ಸಿದ್ದಾರ್ಥ ದುರಂತ ಅಂತ್ಯ; ಚಿಕ್ಕಮಗಳೂರಿನಲ್ಲಿ ಗಣ್ಯರಿಂದ ಅಂತಿಮ ದರ್ಶನ


Team Udayavani, Jul 31, 2019, 10:18 AM IST

Death

ಮಂಗಳೂರು/ಚಿಕ್ಕಮಗಳೂರು: ಕಾಫಿ ಡೇ ಸಂಸ್ಥಾಪಕ, ಮಾಜಿ ಕೇಂದ್ರ ಸಚಿವ ಎಸ್ ಎಂ ಕೃಷ್ಣ ಅಳಿಯ ವಿಜಿ ಸಿದ್ದಾರ್ಥ ಮೃತದೇಹ ಬುಧವಾರ ಬೆಳಗ್ಗೆ ಮಂಗಳೂರಿನ ಹೊಯ್ಗೆ ಬಜಾರ್ ತೀರದಲ್ಲಿ ಪತ್ತೆಯಾಗಿತ್ತು. ಸಿದ್ದಾರ್ಥ ಹುಟ್ಟೂರು ಚಿಕ್ಕಮಗಳೂರಿನಲ್ಲಿಯೇ ಅಂತ್ಯಸಂಸ್ಕಾರ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದು ವರದಿ ತಿಳಿಸಿದೆ.

ಸಂಜೆ 6.30ರ ನಂತರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಿದ್ದಾರ್ಥ ಅವರ ಹುಟ್ಟೂರಾದ ಚಿಕ್ಕಮಗಳೂರಿನ ಕಾಫಿ ಎಸ್ಟೇಟ್ ನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಸದಾಶಿವನಗರದಿಂದ ಎಸ್ ಎಂ ಕೃಷ್ಣ,  ಪತ್ನಿ ಪ್ರೇಮಾ, ಮಗಳು ಮಾಳವಿಕಾ ಸೇರಿದಂತೆ ಸಿದ್ದಾರ್ಥ ಕುಟುಂಬಸ್ಥರು ಚಿಕ್ಕಮಗಳೂರು ತಲುಪಿದ್ದಾರೆ.

ಸೋಮವಾರ ಸಂಜೆಯಿಂದ ಮಂಗಳೂರು-ಉಳ್ಳಾಲ ಸಮೀಪದ ನೇತ್ರಾವತಿ ನದಿ ಪ್ರದೇಶದ ಬಳಿ ಎಜಿ ಸಿದ್ದಾರ್ಥ ನಾಪತ್ತೆಯಾಗಿರುವುದಾಗಿ ಸಿದ್ದಾರ್ಥ ಕಾರು ಚಾಲಕ ಹೇಳಿಕೆ ನೀಡಿದ್ದರು. ಬಳಿಕ ಅಗ್ನಿಶಾಮಕ ದಳ, ಎನ್ ಡಿಆರ್ ಎಫ್, ಹೋವರ್ ಕ್ರಾಫ್ಟ್, ಮುಳುಗು ತಜ್ಞರು ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದರು.

ಮಂಗಳವಾರ ತಡರಾತ್ರಿವರೆಗೂ ಶೋಧ ಕಾರ್ಯಾಚರಣೆ ನಡೆದಿತ್ತಾದರೂ ಯಾವುದೇ ಸುಳಿವು ಪತ್ತೆಯಾಗಿರಲಿಲ್ಲವಾಗಿತ್ತು. ಬುಧವಾರ ಬೆಳಗ್ಗೆ ಮಂಗಳೂರಿನ ಹೊಯ್ಗೆ ಬಜಾರ್ ತೀರದ ಬಳಿ ಮೀನುಗಾರರಿಗೆ ಶವ ಸಿಕ್ಕಿತ್ತು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಮೂಲಕ ಸಿದ್ದಾರ್ಥ ಪ್ರಕರಣದ ಊಹಾಪೋಹಕ್ಕೆ ತೆರೆ ಬಿದ್ದಿದಂತಾಗಿದೆ.

ಚಿಕ್ಕಮಗಳೂರು ತಲುಪಿದ ಸಿದ್ದಾರ್ಥ ಮೃತದೇಹ, ಅಂತಿಮ ದರ್ಶನ

ಮಂಗಳೂರಿನಿಂದ ಆ್ಯಂಬುಲೆನ್ಸ್ ನಲ್ಲಿ ಸಿದ್ದಾರ್ಥ ಮೃತದೇಹ ಚಿಕ್ಕಮಗಳೂರು ತಲುಪಿದ್ದು, ಗಣ್ಯಾತೀಗಣ್ಯರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಸಿದ್ದಾರ್ಥ ಪತ್ನಿ ಮಾಳವಿಕಾ, ಮಾವ ಎಸ್.ಎಂ.ಕೃಷ್ಣ, ಅತ್ತೆ ಪ್ರೇಮಾ, ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಹಾಗೂ ಕುಟುಂಬಸ್ಥರು ಸಿದ್ದಾರ್ಥ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.

ಕಾಫಿ ಡೇ ಮಾಲೀಕರಾದ ಹಾಗೂ ಉದ್ಯಮಿ  ದಿ ವಿ.ಜಿ.ಸಿದ್ದಾರ್ಥ್  ಅವರ   ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಚಿಕ್ಕಮಗಳೂರಿನ  ಚಿಕ್ಕಮಗಳೂರು – ಕಡೂರು ರಸ್ತೆಯಲ್ಲಿರುವ ಅವರ ಎಬಿಸಿ  ಕಚೇರಿಯ ಅವರಣದಲ್ಲಿ ಮಧ್ಯಾಹ್ನ 2 ಗಂಟೆಯಿಂದ 4.30 ರವರಗೆ‌ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿದೆ. ನಂತರ ದಿವಂಗತ ‌ಅಂತ್ಯ ಸಂಸ್ಕಾರವನ್ನು ಅವರ ಸ್ವಗ್ರಾಮ ಬೇಲೂರು ತಾಲ್ಲೂಕಿನ ಚೇತನಹಳ್ಳಿಯಲ್ಲಿ ನೆರೆವೇರಿಸಲಾಗುತ್ತದೆ ಎಂದು ಎಸ್ ಎಂ ಕೃಷ್ಣ ಮತ್ತು ವಿಜಿ ಸಿದ್ದಾರ್ಥ ಕುಟುಂಬ ಪ್ರಕಟಣೆಯಲ್ಲಿ ತಿಳಿಸಿತ್ತು.

ಟಾಪ್ ನ್ಯೂಸ್

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.