ಸುಧಾಕರ್‌ ಕ್ಷೇತ್ರಕ್ಕೆ ರಮೇಶ್‌ ಕುಮಾರ್‌ ಎಂಟ್ರಿ


Team Udayavani, Aug 3, 2019, 3:00 AM IST

sudhakar

ಚಿಕ್ಕಬಳ್ಳಾಪುರ: ಶಾಸಕರಾಗಿದ್ದ ಡಾ.ಕೆ.ಸುಧಾಕರ್‌ ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಂಡಿರುವ ಹಿನ್ನೆಲೆಯಲ್ಲಿ ಉಪ ಚುನಾವಣೆ ಎದುರಾಗಲಿರುವ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌, ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ಪಡೆದ ಬಳಿಕ ಭೇಟಿ ಕೊಟ್ಟಿರುವುದು ಕ್ಷೇತ್ರದ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.

ಈಗಾಗಲೇ ಸುಧಾಕರ್‌ ಶಾಸಕ ಸ್ಥಾನದಿಂದ ಅನರ್ಹ ನಂತರ ಕಾಂಗ್ರೆಸ್‌ ಪಕ್ಷದಿಂದಲೂ ಕೂಡ ವಜಾಗೊಂಡಿದ್ದಾರೆ. ಹೀಗಾಗಿ ಕ್ಷೇತ್ರವನ್ನು ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ತೆಕ್ಕೆಯಲ್ಲಿ ಉಳಿಸಿಕೊಳ್ಳಲು ಕಾಂಗ್ರೆಸ್‌ ನಾಯಕರಿಗೆ ತೀವ್ರ ಪ್ರತಿಷ್ಠೆಯಾಗಿದ್ದು, ಈ ನಿಟ್ಟಿನಲ್ಲಿ ಉಪ ಚುನಾವಣೆಯಲ್ಲಿ ಸುಧಾಕರ್‌ರನ್ನು ಮಣಿಸಲು ಸಮರ್ಥ ಅಭ್ಯರ್ಥಿಯ ಹುಡುಕಾಟದಲ್ಲಿ ತೊಡಗಿರುವ ನಾಯಕರು, ಕ್ಷೇತ್ರಕ್ಕೆ ಭೇಟಿ ಕೊಟ್ಟಿರುವುದು ಸಹಜವಾಗಿಯೇ ರಾಜಕೀಯ ವಲಯದಲ್ಲಿ ಸಂಚಲನ ತಂದಿದೆ.

ಸುಧಾಕರ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರ ಜೊತೆಗೆ ಪಕ್ಷ ವಿರೋಧಿ ಚಟುವಟಿಕೆ ಮೇಲೆ ಈಗಾಗಲೇ ಸ್ಪೀಕರ್‌ ಆಗಿದ್ದ ರಮೇಶ್‌ ಕುಮಾರ್‌, ಜೆಡಿಎಸ್‌, ಕಾಂಗ್ರೆಸ್‌ ಶಾಸಕಾಂಗ್‌ ಪಕ್ಷದ ನಾಯಕರು ದೂರಿನ ಅನ್ವಯ ಡಾ.ಕೆ.ಸುಧಾಕರ್‌ ಸೇರಿದಂತೆ 17 ಮಂದಿ ಕಾಂಗ್ರೆಸ್‌, ಜೆಡಿಎಸ್‌ ಶಾಸಕರನ್ನು ಅನರ್ಹಗೊಳಿಸಿ ತೀರ್ಪು ಕೊಟ್ಟಿದ್ದಾರೆ.

ಹೀಗಾಗಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯ ಇತಿಹಾಸದಲ್ಲಿ ಉಪ ಚುನಾವಣೆ ಎದುರಾಗುವುದು ಬಹುತೇಕ ಖಚಿತವಾಗಿದ್ದು, ಈಗಿನಿಂದಲೇ ಪಕ್ಷ ಸಂಘಟನೆ ನೆಪದಲ್ಲಿ ಉಪ ಚುನಾವಣೆಗೆ ಸಜ್ಜಾಗಿರುವ ನಾಯಕರು, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ದೇವಾಲಯಗಳ ಭೇಟಿ ಹೆಸರಿನಲ್ಲಿ ತಮ್ಮ ರಾಜಕೀಯ ತಂತ್ರಗಾರಿಕೆ ಹೆಣೆಯುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

ರಮೇಶ್‌ ಕುಮಾರ್‌ ಪಕ್ಕ ಆಕಾಂಕ್ಷಿಗಳು ಪ್ರತ್ಯಕ್ಷ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹಾಗೂ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಗೌರಿಬಿದನೂರು ಶಾಸಕ ಎನ್‌.ಹೆಚ್‌.ಶಿವಶಂಕರರೆಡ್ಡಿ ಕ್ಷೇತ್ರಕ್ಕೆ ಭೇಟಿ ನೀಡಿದ್ದ ವೇಳೆ ಉಪ ಚುನಾವಣೆಯಲ್ಲಿ ಅಭ್ಯರ್ಥಿಗಳಾಗಬೇಕೆಂದು ಬಯಸಿರುವ ಆಕಾಂಕ್ಷಿಗಳ ದಂಡು ನೆರೆದಿತ್ತು. ಒಂದು ಕಾಲಕ್ಕೆ ಇಡೀ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ರಾಜಕೀಯ ವಲಯದಲ್ಲಿ ತಮ್ಮ ಹಿಡಿತ ಸಾಧಿಸಿದ್ದ ಮಾಜಿ ಸಂಸದ ಆರ್‌.ಎಲ್‌.ಜಾಲಪ್ಪ ಭಾಮೈದ ಜಿ.ಎಚ್‌.ನಾಗರಾಜ್‌, ಅವರ ಪುತ್ರ ವಿನಯ್‌ ಶ್ಯಾಮ್‌ ರಮೇಶ್‌ ಕುಮಾರ್‌ ಭೇಟಿ ವೇಳೆ ಕಂಡು ಬಂದಿದ್ದು, ಕುತೂಹಲ ಕೆರಳಿಸಿದೆ.

ಜಿ.ಎಚ್‌.ನಾಗರಾಜ್‌ ಪುತ್ರ ವಿನಯ್‌ ಶ್ಯಾಮ್‌ರನ್ನು ಕಾಂಗ್ರೆಸ್‌ನಿಂದ ಕಣಕ್ಕೆ ಇಳಿಸುವ ಚಿಂತನೆ ನಡೆದಿದ್ದು, ಇದಕ್ಕೆ ಕಾಂಗ್ರೆಸ್‌ನ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಒಲವು ತೋರಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅಹಿಂದ ನಾಯಕರಾಗಿರುವ ಆರ್‌.ಎಲ್‌.ಜಾಲಪ್ಪ ಹಾಗೂ ಸಿದ್ದರಾಮಯ್ಯ ನಡುವಿನ ರಾಜಕೀಯ ಸಂಬಂಧ ಕಾರಣ ಎನ್ನಲಾಗುತ್ತಿದೆ.

ಒಗ್ಗಟ್ಟು ಪ್ರದರ್ಶಿಸಿದ ಕೈ ನಾಯಕರು: ರಮೇಶ್‌ ಕುಮಾರ್‌ ಹಾಗೂ ಎನ್‌.ಹೆಚ್‌.ಶಿವಶಂಕರರೆಡ್ಡಿ ಚಿಕ್ಕಬಳ್ಳಾಪುರಕ್ಕೆ ಭೇಟಿ ವೇಳೆ ಕ್ಷೇತ್ರದ ಕಾಂಗ್ರೆಸ್‌ ನಾಯಕರು ತಮ್ಮ ಒಗ್ಗಟ್ಟು ಪ್ರದರ್ಶಿಸುವ ಮೂಲಕ ಗಮನ ಸೆಳೆದಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್‌ ಎರಡನೇ ಬಾರಿಗೆ ಐತಿಹಾಸಿಕ ಗೆಲುವು ಸಾಧಿಸಲು ಶ್ರಮಿಸಿದ ಮಾಜಿ ಶಾಸಕರಾದ ಎಸ್‌.ಎಂ.ಮುನಿಯಪ್ಪ, ಎಂ.ಶಿವಾನಂದ್‌, ಹಿರಿಯ ಮುಖಂಡರಾದ ಯಲುವಹಳ್ಳಿ ರಮೇಶ್‌, ಜಿ.ಆರ್‌.ಶ್ರೀನಿವಾಸ್‌, ಎಸ್‌.ವೈ.ಮರಿಯಪ್ಪ, ಕೆಪಿಸಿಸಿ ಸದಸ್ಯ ಎಸ್‌.ಪಿ.ಶ್ರೀನಿವಾಸ್‌ ಮತ್ತಿತರ ಘಟಾನುಘಟಿ ನಾಯಕರು ಉಪಸ್ಥಿತರಿದ್ದು ತಮ್ಮ ಒಗ್ಗಟ್ಟನ್ನು ನಾಯಕರ ಮುಂದೆ ಪ್ರದರ್ಶಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದಿಂದ ಯಾರೇ ಅಭ್ಯರ್ಥಿಯಾದರೂ ಅವರ ಪರ ಕೆಲಸ ಮಾಡಿ ಗೆಲ್ಲಿಸುತ್ತೇವೆಂಬ ಅಭಯ ನೀಡಿದ್ದಾರೆ.  ಒಟ್ಟಿನಲ್ಲಿ ಡಾ.ಕೆ.ಸುಧಾಕರ್‌ ಶಾಸಕ ಸ್ಥಾನದಿಂದ ಅನರ್ಹಗೊಂಡ ಬಳಿಕ ಅವರ ರಾಜಕೀಯ ಭವಿಷ್ಯದ ಮೇಲೆ ಅನಿಶ್ಚಿತತೆಯ ಕಾರ್ಮೋಡ ಆವರಿಸಿದ್ದು, ರಾಜಕೀಯ ಭವಿಷ್ಯ ಸುಪ್ರೀಂಕೋರ್ಟ್‌ ನೀಡುವ ತೀರ್ಪಿನ ಮೇಲೆ ಅವಲಂಬಿತವಾಗಿದೆ. ಇದರ ನಡುವೆಯೇ ಎದುರಾಗುವ ಉಪ ಚುನಾವಣೆಯಲ್ಲಿ ಸುಧಾಕರ್‌ರನ್ನು ರಾಜಕೀಯವಾಗಿ ಮಣಿಸಲು ಈಗ ರಮೇಶ್‌ ಕುಮಾರ್‌ ಹಾಗೂ ಗೌರಿಬಿದನೂರು ಶಾಸಕ ಎನ್‌.ಹೆಚ್‌.ಶಿವಶಂಕರರೆಡ್ಡಿ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿರುವುದು ಚರ್ಚೆಗೆ ಕಾರಣವಾಗಿದ್ದು, ಮುಂದಿನ ಬೆಳವಣಿಗೆಗಳನ್ನು ಕಾದು ನೋಡಬೇಕಿದೆ.

ರಮೇಶ್‌ ಕುಮಾರ್‌ ಹಿಂದೆ ಸುಧಾಕರ್‌ ಆಪ್ತರು: ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಡಾ.ಕೆ.ಸುಧಾಕರ್‌ ಪರ ಗುರುತಿಸಿಕೊಂಡಿದ್ದ ಬಹುತೇಕ ಹಿರಿಯ ಕಾಂಗ್ರೆಸ್‌ ನಾಯಕರು ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ್ದ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹಿಂದೆ ಕಾಣಿಸಿಕೊಂಡು ಗಮನ ಸೆಳೆದರು. ಮುಖ್ಯವಾಗಿ ಮಾಜಿ ಶಾಸಕರಾದ ಎಸ್‌.ಎಂ.ಮುನಿಯಪ್ಪ, ಎಂ.ಶಿವಾನಂದ್‌, ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಯಲುವಹಳ್ಳಿ ರಮೇಶ್‌, ಪುರದಗಡ್ಡೆ ಕೃಷ್ಣಪ್ಪ, ಕೆಪಿಸಿಸಿ ಸದಸ್ಯ ಎಸ್‌.ಪಿ.ಶ್ರೀನಿವಾಸ್‌, ಎಸ್‌.ವೈ.ಮರಿಯಪ್ಪ ಹಾಗೂ ರಾಜಕೀಯ ಚಟುವಟಿಕೆಗಳಿಂದ ದೂರ ಇದ್ದ ಹಿರಿಯ ಕಾಂಗ್ರೆಸ್‌ ಮುಖಂಡರಾದ ಮಾಜಿ ಸಂಸದ ಆರ್‌.ಎಲ್‌.ಜಾಲಪ್ಪ ಭಾಮೈದ ಜಿ.ಎಚ್‌.ನಾಗರಾಜ್‌. ಅವರ ಪುತ್ರ ವಿನಯ್‌ ಶ್ಯಾಮ್‌ ಮತ್ತಿತರರು ಇದ್ದು ಗಮನ ಸೆಳೆದರು.

ಸುಧಾಕರ್‌ ಆಪ್ತರ ಮನೆಯಲ್ಲಿ ರಮೇಶ್‌ ಕುಮಾರ್‌ಗೆ ಊಟ: ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಡಾ.ಕೆ.ಸುಧಾಕರ್‌ರವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಂದಿಯ ಮಾಜಿ ಹಾಪ್‌ಕಾಮ್ಸ್‌ ಮಾಜಿ ಅಧ್ಯಕ್ಷ ಜಿ.ಆರ್‌.ಶ್ರೀನಿವಾಸ್‌ರ ಮನೆಯಲ್ಲಿ ರಮೇಶ್‌ ಕುಮಾರ್‌ ಸೇರಿದಂತೆ ಶಾಸಕ ಎನ್‌.ಹೆಚ್‌.ಶಿವಶಂಕರರೆಡ್ಡಿ, ಜಿಪಂ ಅಧ್ಯಕ್ಷ ಹೆಚ್‌.ವಿ.ಮಂಜುನಾಥ, ಮಾಜಿ ಶಾಸಕರಾದ ಎಸ್‌.ಎಂ.ಮುನಿಯಪ್ಪ, ಎಂ.ಶಿವಾನಂದ ಮತ್ತಿತರ ಅನೇಕ ಕಾಂಗ್ರೆಸ್‌ ಮುಖಂಡರು, ನಾಯಕರು, ಕಾರ್ಯಕರ್ತರ ದಂಡು ವಿವಿಧ ದೇವಾಲಯಗಳ ದರ್ಶನ ಪಡೆದ ಬಳಿಕ ಜಿ.ಆರ್‌.ಶ್ರೀನಿವಾಸ್‌ ಮನೆಗೆ ಭೇಟಿ ಕೊಟ್ಟು ಊಟ ಸವಿದರು.

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.