ವೈದ್ಯಕೀಯ ಸಂಘದ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ
Team Udayavani, Aug 1, 2019, 3:04 AM IST
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಕಾಯ್ದೆ ಖಂಡಿಸಿ ದೇಶಾದ್ಯಂತ ಭಾರತೀಯ ವೈದ್ಯಕೀಯ ಸಂಘ ಕರೆಕೊಟ್ಟಿದ್ದ ಮುಷ್ಕರಕ್ಕೆ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ನಗರದ ಬಹುತೇಕ ಖಾಸಗಿ ಆಸ್ಪತ್ರೆಗಳು ಕಾರ್ಯನಿರ್ವಹಿಸಿದರೆ, ಮಧ್ಯಾಹ್ನದ ಬಳಿಕ ಕೆಲ ಖಾಸಗಿ ವೈದ್ಯರು ಪ್ರತಿಭಟಿಸಿದರು. ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಿದ್ದು, ರೋಗಿಗಳಿಗೆ ಯಾವುದೇ ತೊಂದರೆಯಾಗಲಿಲ್ಲ. ಚಾಮರಾಜಪೇಟೆಯ ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಶಾಖೆ ಬಳಿ ಸಂಘದ ಸದಸ್ಯ ವೈದ್ಯರು ಬುಧವಾರ ಪ್ರತಿಭಟನೆ ನಡೆಸಿದರು.
ಸಂಘದ ರಾಜ್ಯ ಕಾರ್ಯದರ್ಶಿ ಡಾ.ಎಸ್.ಶ್ರೀನಿವಾಸ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಸೇವೆ ಮಾಡಲು ಪೂರಕ ವೇತನ ಹಾಗೂ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿಲ್ಲ. ಕೇವಲ ಕಾಯ್ದೆ ಮಾಡುವ ಮೂಲಕ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ. ಇದರಿಂದ ವೈದ್ಯ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗಲಿದೆ ಎಂದು ಬೇಸರ ವ್ಯಕ್ತಪಡೆಸಿದರು.
ನೂರಾರು ವೈದ್ಯಕೀಯ ವಿದ್ಯಾರ್ಥಿಗಳು ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸುಗುಣ, ಅಪೋಲೊ ಸೇರಿ ಕೆಲ ಆಸ್ಪತ್ರೆಗಳ ಒಪಿಡಿ ಸ್ವಲ್ಪ ಸಮಯ ಸ್ಥಗಿತಗೊಂಡಿತ್ತು. ಬಹುತೇಕ ರೋಗಿಗಳು ಸರ್ಕಾರಿ ಆಸ್ಪತ್ರೆಗಳ ಕಡೆ ಮುಖ ಮಾಡಿದ್ದರಿಂದ ರೋಗಿಗಳ ಸಂಖ್ಯೆ ಎಂದಿಗಿಂತ ಹೆಚ್ಚಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.