ಆಧಾರ ನೋಂದಣಿಗೆ ಹರಸಾಹಸ

•ಹೆಚ್ಚಿನ ಕೇಂದ್ರ ತೆರೆಯದ ಸರಕಾರ•ಪ್ರತಿಯೊಂದು ಕೆಲಸಕ್ಕೂ ಆಧಾರ್‌ ಕಾರ್ಡ್‌ ಅಗತ್ಯ

Team Udayavani, Jul 31, 2019, 12:59 PM IST

uk-tdy-3

ಭಟ್ಕಳ: ಆಧಾರ ಕಾರ್ಡ್‌ ನೋಂದಣಿಗಾಗಿ ಸರತಿ ಸಾಲಿನಲ್ಲಿ ನಿಂತ ಜನ.

ಭಟ್ಕಳ: ತಾಲೂಕಿನಲ್ಲಿ ಆಧಾರ ಕಾರ್ಡ್‌ ನೋಂದಣಿ, ತಿದ್ದುಪಡಿಗಾಗಿ ಹರಸಾಹಸ ಪಡಬೇಕಾಗಿ ಬಂದಿದೆ. ಒಂದೆಡೆ ಸರಕಾರ ಎಲ್ಲದಕ್ಕೂ ಆಧಾರ ಕಾರ್ಡ ಕೇಳಿದರೆ, ಇನ್ನೊಂದೆಡೆ ಆಧಾರ ಸೆಂಟರ್‌ಗಳನ್ನೆಲ್ಲ ಮುಚ್ಚಿ ಕೇವಲ ನೆಮ್ಮದಿ ಕೇಂದ್ರ ಮತ್ತು ಅಂಚೆ ಕಚೇರಿಗಳಲ್ಲಿ ಮಾತ್ರ ಆಧಾರ ಕಾರ್ಡ್‌ ನೀಡುವ ಹಾಗೂ ತಿದ್ದುಪಡಿ ಮಾಡಲಾಗುತ್ತಿದ್ದು, ಇದರಿಂದ ಜನ ಸಂಕಟ ಪಡುವಂತಾಗಿದೆ.

ಈ ಹಿಂದೆ ಗ್ರಾಪಂ ಮಟ್ಟದಲ್ಲಿ ಆಧಾರ ಕಾರ್ಡ್‌ ನೋಂದಣಿ ಮಾಡಲಾಗುತ್ತಿದ್ದರೆ ನಂತರದ ದಿನಗಳಲ್ಲಿ ಅವುಗಳನ್ನು ಕೂಡಾ ಬಂದ್‌ ಮಾಡಲಾಯಿತು. ಅಂದು ಆಧಾರ ಕಾರ್ಡ್‌ ಎಲ್ಲ ಕಡೆಗಳಲ್ಲಿಯೂ ಕಡ್ಡಾಯವಲ್ಲದ ಕಾರಣ ಜನತೆ ಹೆಚ್ಚು ಆಸಕ್ತಿ ತೋರಿಸಿಲ್ಲವಾಗಿತ್ತು. ಇಂದು ಆಧಾರ್‌ ಕಡ್ಡಾಯಗೊಳಿಸಿದ ಸರಕಾರ ಆಧಾರ್‌ ಕೇಂದ್ರಗಳನ್ನು ಹೆಚ್ಚುವರಿಯಾಗಿ ತೆರೆದಿಲ್ಲ. ಇದರಿಂದ ನಾಗರಿಕರು ಪರದಾಡುವಂತಾಗಿದೆ.

ಇಲ್ಲಿನ ನೆಮ್ಮದಿ ಕೇಂದ್ರದಲ್ಲಿ ಆಧಾರ ನೋಂದಣಿ, ತಿದ್ದುಪಡಿಗೆ ದಿನಕ್ಕೆ ಕೇವಲ 30 ಜನರಿಗೆ ಮಾತ್ರ ಅವಕಾಶವಿದ್ದು ಟೋಕನ್‌ ಪದ್ಧತಿಯಿಂದ ಜನತೆಗೆ ಅವಕಾಶ ಮಾಡಿಕೊಡುತ್ತಿದ್ದಾರೆ. ದಿನಾಲೂ ನೂರಾರು ಜನ ಟೋಕನ್‌ ಪಡೆಯಲು ಬರುತ್ತಿರುವುದರಿಂದ ಮೊದಲು ಬಂದವರಿಗೆ ಮೊದಲ ಆದ್ಯತೆ ಎನ್ನುವುದರಿಂದ ಬೆಳಗಿನಜಾವ 3 ಗಂಟೆಗೆ ಸರತಿ ಸಾಲು ಆರಂಭವಾಗುತ್ತದೆ. ಇದೇ ರೀತಿ ಅಂಚೆ ಕಚೇರಿ ಎದರು ಕೂಡಾ ಬೆಳಗಿನ ಜಾವ 3-4 ಗಂಟೆಗೆ ಸರತಿಯ ಸಾಲು ಆರಂಭವಾಗುತ್ತಿದೆ. ಮಳೆಯನ್ನೂ ಲೆಕ್ಕಿಸದೇ ಚಿಕ್ಕ ಮಕ್ಕಳೊಂದಿಗೆ ಕೂಡಾ ಅನೇಕರು ಬಂದು ಇಲ್ಲಿ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ತಾಲೂಕಿನಲ್ಲಿ ಕೇವಲ ನೆಮ್ಮದಿ ಕೇಂದ್ರ ಮತ್ತು ಅಂಚೆ ಕಚೇರಿಗಳು ಮಾತ್ರ ಆಧಾರ ಕಾರ್ಡ್‌ ನೋಂದಣಿಗೆ ಕೇಂದ್ರಗಳಾಗಿದ್ದರಿಂದ ಜನತೆಯ ನೆಮ್ಮದಿಯೇ ಹಾಳಾಗಿ ಹೋಗಿದೆ.

ಆಧಾರ್‌ ಕಾರ್ಡ ಪಡೆಯುವಲ್ಲಿ ಹಾಗೂ ತಿದ್ದುಪಡಿ ಮಾಡಿಸುವಲ್ಲಿ ಆಗುತ್ತಿರುವ ತೊಂದರೆ ಜಿಲ್ಲಾಡಳಿತದ ಗಮನದಲ್ಲಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಮಾತ್ರ ಜನತೆಯ ಕುರಿತು ಇವರಿಗಿರುವ ಕಾಳಜಿ ವ್ಯಕ್ತವಾಗುತ್ತದೆ. ತಾಲೂಕಾ ಆಡಳಿತವೂ ಸಹ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕೂಡಾ ಮಾಡದಿರುವುದು ಜನತೆಯನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡಿದಂತಾಗಿದೆ.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.