ಮತ್ತೆ ಮೂರು ಸೇತುವೆ ಜಲಾವೃತ
•ಜತ್ರಾಟ-ಭಿವಸಿ, ಅಕ್ಕೋಳ-ಸಿದ್ನಾಳ, ಬೋಜವಾಡಿ-ಕುನ್ನೂರ ಸೇತುವೆ ಮುಳುಗುವ ಸಾಧ್ಯತೆ
Team Udayavani, Jul 29, 2019, 8:48 AM IST
ಚಿಕ್ಕೋಡಿ: ದೂಧಗಂಗಾ ನದಿ ನೀರು ಏರಿಕೆಯಿಂದ ಸದಲಗಾ-ಭೋರಗಾಂವ ಹಳೆ ಸೇತುವೆ ಮೇಲೆ ನೀರು ಹರಿಯುತ್ತಿದೆ.
ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಭಾಗದ ಕೊಯ್ನಾ, ಮಹಾಬಳೇಶ್ವರ, ವಾರಣಾ, ನವಜಾ ಮತ್ತು ರಾಧಾನಗರಿ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಭಾರಿ ಮಳೆ ಸುರಿದಿದ್ದರಿಂದ ಕೃಷ್ಣಾ, ದೂದಗಂಗಾ ಮತ್ತು ವೇದಗಂಗಾ ನದಿಗಳ ನೀರಿನ ಮಟ್ಟದಲ್ಲಿ ಒಂದೇ ದಿನ 10 ಅಡಿಯಷ್ಟು ನೀರು ಏರಿಕೆಯಾಗಿದೆ.
ಗಡಿ ಭಾಗದ ನದಿಗಳ ನೀರಿನ ಹರಿವು ದಿಢೀರ್ ಹೆಚ್ಚಳಗೊಂಡಿದ್ದರಿಂದ ಚಿಕ್ಕೋಡಿ ತಾಲೂಕಿನ ಮೂರು ಸೇತುವೆಗಳು ರವಿವಾರ ಮುಳುಗಡೆಯಾಗಿ ಸಂಚಾರ ಕಡಿತಗೊಂಡಿದೆ. ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಲ್ಲೋಳ-ಯಡೂರ ಸೇತುವೆ, ದೂದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಾರದಗಾ-ಭೋಜ, ಮಲಿಕವಾಡ-ದತ್ತವಾಡ ಸೇತುವೆ ರವಿವಾರ ನಸುಕಿನ ಜಾವ ಮುಳುಗಡೆಗೊಂಡಿವೆ.
ಮೂರೂ ಸೇತುವೆ ಮೇಲೆ ಯಾರೂ ಸಂಚರಿಸದಂತೆ ನದಿ ತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ಡಂಗೂರ ಸಾರಿದೆ.
ವೇದಗಂಗಾ ನದಿ ನೀರಿನ ಹರಿವು ಸಹ ಜೋರಾಗಿರುವುದರಿಂದ ಜತ್ರಾಟ-ಭಿವಸಿ, ಅಕ್ಕೋಳ-ಸಿದ್ನಾಳ, ಬೋಜವಾಡಿ-ಕುನ್ನೂರ ಸೇತುವೆ ಮುಳುಗುವ ಸಾಧ್ಯತೆ ಹೆಚ್ಚಿದೆ.
ಮಹಾರಾಷ್ಟ್ರದ ಶಿರೋಳ ತಾಲೂಕಿನ ಸುಕ್ಷೇತ್ರ ನರಸಿಂಹವಾಡಿ ಹತ್ತಿರ ಕೃಷ್ಣಾ ನದಿ ಸೇರುವ ಪಂಚಗಂಗಾ ನದಿ ನೀರಿನ ಮಟ್ಟ ಹೆಚ್ಚಳವಾಗಿ ನಾಲ್ಕು ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ.
ಮಹಾರಾಷ್ಟ್ರ ರಾಜಾಪೂರ ಬ್ಯಾರೇಜ್‌ದಿಂದ ಕೃಷ್ಣಾ ನದಿಗೆ 81,286 ಕ್ಯೂಸೆಕ್ ನೀರು ಹರಿದು ಬರಲಾರಂಭಿಸಿದೆ. ದೂದಗಂಗಾ ಮತ್ತು ವೇದಗಂಗಾ ನದಿಗಳಿಂದ 11,968 ಕ್ಯೂಸೆಕ್ ನೀರು ಹರಿದು ಕೃಷ್ಣಾ ನದಿಗೆ ಸೇರುತ್ತದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಕೃಷ್ಣಾ ನದಿಗೆ ಒಟ್ಟು 93,254 ಕ್ಯೂಸೆಕ್ ನೀರು ಹರಿದು ಹಿಪ್ಪರಗಿ ಬ್ಯಾರೇಜ್‌ಗೆ ಹೋಗುತ್ತಿದೆ. ಹಿಪ್ಪರಗಿ ಬ್ಯಾರೇಜ್‌ದಿಂದ 8 ಗೇಟ್‌ಗಳ ಮೂಲಕ 65 ಸಾವಿರ ಕ್ಯೂಸೆಕ್ ನೀರು ಹರಿದು ಬಿಡಲಾಗುತ್ತಿದೆ ಎಂದು ತಹಶೀಲ್ದಾರ್ ಡಾ|ಸಂತೋಷ ಬಿರಾದಾರ ಮಾಹಿತಿ ನೀಡಿದರು.
ಚಿಕ್ಕೋಡಿ, ರಾಯಬಾಗ, ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ಪ್ರದೇಶಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿ ಜಿಟಿಜಿಟಿ ಮಳೆ ಸುರಿಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.