ಜನರ ಎಚ್ಚರಿಸಲು “ಮತ್ತೆ ಕಲ್ಯಾಣ’ ಅಭಿಯಾನ
Team Udayavani, Jul 30, 2019, 3:05 AM IST
ಬೆಂಗಳೂರು: ಧರ್ಮ- ದೇವರ ಹೆಸರಿನಲ್ಲಿ ನಡೆಯುತ್ತಿರುವ ಮೌಡ್ಯ ಕುರಿತು ಜನರನ್ನು ಎಚ್ಚರಗೊಳಿಸಲು ಸಾಣೇಹಳ್ಳಿಯ ತರಳಬಾಳು ಮಠ ಹಾಗೂ ಸಹಮತ ವೇದಿಕೆ ವತಿಯಿಂದ ಆ.1ರಿಂದ ರಾಜ್ಯಾದ್ಯಂತ “ಮತ್ತೆ ಕಲ್ಯಾಣ’ ಅಭಿಯಾನ ನಡೆಯಲಿದೆ.
ನಯನ ಸಭಾಂಗಣದಲ್ಲಿ ಸೋಮವಾರ ನಡೆದ ಕುರಿತು ಸುದ್ದಿಗೋಷ್ಠಿಯಲ್ಲಿ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸಮಾಜದಲ್ಲಿರುವ ಅಜ್ಞಾನ, ಮೂಢನಂಬಿಕೆ, ಲಿಂಗ ತಾರತಮ್ಯ, ಭ್ರಷ್ಟಾಚಾರ, ಶೋಷಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯದ ವಿವಿಧೆಡೆ ಒಂದು ತಿಂಗಳು ಮತ್ತೆ ಕಲ್ಯಾಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಪ್ರಮುಖವಾಗಿ ಯುವ ಪೀಳಿಗೆಯನ್ನು ಗಮನದಲ್ಲಿರಿಸಿಕೊಂಡು ಅಭಿಯಾನ ಆರಂಭಿಸಿದೆ. ಪ್ರಸ್ತುತ ದಿನಗಳಲ್ಲಿ ರಾಜಕೀಯ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳು ಹದಗೆಟ್ಟಿದ್ದು, ಅವುಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಸ್ವತ್ಛ ಮಾಡುವ ಉದ್ದೇಶವೂ ಇದೆ ಎಂದರು.
ಆ.1ರಂದು ಅಕ್ಕನಾಗಲಾಂಬಿಕೆ ಐಕ್ಯ ಸ್ಥಳವಾದ ತರೀಕೆರೆಯಲ್ಲಿ ಚಿಂತಕ ಗೊ.ರು. ಚನ್ನಬಸಪ್ಪ ಅವರು ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಅಂದು ಸಾಹಿತಿ ಪ್ರೊ. ರಹಮತ್ ತರೀಕೆರೆ ಹಾಗೂ ಶರಣೆ ಗಂಗಾಂಬಿಕಾ ಬಸವರಾಜು ಉಪನ್ಯಾಸ ನೀಡಲಿದ್ದಾರೆ. ಆ.30ರಂದು ಬಸವಕಲ್ಯಾಣದಲ್ಲಿ ಸಮಾರೋಪ ನಡೆಯಲಿದ್ದು, ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ ಭಾಷಣ ಮಾಡಲಿದ್ದಾರೆ.
ಪ್ರತಿ ದಿನ ಒಂದೊಂದು ಜಿಲ್ಲೆಯಲ್ಲಿ ಆಯಾ ಕಾಲೇಜು ವಿದ್ಯಾರ್ಥಿಗಳೊಂದಿಗೆ ಬಸವಾದಿ ಶರಣರ ವಿಷಯಗಳನ್ನು ಚರ್ಚಿಸಲಾಗುತ್ತಿದೆ. ಸಂಜೆ ವಿವಿಧ ಧಾರ್ಮಿಕ ಗುರುಗಳ ಜತೆ ಚರ್ಚೆ, ಸಂವಾದ ನಡೆಸಲಾಗುತ್ತದೆ. ಸಾರ್ವಜನಿಕ ಸಮಾವೇಶ, ವಚನಗೀತೆ, ಉಪನ್ಯಾಸ, ಆಶೀರ್ವಚನ ನಡೆಯಲಿದೆ ಎಂದು ತಿಳಿಸಿದರು. ಈ ವೇಳೆ ನಿವೃತ್ತ ಐಎಎಸ್ ಅಧಿಕಾರಿ ಚಿರಂಜೀವಿಸಿಂಗ್ ಅವರು “ಮತ್ತೆ ಕಲ್ಯಾಣ’ ವೆಬ್‌ಸೈಟ್‌ಗೆ ಚಾಲನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.