ಬಿಜೆಪಿ ಮುಖಂಡ-ವೈದ್ಯ ಡಾ| ಟಿ.ಟಿ. ಹೆಗಡೆ ಇನ್ನಿಲ್ಲ

Team Udayavani, Jul 29, 2019, 9:29 AM IST

uk-tdy-2

ಕುಮಟಾ: ಕುಮಟಾ ಹವ್ಯಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಹವ್ಯಕ ರತ್ನ, ಹಿರಿಯ ವೈದ್ಯ ಡಾ| ಟಿ.ಟಿ. ಹೆಗಡೆ (86) ಭಾನುವಾರ ಬೆಳಗಿನ ಜಾವ ನಿಧನರಾಗಿದ್ದಾರೆ.

ತೀವ್ರ ಅನಾರೋಗ್ಯದ ಕಾರಣ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಚೇತರಿಸಿಕೊಂಡು ಮನೆಗೆ ಮರಳುವ ಹಂತದಲ್ಲಿರುವಾಗ ರಾತ್ರಿ ನಿದ್ರೆಯಲ್ಲೇ ಕೋಮಾಕ್ಕೆ ತೆರಳಿ ಬೆಳಗ್ಗೆ 7ಕ್ಕೆ ಕೊನೆಯುಸಿರೆಳೆದಿದ್ದಾರೆ.

ಇವರು ಮುಂಬೈನಲ್ಲಿ ಎಂಬಿಬಿಎಸ್‌ ಮಾಡಿ ವೈದ್ಯರಾಗಿ ಸತತ ಆರು ದಶಕಗಳಿಗೂ ಹೆಚ್ಚು ಕಾಲ ಕುಮಟಾ ಹಾಗೂ ಇತರ ತಾಲೂಕಿನ ಜನರ ಸೇವೆ ಮಾಡಿದ್ದಾರೆ. ಮುಖ್ಯವಾಗಿ ಸಂಪರ್ಕ ವ್ಯವಸ್ಥೆಯೇ ಇಲ್ಲದ ದೂರದ ಕುಗ್ರಾಮಗಳಿಗೂ ತಡರಾತ್ರಿಯಲ್ಲೂ ತಮ್ಮ ರಾಜದೂತ್‌ ಬೈಕ್‌ನಲ್ಲಿ ಒಬ್ಬರೇ ರೋಗಿಯ ಮನೆ ಬಾಗಿಲಿಗೆ ತೆರಳಿ ಚಿಕಿತ್ಸೆ ನೀಡುವ ಮೂಲಕ ಎಲ್ಲರಿಗೂ ತೀರಾ ಆಪ್ತರಾಗಿದ್ದ ಡಾ| ಹೆಗಡೆ, ವಿವಿಧ ಸಂಘಸಂಸ್ಥೆ, ಸಾಮಾಜಿಕ ಚಟುವಟಿಕೆಗಳಲ್ಲೂ ಕ್ರಿಯಾಶೀಲರಾಗಿ ಜನರಿಗೆ ಬೇಕಾದವರಾಗಿದ್ದರು. ಎಪಿಎಂಸಿ ಅಧ್ಯಕ್ಷರಾಗಿ ಸಾಕಷ್ಟು ಸುಧಾರಣೆಗಳಿಗೆ ಕಾರಣರಾಗಿದ್ದ ಡಾ| ಹೆಗಡೆಯವರು ರೈತಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ಅದಲ್ಲದೇ, ಆರ್‌ಎಸ್‌ಎಸ್‌ನಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಕುಮಟಾದಲ್ಲಿ ಬಿಜೆಪಿಯನ್ನು ಸಂಘಟಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ರಾಜಕೀಯದಲ್ಲಿದ್ದರೂ ನಿಷ್ಠುರವಾದಿಯಾಗಿ ಹೆಸರು ಮಾಡಿದ್ದರು.

ಹವ್ಯಕ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ ಹವ್ಯಕ ಸಭಾಭವನ, ವೃದ್ಧಾಶ್ರಮ, ವಿದ್ಯಾರ್ಥಿಗಳಿಗೆ ವಸತಿಗೃಹ, ಬಡ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ನೆರವು ಮುಂತಾದ ಸೇವೆ ಸಲ್ಲಿಸುತ್ತಲೇ ಜೀವನದ ಪಯಣ ಸಾರ್ಥಕವಾಗಿ ಮುಗಿಸಿದ್ದಾರೆ. ಡಾ| ಹೆಗಡೆಯವರು ಪುತ್ರ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.

ಡಾ| ಹೆಗಡೆಯವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಕುಮಟಾಕ್ಕೆ ತಂದ ಬಳಿಕ ಸಂಜೆ 7ರಿಂದ 10ರ ವರೆಗೆ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. ಅವರ ಅಪಾರ ಬಂಧುಬಳಗ ಹಾಗೂ ಅಭಿಮಾನಿಗಳು ಅಂತಿಮ ದರ್ಶನ ಪಡೆದು ನುಡಿನಮನ ಸಲ್ಲಿಸಿದರು. ಹಲವಾರು ಗಣ್ಯರು, ಸಾರ್ವಜನಿಕರು, ಜನಪ್ರತಿನಿಧಿಗಳು ಸಂತಾಪ ಸೂಚಿಸಿದ್ದಾರೆ.

ಕುಮಟಾದ ಪ್ರಸಿದ್ಧ ವೈದ್ಯ ಡಾ| ಟಿ.ಟಿ. ಹೆಗಡೆ ಅಗಲಿಕೆಗೆ ಸಂಸದ ಅನಂತಕುಮಾರ ಹೆಗಡೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಡಾ| ಟಿ.ಟಿ. ಹೆಗಡೆ ವೃತ್ತಿಯಲ್ಲಿ ವೈದ್ಯರಾಗಿದ್ದು, ಸಾಮಾಜಿಕ ಕಳಕಳಿ ಉಳ್ಳವರಾಗಿದ್ದವರು. ಅನೇಕ ಬಡವರಿಗೆ ಶುಲ್ಕವಿಲ್ಲದೆಯೇ ಚಿಕಿತ್ಸೆ ನೀಡಿರುವ ಅಪರೂಪದ ವೈದ್ಯರಾಗಿದ್ದರು. ಜನ ಸಂಘದ ಕಾಯದಿಂದಲೂ ಕಾರ್ಯಕರ್ತರಾಗಿದ್ದು, ನಂತರದ ದಿನಗಳಲ್ಲಿ ಭಾರತೀಯ ಜನತಾ ಪಾರ್ಟಿಯ ಬೆನ್ನೆಲುಬಾಗಿ ಕಾರ್ಯನಿರ್ವಹಿಸಿದ್ದಲ್ಲದೇ ಮಾರ್ಗದರ್ಶನ ಸಹ ನೀಡಿದವರು. ಬಿಜೆಪಿಯಿಂದ ಕುಮಟಾ ವಿಧಾನ ಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ನಿಲ್ಲುವಂತೆ ಪಕ್ಷ ಕೇಳಿಕೊಂಡಾಗ ನಯವಾಗಿಯೇ ತಿರಸ್ಕರಿಸಿದ ಮಹಾನ್‌ ಚೈತನ್ಯ ಅವರು ಎಂದು ಸಂತಾಪ ಹೇಳಿಕೆಯಲ್ಲಿ ನೆನಪಿಸಿಕೊಂಡಿದ್ದಾರೆ.

ಡಾ| ಟಿ.ಟಿ. ಹೆಗಡೆ ಅಗಲಿಕೆಗೆ ಸಂತಾಪ:

ಶಿರಸಿ: ಕುಮಟಾದ ಪ್ರಸಿದ್ಧ ವೈದ್ಯ ಡಾ| ಟಿ.ಟಿ. ಹೆಗಡೆ ಅಗಲಿಕೆಗೆ ಸಂಸದ ಅನಂತಕುಮಾರ ಹೆಗಡೆ ಸಂತಾಪ ವ್ಯಕ್ತಪಡಿಸಿದ್ದಾರೆ. ಡಾ| ಟಿ.ಟಿ. ಹೆಗಡೆ ವೃತ್ತಿಯಲ್ಲಿ ವೈದ್ಯರಾಗಿದ್ದು, ಸಾಮಾಜಿಕ ಕಳಕಳಿ ಉಳ್ಳವರಾಗಿದ್ದವರು. ಅನೇಕ ಬಡವರಿಗೆ ಶುಲ್ಕವಿಲ್ಲದೆಯೇ ಚಿಕಿತ್ಸೆ ನೀಡಿರುವ ಅಪರೂಪದ ವೈದ್ಯರಾಗಿದ್ದರು. ಜನ ಸಂಘದ ಕಾಯದಿಂದಲೂ ಕಾರ್ಯಕರ್ತರಾಗಿದ್ದು, ನಂತರದ ದಿನಗಳಲ್ಲಿ ಭಾರತೀಯ ಜನತಾ ಪಾರ್ಟಿಯ ಬೆನ್ನೆಲುಬಾಗಿ ಕಾರ್ಯನಿರ್ವಹಿಸಿದ್ದಲ್ಲದೇ ಮಾರ್ಗದರ್ಶನ ಸಹ ನೀಡಿದವರು. ಬಿಜೆಪಿಯಿಂದ ಕುಮಟಾ ವಿಧಾನ ಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ನಿಲ್ಲುವಂತೆ ಪಕ್ಷ ಕೇಳಿಕೊಂಡಾಗ ನಯವಾಗಿಯೇ ತಿರಸ್ಕರಿಸಿದ ಮಹಾನ್‌ ಚೈತನ್ಯ ಅವರು ಎಂದು ಸಂತಾಪ ಹೇಳಿಕೆಯಲ್ಲಿ ನೆನಪಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-dandeli

Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ

High-Court

Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು

Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು

20

Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು

Dandeli: ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

Dandeli: ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

4-kaup

ನ.8 ರಂದು ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಸಮಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.