ಪಿಜಿ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿಗಳ ಪರದಾಟ

•ಗಂಗಾವತಿಗೆ ಮಂಜೂರಾಗಿದ್ದ ಕೇಂದ್ರ ಯಲಬುರ್ಗಾ ಪಾಲು•ಬಡ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿ

Team Udayavani, Aug 2, 2019, 10:31 AM IST

kopala-tdy-1

ಸಾಂದರ್ಭಿಕ ಚಿತ್ರ

ಗಂಗಾವತಿ: ನಗರಕ್ಕೆ ಮಂಜೂರಿಯಾಗಿದ್ದ ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರವನ್ನು ಯಲಬುರ್ಗಾಕ್ಕೆ ಸ್ಥಳಾಂತರ ಮಾಡಿದ್ದರಿಂದ ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ವಿದ್ಯಾಭ್ಯಾಸ ಮಾಡಬೇಕೆನ್ನುವ ವಿದ್ಯಾರ್ಥಿಗಳು ಎರಡು ವರ್ಷಗಳಿಂದ ಪರದಾಡುವ ಸ್ಥಿತಿ ಎದುರಾಗಿದೆ.

ಹಲವು ವರ್ಷಗಳಿಂದ ಹೋರಾಟ ನಡೆಸಿದ ಪರಿಣಾಮ ಗಂಗಾವತಿಯ ಕೊಲ್ಲಿ ನಾಗೇಶ್ವರಾವ್‌ ಸರಕಾರಿ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ವಿಷಯಗಳನ್ನು ಕಲಿಯಲು ಪರವಾನಗಿ ನೀಡಲಾಗಿದೆ. 2017-18ನೇ ಸಾಲಿನಲ್ಲಿ ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಮತ್ತು ಶೈಕ್ಷಣಿಕ ಆಡಳಿತ ಮಂಡಳಿ ಸಭೆಯಲ್ಲಿ ಗಂಗಾವತಿಗೆ ಪ್ರತ್ಯೇಕ ಸ್ನಾತಕೋತ್ತರ ಕೇಂದ್ರ ಆರಂಭ ಮಾಡಲು ಸುಮಾರು 20 ಲಕ್ಷ ರೂ. ಮೀಸಲಿಟ್ಟು ವಿಶೇಷ ಆಡಳಿತಾಧಿಕಾರಿಯನ್ನು ನೇಮಿಸಿತ್ತು.

ಈ ಮಧ್ಯೆ ಇರಕಲ್ಗಡಾ ಮತ್ತು ಆನೆಗೊಂದಿ ಭಾಗದಲ್ಲಿ ಪಿಜಿ ಕೇಂದ್ರ ಆರಂಭ ಮಾಡಲು ಅಂದಿನ ಶಾಸಕ ಇಕ್ಬಾಲ್ ಅನ್ಸಾರಿ ಸರಕಾರಿ ಭೂಮಿಯನ್ನು ಸರ್ವೇ ಮಾಡುವಂತೆ ಗಂಗಾವತಿ ಹಾಗೂ ಕೊಪ್ಪಳ ತಹಶೀಲ್ದಾರ್‌ ಕಚೇರಿಗೆ ಪತ್ರ ಬರೆದು ಸೂಚಿಸಿದ್ದರು. ನಂತರ ನಡೆದ ಬೆಳವಣಿಗೆಯಲ್ಲಿ ಗಂಗಾವತಿ ಪಿಜಿ ಕೇಂದ್ರವನ್ನು ಅಂದಿನ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಯಲಬುರ್ಗಾಕ್ಕೆ ಸ್ಥಳಾಂತರ ಮಾಡಿಸಿದ್ದರು. ಈ ಕುರಿತು ಹಲವು ಭಾರಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಲಿಲ್ಲ.

ಸ್ನಾತಕೋತ್ತರ ಕೇಂದ್ರ ಆರಂಭಕ್ಕೆ ಅಧಿಕ ಪದವಿ ಕಾಲೇಜುಗಳಿರಬೇಕು. ಸ್ಥಳೀಯ ವಿದ್ಯಾರ್ಥಿಗಳು ಈಗಾಗಲೇ ಅನ್ಯ ವಿಶ್ವವಿದ್ಯಾಲಯದಲ್ಲಿ ಪಿಜಿ ಕೋರ್ಸ್‌ ಮಾಡುವ ಅಂಕಿ ಸಂಖ್ಯೆ ಗಮನಿಸಿ ಸ್ಥಳೀಯ ಜನಪ್ರತಿನಿಧಿಗಳು, ಉನ್ನತ ಶಿಕ್ಷಣ ಸಚಿವರು ಪಿಜಿ ಕೇಂದ್ರ ಆರಂಭ ಮಾಡಲು ಸರಕಾರ ಮತ್ತು ವ್ಯಾಪ್ತಿಯ ವಿವಿಗಳಿಗೆ ಪತ್ರ ಬರೆಯಬೇಕು. ಗಂಗಾವತಿ, ಕಾರಟಗಿ, ಕನಕಗರಿ ತಾಲೂಕಿನಲ್ಲಿ ಒಟ್ಟು 24 ಪದವಿ ಕಾಲೇಜುಗಳಿದ್ದು ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿದ್ದಾರೆ. ಪಿಜಿ ಕೋರ್ಸ್‌ ಓದಲು ವಿದ್ಯಾರ್ಥಿನಿಯರಿಗೆ ಅವಕಾಶ ಕಡಿಮೆ ಇದೆ. ಸ್ಥಳೀಯವಾಗಿ ಪಿಜಿ ಕೋರ್ಸ್‌ ಇದ್ದರೆ ವಿದ್ಯಾಭ್ಯಾಸ ಮಾಡಲು ಅನುಕೂಲವಾಗುತ್ತದೆ.

ಸದ್ಯ ಗಂಗಾವತಿಯ ಕೊಲ್ಲಿನಾಗೇಶ್ವರಾವ್‌ ಸರಕಾರಿ ಮಹಾವಿದ್ಯಾಲಯದಲ್ಲಿ ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಕನ್ನಡ, ಸಮಾಜಶಾಸ್ತ್ರ, ಪತ್ರಿಕೋದ್ಯಮ ಕೋರ್ಸ್‌ಗಳಿಗೆ ತಲಾ 30 ಸೀಟ್‌ಗಳು ವಾಣಿಜ್ಯ ಶಾಸ್ತ್ರದ ಕೋರ್ಸ್‌ಗೆ 120 ಸೀಟುಗಳಿವೆ. ಎರಡು ವರ್ಷಗಳಿಂದ ಪಿಜಿ ಕೋರ್ಸ್‌ ಸೇರಬಯಸುವವರ ಸಂಖ್ಯೆ ಅಧಿಕವಾಗಿದೆ. ಪಿಜಿ ಓದ ಬಯಸುವವರು ಡೋನೇಶನ್‌ ಕೊಟ್ಟು ಕೊಪ್ಪಳ, ಹೊಸಪೇಟೆ, ಬಳ್ಳಾರಿ, ಗದಗ, ಹುಬ್ಬಳ್ಳಿ, ಧಾರವಾಡದಲ್ಲಿ ವಿದ್ಯಾಭ್ಯಾಸ ಮಾಡುವ ಸ್ಥಿತಿ ಇದೆ. ಬಡ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ನಾತಕೋತ್ತರ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.

ಸಂಸದರು ಶಾಸಕರು ಕೂಡಲೇ ಸರಕಾರದ ಮಟ್ಟದಲ್ಲಿ ಯತ್ನಿಸಿ ಉನ್ನತ ಶಿಕ್ಷಣ ಇಲಾಖೆಯ ಪರವಾನಗಿಯೊಂದಿಗೆ ಗಂಗಾವತಿಯಲ್ಲಿ ಪಿಜಿ ಕೇಂದ್ರ ಆರಂಭಕ್ಕೆ ಯತ್ನಿಸಬೇಕಿದೆ. ಗಂಗಾವತಿ ವಾಣಿಜ್ಯ ವಿಷಯದಲ್ಲಿ ಸಾಕಷ್ಟು ಸಾಧನೆ ಮಾಡಿದೆ. ಸಮೀಕ್ಷೆ ಪ್ರಕಾರ ಇಲ್ಲಿಯ ವಿದ್ಯಾರ್ಥಿಗಳು ಪದವಿ ನಂತರ ಸ್ನಾತಕ ಪದವಿ ಸೇರುವುದು ಬಹಳ ಕಡಿಮೆ. ಸ್ನಾತಕೋತ್ತರ ಕೇಂದ್ರ ಆರಂಭಿಸುವ ಮೂಲಕ ಗಂಗಾವತಿಯಲ್ಲಿ ಉನ್ನತ ಶಿಕ್ಷಣ ಕ್ರಾಂತಿ ಮಾಡಬೇಕಿದೆ.

•ಕೆ. ನಿಂಗಜ್ಜ

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

1-gangavathi

ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.