಇತಿಶ್ರೀ ಹಾಡಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಸರ್ಕಾರಗಳು ಬರುತ್ತವೆ ಹೋಗುತ್ತವೆ. ಪದವಿ, ಅಧಿಕಾರ, ರಾಜಕಾರಣದಲ್ಲಿ ಎಂದಿಗೂ ಶಾಶ್ವತವಲ್ಲ. ಮುಂದಿನ ಪೀಳಿಗೆ ರಾಜಕಾರಣಕ್ಕೆ ನಾವು ಮಾದರಿಯಾಗಿ ಏನನ್ನು ಬಿಟ್ಟು ಹೋಗುತ್ತೇವೆ ಎಂಬುದು ಮುಖ್ಯ.ಸಭಾಧ್ಯಕ್ಷರ ನಿರ್ಣಯ ಅವಕಾಶವಾದಿ ರಾಜಕಾರಣಕ್ಕೆ ನೀಡಿರುವ ಕೊಡಲಿ ಏಟು. ಅವರ ಈ ತೀರ್ಮಾನವನ್ನು ಸ್ವಾಗತಿಸುವುದಾಗಿ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.