ಸ್ವಚ್ಛತೆಯಿಂದ ಡೆಂಘೀ ನಿಯಂತ್ರಣ: ಕಾಪ್ಸೆ
ತೊಟ್ಟಿ-ಬ್ಯಾರಲ್ ನೀರನ್ನು ವಾರಕ್ಕೊಮ್ಮೆ ಶುಚಿಗೊಳಿಸಿ•ತ್ಯಾಜ್ಯದಿಂದ ಮಲೀನ ಪರಿಸರ ನಿರ್ಮಾಣ
Team Udayavani, Jul 31, 2019, 12:45 PM IST
ವಿಜಯಪುರ: ನಗರದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಘೀ ವಿರೋಧ ಮಾಸಾಚರಣೆ ಜನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ಡಿಎಚ್ಒ ಡಾ| ಮಹೇಂದ್ರ ಕಾಪ್ಸೆ ಚಾಲನೆ ನೀಡಿದರು.
ವಿಜಯಪುರ: ಸುತ್ತ ಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಡುವುದರಿಂದ ಸೊಳ್ಳೆ ಉತ್ಪತ್ತಿಯನ್ನು ತಡೆಗಟ್ಟುವುದರ ಜೊತೆಗೆ ಮಾರಣಾಂತಿಕ ಡೆಂಘೀ ಜ್ವರ ನಿಯಂತ್ರಣ ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಮಹೇಂದ್ರ ಕಾಪ್ಸೆ ಸಲಹೆ ನೀಡಿದರು.
ಮಂಗಳವಾರ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ನಗರದ ಸರಕಾರಿ ಪಪೂ ಮಹಾವಿದ್ಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಘೀ ವಿರೋಧಿ ಮಾಸಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಗರ ಪ್ರದೇಶಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ವಾಸಿಸುವುದರಿಂದ ಹೆಚ್ಚುತ್ತಿರುವ ತ್ಯಾಜದಿಂದ ಮಲೀನ ಪರಿಸರ ನಿರ್ಮಾಣವಾಗಿ, ರೋಗಕಾರಕ ಸೊಳ್ಳೆಗಳ ಉತ್ಪಾದನೆಗೆ ಕಾರಣವಾಗುತ್ತಿದೆ ಎಂದರು.
ಹೀಗಾಗಿ ಸೀಮಿತ ಸ್ಥಳದಲ್ಲಿ ಸಾರ್ವಜನಿಕರು ಎಲ್ಲೆಂದರದಲ್ಲಿ ಎಸೆಯುವ ವಿಲೇವಾರಿಗೊಳ್ಳುವ ವಸ್ತುಗಳಿಂದಾಗಿ ಮಾಲಿನ್ಯ ಸೃಷ್ಟಿಯಾಗುತ್ತಿದೆ. ವಾಸಿಸುವ ಪ್ರದೇಶದಲ್ಲಿ ಸ್ವಚ್ಛತೆ ಮನೋಭಾವ ಹೊಂದಿದ್ದಾರೆ. ಸೊಳ್ಳೆಗಳ ಉತ್ಪತ್ತಿಯಾಗಿ ಮಾರಣಾಂತಿಕ ರೋಗವಾದ ಡೆಂಘೀ ಜ್ವರಕ್ಕೆ ಆಮಂತ್ರಣ ನೀಡಿದಂತಾಗುತ್ತದೆ. ಆದ್ದರಿಂದ ತಮ್ಮ ಮನೆಯನ್ನು ಸ್ವಚ್ಛವಾಗಿಡುವುದರ ಜೊತೆಗೆ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಡಲು ಮುಂಗಾಗಬೇಕು ಎಂದು ಹೇಳಿದರು.
ಮನೆಯಲ್ಲಿ ವಾರಗಟ್ಟಲೆ ನೀರನ್ನು ತೊಟ್ಟಿಗಳಲ್ಲಿ ಶೇಖರಿಸುವುದು, ತೆಂಗಿನ ಚಿಪು, ಟೈರ್‌ಗಳು, ಪ್ಲಾಸ್ಟಿಕ್ ಮುಂತಾದ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡುವುದು, ಮುಂತಾದ ಅನಿಯಂತ್ರಿತ ಚಟುವಟಿಕೆಗಳನ್ನು ನಿಲ್ಲಿಸಿ, ಇಂತಹ ವಸ್ತುಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಇಲಾಖೆಗೆ ತಿಳಿಸುವುದು, ತಮ್ಮ ಕರ್ತವ್ಯವಾಗಿರುತ್ತದೆ. ಈ ಕಾರ್ಯಾತ್ಮಕ ಚಟುವಟಿಕೆಯಲ್ಲಿ ಮುಂದಾದರೆ ಸೊಳ್ಳೆಗಳನ್ನು ಉತ್ಪತ್ತಿಯನ್ನು ತಡೆಗಟ್ಟಬಹುದು ಎಂದರು.
ಮನೆಗಳಲ್ಲಿರುವ ತೊಟ್ಟಿ, ಬ್ಯಾರಲ್ಗಳಲ್ಲಿನ ನೀರನ್ನು ವಾರಕ್ಕೊಮ್ಮೆ ಶುಚಿಗೊಳಿಸಬೇಕು. ಔಷಧ ಸಿಂಪಡಿಸುವುದು, ಮುಂತಾದ ಕೆಲಸಗಳನ್ನು ಸ್ವ ಹಿತಾಸಕ್ತಿಯಿಂದ ಮಾಡಬೇಕು. ಡೆಂಘೀ ಮಾರಣಾಂತಿಕ ರೋಗವಾಗಿದ್ದು, ಈಜಿಫ್ತೆ ಸೊಳ್ಳೆ ಕಡಿತದಿಂದ ಬರುತ್ತದೆ. ಈ ಸೊಳ್ಳೆತಗಳ ಕಡಿತದಿಮದ ಡೆಂಘೀ ಜ್ವರ ಲಕ್ಷಣಗಳು ಕಂಡು ಬಂದಲ್ಲಿ ಯಾವುದೇ ಸರ್ಕಾರಿ ಆಸ್ಪತ್ರೆಗೆ ತೆರಳಿ ಉಚಿತ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.
ಜಿಲ್ಲಾ ಕೀಟ ಶಾಸ್ತ್ರಜ್ಞ ರಿಯಾಜ್ ದೇವಳ್ಳಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಈ ರೋಗದ ಲಕ್ಷಣಗಳು ಹೆಚ್ಚಾಗಿ ಕಂಡು ಬಂದಿದ್ದು, ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು. ಚರಂಡಿ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪ್ಲಾಸ್ಟಿಕ್ ವಿಲೇವಾರಿಯಂತಹ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಕೊಳ್ಳಬೇಕು. ತಾವು ವಾಸಿಸುವ ಪ್ರದೇಶವನ್ನು ಸೊಳ್ಳೆ ಮುಕ್ತ ಪ್ರಾದೇಶಿಕವಾಗಿ ಮಾರ್ಪಡಿಸುವಂತೆ ಮನೋಭಾವ ವಿದ್ಯಾರ್ಥಿಗಳಲ್ಲಿ ಮೂಡಬೇಕು ಎಂದು ಹೇಳಿದರು.
ಜಿಲ್ಲಾ ಮಲೇರಿಯಾ ಅಕಾರಿ ಡಾ| ಜೈಬುನ್ನೀಸಾ ಬೀಳಗಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಎಂ.ಬಿ. ಬಿರಾದಾರ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜ್ ಪ್ರಾಂಶುಪಾಲ ಡಾ| ಆರ್.ಎಸ್. ಕಲ್ಲೂರಮಠ, ಪ್ರೊ| ಚಿದಾನಂದ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಆರ್. ಬಾಗವಾನ, ಕುಟುಂಬ ಕಲ್ಯಾಣಾಧಿಕಾರಿ ರಾಜೇಶ್ವರ ಗೊಲಗೇರಿ, ತಾಲೂಕು ಆರೋಗ್ಯ ಅಧಿಕಾರಿ ಡಾ| ಕವಿತಾ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಕಾರ್ಯಕ್ರಮ ಅಧಿಕಾರಿಗಳು, ತಾಲೂಕಾಧಿಕಾರಿಗಳು, ಜಿಲ್ಲೆಯ ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.