ಸರ್ಕಾರಿ ಯೋಜನೆ ಜನರಿಗೆ ತಲುಪಲಿ: ವಿಶಾಲಾಕ್ಷಿ
ಗ್ರಾಮೀಣ ಜನರ ಸಮಸ್ಯೆಗೆ ಸ್ಪಂದಿಸಿ ಪರಿಹಾರ ದೊರಕಿಸುವುದು ಜನಸಂಪರ್ಕ ಸಭೆಯ ಉದ್ದೇಶ
Team Udayavani, Aug 1, 2019, 11:41 AM IST
ಹೊಸದುರ್ಗ: ಜನಸಂಪರ್ಕ ಸಭೆಯನ್ನು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಉದ್ಘಾಟಿಸಿದರು.
ಹೊಸದುರ್ಗ: ಬಡಜನರ ಶ್ರೇಯೋಭಿವೃದ್ಧಿಗೆ ಸರ್ಕಾರ ಜಾರಿಗೊಳಿಸಿರುವ ಹಲವು ಯೋಜನೆಗಳನ್ನು ಸಮರ್ಪಕವಾಗಿ ಜನರ ಮನೆಬಾಗಿಲಿಗೆ ತಲುಪಿಸಲು ಜನಸಂಪರ್ಕ ಸಭೆಗಳು ಸಹಕಾರಿ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್ ಹೇಳಿದರು.
ತಾಲೂಕಿನ ಮಧುರೆ ಗ್ರಾಮದ ಚನ್ನಕೇಶವ ಪ್ರೌಢಶಾಲೆ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಬುಧವಾರ ಏರ್ಪಡಿಸಿದ್ದ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.
ಚಿತ್ರದುರ್ಗ ಬರಪೀಡಿತ ಜಿಲ್ಲೆಯಾಗಿದ್ದು ಸರ್ಕಾರದ ಯೋಜನೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಬೇಕು. ಅಲ್ಲದೆ ಸ್ಥಳೀಯ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಪರಿಹರಿಸುವುದು ಜನಸಂಪರ್ಕ ಸಭೆಯ ಮುಖ್ಯ ಉದ್ದೇಶ. ‘ನಮ್ಮ ನಡೆ ಅಭಿವೃದ್ಧಿಯ ಕಡೆ’ ಎಂಬ ಘೋಷವಾಕ್ಯದೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮನೆ ಬಾಗಿಲಿಗೆ ಬಂದಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು. ಗ್ರಾಮೀಣ ಭಾಗದ ಜನರು ಜಿಲ್ಲಾಧಿಕಾರಿ ಸೇರಿದಂತೆ ಇನ್ನಿತರ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡಿಯೇ ಇರುವುದಿಲ್ಲ. ಸರ್ಕಾರದ ಹಲವು ಯೋಜನೆಗಳ ಬಗ್ಗೆ ತಿಳಿವಳಿಕೆಯೂ ಇರುವುದಿಲ್ಲ. ಸಣ್ಣಪುಟ್ಟ ಕೆಲಸ ಕಾರ್ಯಗಳಿದ್ದರೂ ಕಚೇರಿಗಳಿಗೆ ಅಲೆದಾಟ ನಡೆಸುತ್ತಾರೆ. ಹಾಗಾಗಿ ಈ ತರಹದ ಜನಸಂಪರ್ಕ ಸಭೆಗಳನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ಜಿಲ್ಲೆಯಲ್ಲಿ ಇದು ಎರಡನೇ ಜನಸಂಪರ್ಕ ಸಭೆಯಾಗಿದೆ ಎಂದರು.
ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಉದ್ಘಾಟಿಸಿ ಮಾತನಾಡಿ, ಮಧುರೆ ಹೋಬಳಿಯ ಜನರು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಜಿಲ್ಲಾಡಳಿತ ಇದನ್ನು ಮನಗಂಡು ಸರ್ಕಾರದ ಸೌಲಭ್ಯಗಳನ್ನು ನೇರವಾಗಿ ತಲುಪಿಸಲು ಜನಸಂಪರ್ಕ ಸಭೆಯನ್ನು ಹಮ್ಮಿಕೊಂಡಿದೆ. ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯಲು ಅರ್ಹರಿದ್ದರೂ ಸೌಲಭ್ಯದಿಂದ ವಂಚಿತರಾದವರು, ವಯೋವೃದ್ಧರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಲಾಗುವುದು. ಸಾರ್ವಜನಿಕರು ಕಚೇರಿಗಳಿಗೆ ಸಂಬಂಧಿಸಿದ
ಯಾವುದಾದದರೂ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಜಿಲ್ಲಾ ಮಟ್ಟದ ಅಧಿಕಾರಿಗಳ ಗಮನಕ್ಕೆ ಬಗೆಹರಿಸಿಕೊಳ್ಳಬಹುದು ಎಂದು ತಿಳಿಸಿದರು.
ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಪಂ ಅಧ್ಯಕ್ಷೆ ಪ್ರೇಮಾ ರವೀಂದ್ರ, ಗ್ರಾಪಂ ಅಧ್ಯಕ್ಷೆ ಪಲ್ಲವಿ ಸಂತೋಷ್, ತಾಪಂ ಸದಸ್ಯರಾದ ಮಲ್ಲಿಕಾರ್ಜುನ್, ವಿನೋದ ಈಶ್ವರ ನಾಯ್ಕ, ಹೇಮಾ ಮಂಜುನಾಥ್, ಯಶೋದಮ್ಮ, ಮಂಜುಳಾ ಚಿದಾನಂದ, ಹಾಲಪ್ಪ, ಪುಟ್ಟ ನಾಯ್ಕ, ಶಾಂತಲಾ ಗಿರೀಶ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಆರೋಗ್ಯ ಇಲಾಖೆ ವತಿಯಿಂದ 25 ಗರ್ಭಿಣಿಯರಿಗೆ ಸೀಮಂತ ನೆರವೇರಿಸಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಲಾಯಿತು.
ಅರಣ್ಯ ಇಲಾಖೆಯಿಂದ ಸಸ್ಯ ಸಂತೆ, ಕೃಷಿ ಇಲಾಖೆಯಿಂದ ಕೃಷಿ ವಸ್ತು ಪ್ರದರ್ಶನ ಹಾಗೂ ರಿಯಾಯತಿ ದರದಲ್ಲಿ ಬಿತ್ತನೆ ಬೀಜಗಳ ವಿತರಣೆ, ಪಶು ಸಂಗೋಪನೆ ಇಲಾಖೆಯಿದ ದೇಶಿಯ ತಳಿ ಹಸುಗಳು, ಹಸು, ಕುರಿ, ಮೀನು, ಕೋಳಿ, ಹಂದಿ ಸಾಕಾಣಿಕೆ ಮಾಹಿತಿ, ಪಂಚಾಯತ್‌ರಾಜ್ ಇಲಾಖೆಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಮಾಹಿತಿ ನೀಡಲು ಮಳಿಗೆ ತೆರೆಯಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.