ಕಠಿಣ ಪರಿಶ್ರಮದಿಂದ ಸಾಧನೆ
ವಿದ್ಯಾರ್ಥಿಗಳು ಸಮಸ್ಯೆಗಳ ನಡುವೆ ಶ್ರಮಪಟ್ಟಲ್ಲಿ ಖಂಡಿತಾ ಫಲ
Team Udayavani, Jul 31, 2019, 11:24 AM IST
ಯಾದಗಿರಿ: ಟೋಕ್ರೆ ಕೋಲಿ ಸಮಾಜದ ಜಿಲ್ಲಾ ಕಾರ್ಯಾಲಯದ ಆವರಣದಲ್ಲಿ ನೀಟ್‌ನಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಯಾದಗಿರಿ: ನೀಟ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಾಧನೆ ಮಾಡಿ ಉಚಿತವಾಗಿ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದ ಜಿಲ್ಲೆಯ ಮೂವರು ಸಾಧಕ ವಿದ್ಯಾರ್ಥಿಗಳನ್ನು ಟೋಕ್ರೆ ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಕೆ. ಮುದ್ನಾಳ ತಮ್ಮ ಕಾರ್ಯಾಲಯದಲ್ಲಿ ಸನ್ಮಾನಿಸಿದರು.
ಈ ವೇಳೆ ಮಾತನಾಡಿ ಅವರು, ಜಿಲ್ಲೆಯಲ್ಲಿ ಮೂವರು ವಿದ್ಯಾರ್ಥಿಗಳು ಗರಿಷ್ಠ ಸಾಧನೆ ಮಾಡಿದ್ದು, ಇತರರಿಗೆ ಮಾದರಿಯಾಗಿದೆ. ಹಿಮಲಾಪುರದ ಸಾಯಿ ಕಿರಣರೆಡ್ಡಿ 631 ಅಂಕ ಪಡೆಯುವ ಮೂಲಕ ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಸೀಟು ಪಡೆದುಕೊಂಡಿರುವುದು ನಾಡಿಗೆ ಮಾದರಿಯಾಗಿದೆ. ಹಿಮಲಾಪುರ ಗ್ರಾಮದ ಭವಾನಿ 507 ಅಂಕ ಗಳಿಸಿ ಬಳ್ಳಾರಿ ವಿಜಯನಗರ ಮೆಡಿಕಲ್ ಕಾಲೇಜಿನಲ್ಲಿ ಉಚಿತ ಸೀಟು ಪಡೆದುಕೊಂಡಿದ್ದಾಳೆ. ಇನ್ನು ಬೆಳಗೇರಾ ಗ್ರಾಮದ ನಿತೀಶಕುಮಾರ 497 ಅಂಕ ಗಳಿಸಿ ವಿಮ್ಸ್‌ನಲ್ಲಿಯೇ ಸೀಟು ಪಡೆದುಕೊಂಡು ಸಾಧನೆ ಗೈದಿರುವುದು ವಿಶೇಷ. ಈ ಮೂವರದ್ದು, ಜಿಲ್ಲೆಗೆ ಹೆಮ್ಮೆ ತರುವ ಸಾಧನೆಯಾಗಿದೆ ಎಂದು ಕೊಂಡಾಡಿದರು.
ಇದೇ ಸಂದರ್ಭದಲ್ಲಿ ಮೂವರು ಸಾಧಕ ವಿದ್ಯಾರ್ಥಿಗಳ ಪೋಷಕರಿಗೂ ಸನ್ಮಾನ ನೆರವೇರಿಸಲಾಯಿತು. ಮೂವರು ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದು, ಕಠಿಣ ಪರಿಶ್ರಮದಿಂದ ಓದಿದಾಗ ಮಾತ್ರ ಇಂತಹ ಸಾಧನೆ ಮಾಡಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಸಮಸ್ಯೆಗಳ ನಡುವೆಯೇ ಶ್ರಮಪಟ್ಟಲ್ಲಿ ಖಂಡಿತ ಫಲ ಸಿಗುತ್ತದೆ ಎನ್ನಲು ಈ ಮೂವರು ಸಾಧಾರಣ ವಿದ್ಯಾರ್ಥಿಗಳ ಅಸಾಧಾರಣ ಸಾಧನೆ ಸಾಕ್ಷಿಯಾಗಿದೆ ಎಂದರು.
ನಿಂಗಪ್ಪ, ಮಾರ್ಥಂಡಪ್ಪ ಮೈಲಾಪುರ, ನಾಗಪ್ಪ ತಡಿಬಿಡಿ, ಗುಂಜಲಪ್ಪ ಆಶನಾಳ, ಭೀಮರಾಯ ಗಣಪೂರ, ಶಂಕರ ಬಸವರಾಜಪ್ಪ ಮುಷ್ಟೂರ, ಸಾಯಿಬಣ್ಣ ನೀಲಳ್ಳಿ, ನರಸಪ್ಪ ಬಾಗ್ಲಿ, ಭೀಮರಾಯ ಕಿಲ್ಲನಕೇರಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.