ಸುಧಾಕರ್ ಅನರ್ಹಗೊಂಡ ಜಿಲ್ಲೆಯ ಮೊದಲ ಶಾಸಕ
ಮೈತ್ರಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ಶಾಸಕ • ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅನರ್ಹ ಅಸ್ತ್ರ
Team Udayavani, Jul 29, 2019, 10:58 AM IST
ಚಿಕ್ಕಬಳ್ಳಾಪುರ: ಜಿಲ್ಲೆ ರಾಜಕಾರಣದ ಇತಿಹಾಸದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಅನರ್ಹಗೊಂಡ ಶಾಸಕ ಎಂಬ ಅಪ ಖ್ಯಾತಿಗೆ ಈಗ ಚಿಕ್ಕಬಳ್ಳಾಪುರ ಮೊದಲ ಶಾಸಕ ಡಾ.ಕೆ.ಸುಧಾಕರ್ ಒಳಗಾಗಿದ್ದು, ರಾಜ್ಯ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಅನರ್ಹ ಪ್ರಕರಣ ಈಗ ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಹಾಗೂ ಚರ್ಚೆಗೆ ಕಾರಣವಾಗಿದೆ.
ಭಾನುವಾರ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ತುರ್ತು ಸುದ್ದಿಗೋಷ್ಠಿ ನಡೆಸಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಸುಧಾಕರ್ ಸೇರಿದಂತೆ ಕಾಂಗ್ರೆಸ್, ಜೆಡಿಎಸ್‌ನ 14 ಅತೃಪ್ತ ಶಾಸಕರನ್ನು ಅನರ್ಹಗೊಳಿಸಿ ಹೊರಡಿಸಿದ ಆದೇಶ ರಾಜ್ಯ ರಾಜಕೀಯ ವಲಯದಲ್ಲಿ ಮಾತ್ರವಲ್ಲದೇ ಜಿಲ್ಲೆಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ತಂದಿದೆ.
ಅತೃಪ್ತರಿಗೆ ಬಿಗ್ ಶಾಕ್: ರಾಜ್ಯ ಕಾಂಗ್ರೆಸ್, ಜೆಡಿಎಸ್‌ನ 14 ತಿಂಗಳ ಮೈತ್ರಿ ಸರ್ಕಾರದ ಪತನಕ್ಕೆ ರಾಜೀನಾಮೆ ಮೂಲಕ ಕಾರಣವಾದ 17 ಮಂದಿ ಕಾಂಗ್ರೆಸ್, ಜೆಡಿಎಸ್, ಪಕ್ಷೇತರ ಶಾಸಕರು ಮೈತ್ರಿ ಸರ್ಕಾರ ಪತನಗೊಂಡರೂ ಮುಂಬೈನಿಂದ ವಾಪಸ್ಸು ಆಗಿಲ್ಲ.
ಆದರೆ ಸರ್ಕಾರದ ಪತನಕ್ಕೆ ಕಾರಣವಾದ ತಮ್ಮ ಪಕ್ಷಗಳ ಶಾಸಕರನ್ನು ಅನರ್ಹಗೊಳಿಸುವಂತೆ ಆಯಾ ಪಕ್ಷಗಳ ಶಾಸ ಕಾಂಗ ಪಕ್ಷದ ನಾಯಕರು ಸ್ಪೀಕರ್‌ಗೆ ನೀಡಿದ್ದ ದೂರಿನ ಅನ್ವಯ ಸ್ಪೀಕರ್ ವಿಚಾರಣೆ ನಡೆಸಿ ಅನರ್ಹದ ಅಸ್ತ್ರ ಬಳಸುವ ಮೂಲಕ ಅತೃಪ್ತ ಶಾಸಕರಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ. ಅನರ್ಹಗೊಂಡಿ ರುವ ಶಾಸಕರ ಪೈಕಿ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್‌ಶಾಸ ಸುಧಾಕರ್ ಕೂಡ ಒಬ್ಬರು ಎನ್ನುವುದು ಗಮರ್ನಾಹ ಸಂಗತಿ.
ಅನರ್ಹ ಕುಖ್ಯಾತಿ: ಚಿಕ್ಕಬಳ್ಳಾಪುರ ಜಿಲ್ಲೆಯ ರಾಜಕಾರಣದಲ್ಲಿ ಈ ರೀತಿಯ ಯಾವ ಶಾಸಕರು ಕೂಡ ಪಕ್ಷ ವಿರೋಧಿ ಚಟುವಟಿಕೆಗಳಿಂದ ಅನರ್ಹಗೊಂಡ ಉದಾಹರಣೆ ಇಲ್ಲ. ಪಕ್ಷ ವಿರೋಧಿ ಚಟುವಟಿಕೆಗಳಿಂದ ಪಕ್ಷದಿಂದ ಉಚ್ಛಾಟನೆ ಸೇರಿ ದಂತೆ ಚುನಾವಣೆಗಳ ಸಂದರ್ಭದಲ್ಲಿ ಭಿ ಪಾರಂ ಕಳೆದು ಕೊಂಡಿರುವುದು ಬಿಟ್ಟರೆ ಅಧಿಕಾರದಲ್ಲಿರುವಾಗಲೇ ಶಾಸಕ ಸ್ಥಾನದಿಂದ ಅನರ್ಹಗೊಂಡ ಕುಖ್ಯಾತಿಗೆ ಡಾ.ಕೆ.ಸುಧಾಕರ್ ಒಳಗಾಗಿದ್ದಾರೆ.
ಸುಧಾಕರ್ ಮುಂದಿನ ರಾಜಕೀಯ ನಡೆ ಕುರಿತು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕಳೆದ 2018ರ ವಿಧಾನಸಭೆಯ ಸಾರ್ವ ತ್ರಿಕ ಚುನಾವಣೆಯಲ್ಲಿ 30 ಸಾವಿರ ಅತ್ಯಧಿಕ ಮತಗಳ ಅಂತರ ದಿಂದ ಸತತ ಎರಡನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು.
ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅತೃಪ್ತಗೊಂಡು ಕೊನೆ ಗಳಿಗೆಯಲ್ಲಿ ಕೈಗೆ ಬಂದ ಮಹತ್ವದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳದೇ ಮೈತ್ರಿ ಸರ್ಕಾರದ ವಿರುದ್ಧ ಬಂಡಾಯ ಸಾರಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸರ್ಕಾರದ ಪತನಕ್ಕೆ ವರು ಸಹ ಕಾರಣರಾಗಿದ್ದರು.
ರಾಜಕೀಯ ಭವಿಷ್ಯ ಡೋಲಾಯಮಾನ: ಸದ್ಯ ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಸುಧಾಕರ್‌ರ ಮುಂದಿನ ರಾಜಕೀಯ ಭವಿಷ್ಯ ಸದ್ಯಕ್ಕೆ ಡೋಲಾಯಮಾನವಾಗಿದೆ. ಅನರ್ಹದ ಬಗ್ಗೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದರೂ ಸಹ ಪ್ರಕರಣ ಇತ್ಯರ್ಥವಾಗುವವರೆಗೂ ಕ್ಷೇತ್ರದಲ್ಲಿ ಎದುರಾಗುವ ಉಪ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಹೀಗಾಗಿ ಸುಧಾಕರ್ ಸದ್ಯಕ್ಕೆ ರಾಜಕೀಯ ಅನಿಶ್ಚಿತತೆಯ ಕಾರ್ಮೋಡ ದಲ್ಲಿ ಕಾಲ ಕಳೆಯಬೇಕಿದೆ. ಇನ್ನೂ ಸುಧಾಕರ್ ಅನರ್ಹ ಪ್ರಕರಣ ಅವರ ಬೆಂಬಲಿಗರನ್ನು ಚಿಂತೆಗೀಡು ಮಾಡಿದೆ.
ಸ್ಪೀಕರ್ ತೀರ್ಪಿಗೆ ಪರ, ವಿರೋಧ: ಸದ್ಯ ಅತೃಪ್ತ ಶಾಸಕರ ಅನರ್ಹ ಪ್ರಕರಣ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಸ್ಪೀಕರ್ ನಡೆ ಬಗ್ಗೆ ಜಿಲ್ಲೆಯ ರಾಜಕೀಯ ವಲಯದಲ್ಲಿ ಕೂಡ ಪರ, ವಿರೋಧ ಚರ್ಚೆ ಆಗುತ್ತಿದೆ. ಮತ್ತೂಂದು ಕ್ಷೇತ್ರದ ಕೆಲ ಹಳೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸ್ಪೀಕರ್ ಆದೇಶ ಸಂತಸ ತಂದಿದೆ. ಸುಧಾಕರ್‌ಗೆ ತಕ್ಕಪಾಠ ಆಗಬೇಕಿದೆ.
ಪಕ್ಷದಿಂದ ಗೆದ್ದು ಪಕ್ಷಕ್ಕೆ ಮೋಸ ಮಾಡಿದರೆ ಯಾರು ಕ್ಷಮಿಸುವುದಿಲ್ಲ. ಸ್ಪೀಕರ್ ಎಲ್ಲಾ ಪಕ್ಷ ವಿರೋಧಿ ಚಟುವಟಿಕೆಗಳಿಗೆ ತಕ್ಕಪಾಠ ಕಲಿಸಿದ್ದಾರೆಂಬ ಮಾತು ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ಕ್ಷೇತ್ರಕ್ಕೆ ಉಪ ಚುನಾವಣೆ ಖಚಿತ: ಸದ್ಯಕ್ಕೆ ಸ್ಪೀಕರ್ ಆದೇಶ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಬರುವುದು ಖಚಿತವಾಗಿದೆ. ಸ್ಪೀಕರ್ ಆದೇಶ ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರೂ ಇತ್ಯರ್ಥ ಆಗುವುದು ತಡವಾಗಬಹುದು. ಇದರಿಂದ ಅನರ್ಹಗೊಂಡ ಶಾಸಕರ ಕ್ಷೇತ್ರಗಳಿಗೆ ಶೀಘ್ರ ಉಪ ಚುನಾವಣೆ ನಡೆಯಬಹುದು ಎನ್ನಲಾಗುತ್ತಿದೆ. ಸುಧಾಕರ್ ರಾಜೀನಾಮೆ ಕೊಟ್ಟ ದಿನದಿಂದಲೂ ಟಿಕೆಟ್ಗಾಗಿ ರಾಜಕೀಯ ಪಕ್ಷಗಳ ನಾಯಕರ ಕದ ತಟ್ಟಿದ್ದಾರೆ.
● ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.