ನಾಟಕದಿಂದ ಭಾವನೆಗಳ ಬೆಸುಗೆ

ಮವಿನಾ ಪ್ರಶಸ್ತಿ ಪ್ರದಾನ ಸಮಾರಂಭ-ರಂಗಾಯಣ ನಾಟಕೋತ್ಸವ ಸಂಪನ್ನ

Team Udayavani, Jul 31, 2019, 3:53 PM IST

31-JUly-38

ಮರಿಯಮ್ಮನಹಳ್ಳಿ: ಜನರ ಭಾವನೆಗಳನ್ನು ಬೆಸೆಯುವ ಕೆಲಸ ನಾಟಕಗಳು ಮಾಡುತ್ತವೆ ಎಂದು ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಹೊಸಪೇಟೆ ತಾಲೂಕು ಅಧ್ಯಕ್ಷ ಡಾ| ಜಿ.ಎಂ. ಸೋಮೇಶ್ವರ ಅಭಿಪ್ರಾಯಪಟ್ಟರು.

ಪಟ್ಟಣದ ದುರ್ಗದಾಸ ಕಲಾ ಮಂದಿರದಲ್ಲಿ ಮರಿಯಮ್ಮನಳ್ಳಿಯ ಪತ್ರಕರ್ತರು, ರಂಗ ಸಂಸ್ಕೃತಿ ಹಾಗೂ ಸೃಷ್ಟಿ ಕಲಾ ಬಳಗದ ಆಶ್ರಯದಲ್ಲಿ ನಡೆದ ಮವಿನಾ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಶಿವಮೊಗ್ಗ ರಂಗಾಯಣ ನಾಟಕೋತ್ಸವದ ಸಮಾರೋಪದಲ್ಲಿ ಅವರು ಮಾತನಾಡಿದರು.

ಬದುಕಿಗೆ ಹತ್ತಿರವಾಗಿರುವ ನಾಟಕ ಪ್ರದರ್ಶನಗಳು ಬಹುಬೇಗ ಜನರ ಮನಸ್ಸನ್ನು ಸೆಳೆಯುತ್ತವೆ. ಮರಿಯಮ್ಮನಹಳ್ಳಿಯು ರಂಗಭೂಮಿ ತರವರೂರಾಗಿದ್ದು, ಇಲ್ಲಿ ರಂಗಭೂಮಿ ಕಲಾವಿದರು ಮನೆಗೊಬ್ಬರು ಸಿಗುತ್ತಾರೆ. ಇಲ್ಲಿನ ಹಿರಿಯರಂಗ ಕಲಾವಿದರಾದ ದುರ್ಗದಾಸ, ಮೈಲಾರಪ್ಪ, ನಾಗರತ್ನಮ್ಮ, ಬಿಎಂಎಸ್‌. ಪ್ರಭು, ಹುರುಕೊಳ್ಳಿ ಮಂಜುನಾಥ, ಜಿ.ಎಂ. ಕೊಟ್ರೇಶ್‌, ರಸೂಲ್ ಸಾಬ್‌ ಸೇರಿದಂತೆ ನೂರಾರು ರಂಗಭೂಮಿ ಕಲಾವಿದರು ಗ್ರಾಮೀಣ ಸೊಗಡನ್ನು ತಮ್ಮದೆ ಆದ ಅಭಿನಯದ ಮೂಲಕ ರಾಜ್ಯಕ್ಕೆ ಸಾರಿದ್ದಾರೆ ಎಂದು ತಿಳಿಸಿದರು.

ಆರಕ್ಷಕ ಉಪ ನಿರೀಕ್ಷಕ ಎಂ. ಶಿವಕುಮಾರ್‌ ಮಾತನಾಡಿ, ಜೀವನದಲ್ಲಿ ನಡೆಯುವಂತ ಪ್ರತಿಯೊಂದು ಘಟನೆಗಳನ್ನು ಕಲಾವಿದರು ತಮ್ಮ ಕಲೆಯ ಮೂಲಕ ನಾಟಕಗಳಲ್ಲಿ ತಿಳಿಸಿಕೊಡುತ್ತಾರೆ. ಪ್ರಸ್ತುತ ಸಾಮಾಜಿಕ ಸಮಸ್ಯೆಗಳನ್ನಿಟ್ಟುಕೊಂಡು ಶಿವಮೊಗ್ಗ ರಂಗಾಯಣ ತಂಡದವರು ಉತ್ತಮ ನಾಟಗಳ ಪ್ರದರ್ಶನ ಮಾಡಿದ್ದಾರೆ. ಮೌಲ್ಯಯುತ ಸಂದೇಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡಾಗ ಮಾತ್ರ ಸಮಾಜ ಬದಲಾವಣೆ ಸಾಧ್ಯ ಎಂದರು.

ಪತ್ರಕರ್ತ ಕಿಚಿಡಿ ಕೊಟ್ರೋಶ್‌ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಸೇವಕ ಕೆ.ಶಿವಮೂರ್ತಿ, ಲಲಿತ ಕಲಾರಂಗದ ಅಧ್ಯಕ್ಷ ಹುರುಕೊಳ್ಳಿ ಮಂಜುನಾಥ, ಸಹಾಯಕ ಪ್ರಾಧ್ಯಾಪಕ ಆರ್‌.ಪಾಂಡುರಂಗ, ಕಾವ್ಯವಾಹಿನಿ ಸಂಸ್ಥೆಯ ಟಿ.ಜ್ಯೋತಿ ರಾಜಣ್ಣ, ಕಲಾವಿದ ಬಿ.ಆನಂದ್‌, ಎಲ್.ಉದಯ್‌, ಮಂಜುಳಾ ಪ್ರಶಾಂತ್‌, ಹರಿಕಥೆ ಮಂಜು, ಎಂ. ಮಹಾಂತೇಶ್‌, ಎಲ್.ಶಾರದಾ, ಯೋಗಾನಂದ, ಎಲ್.ಪ್ರಶಾಂತ್‌ ಕುಮಾರ್‌, ಡಿ. ಹೇಮಂತ್‌, ಎಂ.ಸೋಮೇಶ್‌ ಉಪ್ಪಾರ್‌, ಪಿ.ರಾಮಚಂದ್ರ ಇದ್ದರು.

ನಂತರ ಶಿವಮೊಗ್ಗ ರಂಗಾಯಣ ಕಲಾತಂಡದಿಂದ ಅರವಿಂದ ಮಾಲಗತ್ತಿ ಅವರ ಆತ್ಮಕಥೆ ಆಧಾರಿತ ಗೌರ್ಮೆಂಟ್ ಬ್ರಾಹ್ಮಣ ನಾಟಕ ಪ್ರದರ್ಶನ ಕಂಡಿತು.

ಟಾಪ್ ನ್ಯೂಸ್

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Vidhana-Soudha-CM

Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Hard Disk: ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ

Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Vidhana-Soudha-CM

Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Hard Disk: ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.