ಗೋಶಾಲೆ ಮುಂದುವರಿಕೆಗೆ ಒತ್ತಾಯ
ಚಳ್ಳಕೆರೆ ತಾಲೂಕಿನ ಗೋಶಾಲೆಗಳನ್ನು ಸ್ಥಗಿತಗೊಳಿಸಿದರೆ ರೈತರು-ಜಾನುವಾರುಗಳಿಗೆ ಸಂಕಷ್ಟ
Team Udayavani, Jul 31, 2019, 1:10 PM IST
ಚಳ್ಳಕೆರೆ: ನಗರದ ಅಜ್ಜಯ್ಯನಗುಡಿ ರಸ್ತೆ ಗೋಶಾಲೆಗೆ ಅಪರ ಜಿಲ್ಲಾಧಿಕಾರಿ ಸಂಗಪ್ಪ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಚಳ್ಳಕೆರೆ: ಕಳೆದ ಒಂದು ವರ್ಷದಿಂದ ತಾಲೂಕಿನಲ್ಲಿ ಎಂಟಕ್ಕೂ ಹೆಚ್ಚು ಗೋಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಗೋಶಾಲೆಗಳಲ್ಲಿ ಜಾನುವಾರುಗಳಿಗೆ ವಿತರಿಸುವ ಮೇವಿನ ಗುಣಮಟ್ಟ ಹಾಗೂ ಅಲ್ಲಿನ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಲು ಅಪರ ಜಿಲ್ಲಾಧಿಕಾರಿ ಸಂಗಪ್ಪ ನೇತೃತ್ವದ ತಂಡ ಮಂಗಳವಾರ ತಾಲೂಕಿನ ವಿವಿಧ ಗೋಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಎ.ಜಿ. ರಸ್ತೆ ಗೋಶಾಲೆ, ಬೊಮ್ಮದೇವರಹಟ್ಟಿ ಹಾಗೂ ನನ್ನಿವಾಳ ಗೋಶಾಲೆಗೆ ಭೇಟಿ ನೀಡಿದ್ದ ಅಧಿಕಾರಿಗಳು, ರೈತರೊಂದಿಗೆ ಚರ್ಚಿಸಿದರು. ಯಾವುದೇ ಕಾರಣಕ್ಕೂ ಗೋಶಾಲೆ ಸ್ಥಗಿತಗೊಳಿಸಬಾರದು. ಈಗಾಗಲೇ ಮಳೆಯ ಪ್ರಮಾಣ ಕ್ಷೀಣಿಸುತ್ತಿದ್ದು ಗೋಶಾಲೆ ಮುಚ್ಚಿದರೆ ಜಾನುವಾರುಗಳ ಸಂಕಷ್ಟ ಹೆಚ್ಚಾಗುತ್ತದೆ ಎಂದು ರೈತರು ಅಪರ ಜಿಲ್ಲಾಧಿಕಾರಿಗಳಿಗೆ ಮನವರಿಕೆ ಮಾಡಿದರು.
ಪ್ರತಿನಿತ್ಯ ಗೋಶಾಲೆಗಳ ಜಾನುವಾರುಗಳಿಗೆ ವಿತರಣೆ ಮಾಡುವ ಹುಲ್ಲಿನ ಪ್ರಮಾಣದ ಬಗ್ಗೆ ಮಾಹಿತಿ ಪಡೆದ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಜಾನುವಾರುಗಳನ್ನು ಬಿಸಿಲಿನಲ್ಲಿ ಕಟ್ಟಿ ಹಾಕಿದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಬಿಸಿಲಿನ ತಾಪಕ್ಕೆ ಜಾನುವಾರುಗಳು ನಲುಗಿಹೋದಂತೆ ಕಂಡು ಬರುತ್ತಿದೆ. ಕೂಡಲೇ ಬಿಸಿಲಿನಲ್ಲಿ ಕಟ್ಟಿ ಹಾಕಿದ ಎಲ್ಲಾ ಜಾನುವಾರುಗಳಿಗೆ ನೆರಳಿನ ವ್ಯವಸ್ಥೆ ಮಾಡುವಂತೆ ಸೂಚಿಸಿದರು.
ಪಶುವೈದ್ಯ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಕೃಷ್ಣಪ್ಪ ಮಾತನಾಡಿ, ಪ್ರತಿನಿತ್ಯ ಜಾನುವಾರುಗಳ ಆರೋಗ್ಯ ತಪಾಸಣೆಯನ್ನು ವೈದ್ಯರ ತಂಡ ನಡೆಸುತ್ತಿದೆ. ತಾಲೂಕಿನ ಯಾವುದೇ ಗೋಶಾಲೆಯಲ್ಲಿ ಜಾನುವಾರುಗಳು ಮೃತಪಟ್ಟಿರುವುದು ವರದಿಯಾಗಿಲ್ಲ. ಗೋಶಾಲೆಯಲ್ಲಿನ ಮೇವು ಹಾಗೂ ನೀರು ಪಡೆದ ಜಾನುವಾರುಗಳು ಆರೋಗ್ಯವಾಗಿವೆ ಎಂದರು.
ಪ್ರತಿಯೊಂದು ಗೋಶಾಲೆಯ ಜವಾಬ್ದಾರಿಯನ್ನು ಪಶುವೈದ್ಯ ಇಲಾಖೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ವಹಿಸಲಾಗಿದೆ. ಅವರೇ ಖುದ್ದಾಗಿ ಗೋಶಾಲೆಗೆ ಭೇಟಿ ನೀಡಿ ಜಾನುವಾರುಗಳ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ಜಾನುವಾರುಗಳನ್ನು ಕಟ್ಟುವ ಸ್ಥಳವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ನೀರಿನ ತೊಟ್ಟಿಯನ್ನು ಶುದ್ಧವಾಗಿ ಇಟ್ಟುಕೊಳ್ಳಬೇಕು. ಕನಿಷ್ಠ ಪಕ್ಷ ಎರಡು ದಿನಕ್ಕೊಮ್ಮೆಯಾದರೂ ನೀರಿನ ತೊಟ್ಟಿಯನ್ನು ಸ್ವಚ್ಛಗೊಳಿಸಿಕೊಳ್ಳಬೇಕು. ಜಾನುವಾರುಗಳಿಗೆ ಯಾವುದೇ ಸೊಂಕು ತಗುಲದಂತೆ ಎಲ್ಲರೂ ಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.
ಕೃಷಿ ಇಲಾಖೆ ಉಪನಿರ್ದೇಶಕ ಸದಾಶಿವ ಮಾತನಾಡಿ, ಸರಿಯಾಗಿ ಮಳೆಯಾಗದೇ ಇರುವುದರಿಂದ ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ. ಜಾನುವಾರುಗಳ ರಕ್ಷಣೆಯ ಸಂಪೂರ್ಣ ಜವಾಬ್ದಾರಿ ಗೋಶಾಲೆಗಳ ಮೇಲಿದೆ. ಪ್ರತಿಯೊಂದು ಗೋಶಾಲೆಗೂ ವಿವಿಧ ಗ್ರಾಮಗಳಿಂದ ಸಾವಿರಾರು ಜಾನುವಾರುಗಳು ಆಗಮಿಸುತ್ತಿದ್ದು, ಮೇವು ವಿತರಣೆ ಕಷ್ಟವಾಗಿದೆ. ಆದರೂ ಸರ್ಕಾರದ ಸೂಚನೆಯಂತೆ ಗೋಶಾಲೆಗಳಿಗೆ ಮೇವು ಪೂರೈಕೆ ಮಾಡಲಾಗುತ್ತಿದೆ. ರೈತರು ಜಾನುವಾರುಗಳ ಮೇವು ಹಾಳಾಗದಂತೆ ಜಾಗ್ರತೆ ವಹಿಸಬೇಕು ಎಂದರು.
ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ ಮಾತನಾಡಿ, ಎ.ಜಿ. ರಸ್ತೆ ಗೋಶಾಲೆಲ್ಲಿ 1500ಕ್ಕೂ ಹೆಚ್ಚು ಜಾನುವಾರುಗಳಿವೆ. ಅದರಲ್ಲಿ 1100 ಜಾನುವಾರುಗಳು ರೈತರಿಗೆ ಸೇರಿದ್ದರೆ, 400ಕ್ಕೂ ಹೆಚ್ಚು ಜಾನುವಾರುಗಳು ದೇವರ ಎತ್ತುಗಳಾಗಿವೆ. ಸರ್ಕಾರದ ಸೂಚನೆಯಂತೆ ಪ್ರತಿ ನಿತ್ಯ ಮೇವು ವಿತರಣೆ ಮಾಡಲಾಗುತ್ತಿದೆ. ನೀರಿನ ವ್ಯವಸ್ಥೆಯೂ ಸಮರ್ಪಕವಾಗಿದೆ. ತಾಲೂಕು ಕಚೇರಿ ಮತ್ತು ತಾಲೂಕು ಪಂಚಾಯತ್ ಸಿಬ್ಬಂದಿ ಇಲ್ಲಿಯೇ ಇದ್ದು ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯುತ್ತಾರೆ. ಪ್ರತಿನ ದಿನ ಒಂದು ಜಾನುವಾರಿಗೆ 5 ಕೆಜಿ ಮೇವು ನೀಡಲಾಗುತ್ತದೆ ಎಂದು ವಿವರಿಸಿದರು. ಗ್ರಾಮ ಲೆಕ್ಕಾಧಿಕಾರಿ ರಾಘವೇಂದ್ರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.