ಸಿಎಂಗಾಗಿ ಕಾದು ಕುಳಿತ ಆರ್.ಶಂಕರ್
Team Udayavani, Aug 1, 2019, 3:00 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದೇನೆ ಎಂದು ರಾಜ್ಯಪಾಲರಿಗೆ ಪತ್ರ ಕೊಟ್ಟು ವಿಶೇಷ ವಿಮಾನ ಏರಿದ್ದ ಅನರ್ಹಗೊಂಡಿರುವ ಶಾಸಕ ಆರ್.ಶಂಕರ್ ರಾಜಭವನದಲ್ಲಿ ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಭೇಟಿಗಾಗಿ ಕಾದು ಕುಳಿತಿದ್ದರು. ರಾಜಭವನದಲ್ಲಿ ಉತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ನೀಡುವ ರಾಷ್ಟ್ರಪತಿಗಳ ಪದಕ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪಾಲ್ಗೊಳ್ಳುವುದು ನಿಗದಿಯಾಗಿತ್ತು.
ಈ ಮಾಹಿತಿ ಆಧರಿಸಿ ಆರ್. ಶಂಕರ್ ಸಂಜೆ ನಾಲ್ಕು ಗಂಟೆ ಸುಮಾರಿಗೆ ರಾಜಭವನಕ್ಕೆ ಆಗಮಿಸಿದ್ದರು. ಪೊಲೀಸ್ ಅಧಿಕಾರಿಗಳು ಕುಳಿತಿದ್ದ ಹಿಂಭಾಗದ ಸಾಲಿನಲ್ಲಿ ಏಕಾಂಗಿಯಾಗಿ ಕುಳಿತಿದ್ದರು. ಜೆಡಿಎಸ್‌ನ ವಿಧಾನಪರಿಷತ್ ಸದಸ್ಯ ರಮೇಶ್‌ಗೌಡ ಅವರು ಬಂದ ಬಳಿಕ ಅವರ ಜತೆ ಮಾತುಕತೆಯಲ್ಲಿ ತಲ್ಲೀನರಾದರು.
ನಂತರ ಮುಖ್ಯಮಂತ್ರಿ ಯಡಿಯೂರಪ್ಪನವರು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ತೆರಳಿ ನಮಸ್ಕರಿಸಿದ ಶಂಕರ್ ಬಳಿಕ ಶಾಸಕ ಆರ್. ಅಶೋಕ ಜತೆ ಕುಳಿತು ಕಾರ್ಯಕ್ರಮ ಮುಗಿಯುವ ತನಕವೂ ಅವರ ಜತೆಯಲ್ಲಿದ್ದರು. ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆ ಮಾತುಕತೆಗೆ ಶಂಕರ್ ಒಂದೆರಡು ನಿಮಿಷ ಮಾತನಾಡಿದರು. ಯಡಿಯೂರಪ್ಪ ಹಾಗೂ ಆರ್.ಅಶೋಕ್ ಅವರು ರಾಜಭವನದಿಂದ ನಿರ್ಗಮಿಸಿದ ನಂತರವೂ ಶಂಕರ್, ರಾಜಭವನದ ಉದ್ಯಾನವನದಲ್ಲಿ ಕೆಲ ಕಾಲ ಏಕಾಂಗಿಯಾಗಿದ್ದದ್ದು ಕಂಡು ಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.