ಅಧಿಕಾರಿಗಳ ಮೇಲೆ ಹಲ್ಲೆ: ಪಾಲಿಕೆ ನೌಕರರ ಆಕ್ರೋಶ
ಪ್ಲಾಸ್ಟಿಕ್ ನಿಷೇಧ ಕಾರ್ಯಾಚರಣೆ ವೇಳೆ ನಡೆದಿತ್ತು ಹಲ್ಲೆ
Team Udayavani, Jul 31, 2019, 12:36 PM IST
ಕಲಬುರಗಿ: ಪ್ಲಾಸ್ಟಿಕ್ ನಿಷೇಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಅಧಿಕಾರಿಗಳ ಮೇಲೆ ಬೇಕರಿ ಸಿಬ್ಬಂದಿ ಹಲ್ಲೆ ಮಾಡಿದ್ದನ್ನು ಖಂಡಿಸಿ ಮಹಾನಗರ ಪಾಲಿಕೆ ಕಚೇರಿ ಎದುರು ಪಾಲಿಕೆ ನೌಕರರು ಮತ್ತು ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಕಲಬುರಗಿ: ಪ್ಲಾಸ್ಟಿಕ್ ನಿಷೇಧ ಕಾರ್ಯಾಚರಣೆ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳ ಮೇಲೆ ಬೇಕರಿ ಸಿಬ್ಬಂದಿ ಹಲ್ಲೆ ಮಾಡಿದ ಘಟನೆ ಖಂಡಿಸಿ ಮಹಾನಗರ ಪಾಲಿಕೆ ಕಚೇರಿ ಎದುರು ಪಾಲಿಕೆ ನೌಕರರು ಮತ್ತು ಪೌರ ಕಾರ್ಮಿಕರು ಬೃಹತ್ ಪ್ರತಿಭಟನೆ ನಡೆಸಿದರು.
ಜಿಲ್ಲಾದ್ಯಂತ ಪ್ಲಾಸ್ಟಿಕ್ ನಿಷೇಧ ಅಭಿಯಾನ ಕೈಗೊಳ್ಳಲಾಗುತ್ತಿದ್ದು, ಸೋಮವಾರ ಸಂಜೆ ಏಶಿಯನ್ ಮಾಲ್ನಲ್ಲಿರುವ ಬೇಕರಿ ಮೇಲೆ ಪಾಲಿಕೆ ಪರಿಸರ ಮತ್ತು ಆರೋಗ್ಯ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಬೇಕರಿ ಮಾಲೀಕರು ಮತ್ತು ಕೆಲಸಗಾರರು ಅಧಿಕಾರಿಗಳನ್ನು ನಿಂದಿಸಿ, ಹಲ್ಲೆ ಮಾಡಿದ್ದಾರೆ ಎಂದು ಕಪ್ಪು ಪಟ್ಟಿ ಕಟ್ಟಿಕೊಂಡು ಖಂಡಿಸಿದರು.
ಹಸಿರು ನ್ಯಾಯಾಧೀಕರಣ ನಿರ್ದೇಶನದಂತೆ ಪ್ಲಾಸ್ಟಿಕ್ ಬಳಕೆ ನಿಷೇಧ ಹೇರಲಾಗಿದೆ. ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಮಾರಾಟಗಾರರು ಹಾಗೂ ಬಳಕೆದಾರರ ವಿರುದ್ಧ ಪಾಲಿಕೆಯಿಂದ ದಾಳಿ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಹಲವಾರು ಮಳಿಗೆಗಳ ಮೇಲೆ ದಾಳಿ ಮಾಡಿ ಪ್ಲಾಸ್ಟಿಕ್ ಜಪ್ತಿ ಮಾಡಿ, ದಂಡ ವಿಧಿಸಲಾಗುತ್ತಿದೆ. ಅದರಂತೆ ಬೇಕರಿ ಮೇಲೂ ದಾಳಿ ನಡೆಸಲಾಗಿತ್ತು. ಆದರೆ, ಬೇಕರಿ ಪ್ರವೇಶಿಸುತ್ತಿದ್ದಂತೆ ಬೇಕರಿಯವರು ತಡೆದು ನಿಂದಿಸಿದರು. ಅಲ್ಲದೇ, ಮಹಿಳಾ ಪರಿಸರ ಅಭಿಯಂತರರ ಮೇಲೆ ಹಲ್ಲೆ ನಡೆಸಿದರು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಬೇಕರಿಯಲ್ಲಿ 25 ಕೆ.ಜಿಗೂ ಅಧಿಕ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಇದನ್ನು ಅರಿತೇ ದಾಳಿ ಮಾಡಲಾಗಿತ್ತು. ಅಧಿಕಾರಿಗಳ ಮೇಲೆ ಹಲ್ಲೆ ಮತ್ತು ನಿಂದಿಸಿದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ನೌಕರರು ಮತ್ತು ಪೌರ ಕಾರ್ಮಿಕರು ಘೋಷಣೆ ಕೂಗಿದರು. ಪ್ರತಿಭಟನೆಗೆ ಮಾಜಿ ಮೇಯರ್ ಶರಣು ಮೋದಿ ಬೆಂಬಲ ಸೂಚಿಸಿದರು.
ಪರಿಸರ ಅಭಿಯಂತರೆ ಸುಷ್ಮಾ ಸಾಗರ, ಆರೋಗ್ಯ ನಿರೀಕ್ಷರಾದ ರಾಜಕುಮಾರ, ಅವಿನಾಶ, ವೀರಭದ್ರ ಸಿಂಪಿ ಹಾಗೂ ನೌಕರರು, ಪೌರ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಕೆಲ ದಿನಗಳ ಹಿಂದೆ ಜೇವರ್ಗಿ ಪಟ್ಟಣದಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಜಪ್ತಿ ಮಾಡಿದ್ದಕ್ಕೆ ವರ್ತಕರು, ಸಣ್ಣ ಮತ್ತು ಬೀದಿ ವ್ಯಾಪಾರಿಗಳು ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ. ಜತೆಗೆ ಪುರಸಭೆ ಟ್ರ್ಯಾಕ್ಟರ್ ಅಡ್ಡಗಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ
Ullal: ನ್ಯೂಪಡ್ಪುವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ
Hosanagara: ನಗರದ ಹೋಬಳಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ
Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್; ಪ್ರವಾಸಿಗರಿಗೆ ಹೊಸ ಆಕರ್ಷಣೆ
Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.