ಆಲಮಟ್ಟಿ ನೀರಿನ ಸಂಗ್ರಹ 518.5 ಮೀ.ಮಿತಿಗೆ “ಮಹಾ’ ಸರ್ಕಾರ ಪತ್ರ
Team Udayavani, Aug 3, 2019, 3:00 AM IST
ಬೆಳಗಾವಿ: ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ ಮತ್ತಷ್ಟು ಹೆಚ್ಚಿದ್ದು ಕೊಯ್ನಾ, ವಾರಣಾ, ಧೂಮ್ ಮೊದಲಾದ ಜಲಾಶಯಗಳು ಶೇ.90ರಷ್ಟು ಭರ್ತಿಯಾಗಿವೆ. ಕೃಷ್ಣಾ ನದಿಗೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಆಲಮಟ್ಟಿ ಜಲಾಶಯದಲ್ಲಿ ನೀರಿನ ಸಂಗ್ರಹವನ್ನು 518 ಮೀ.ದಿಂದ 518.5ಕ್ಕೆ ಮಿತಿಗೊಳಿಸುವಂತೆ ಮಹಾರಾಷ್ಟ್ರ ಸರ್ಕಾರ ಕರ್ನಾಟಕ ಸರ್ಕಾರಕ್ಕೆ ತುರ್ತು ಪತ್ರ ಬರೆದಿದೆ.
ಮಹಾರಾಷ್ಟ್ರದ ತುರ್ತು ಸಂದೇಶದಂತೆ ಕರ್ನಾಟಕ ಸರ್ಕಾರ 518.5 ಮೀಟರ್‌ಗೆ ಸಂಗ್ರಹವನ್ನು ಮಿತಿಗೊಳಿಸಿದರೆ, ಇನ್ನೂ 50 ಸಾವಿರ ಕ್ಯೂಸೆಕ್ ನೀರನ್ನು ಹೆಚ್ಚುವರಿಯಾಗಿ ಬಿಡುಗಡೆ ಮಾಡಬೇಕು. ಇದರಿಂದ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ನೆರೆಹಾವಳಿ ಪ್ರಮಾಣ ಹೆಚ್ಚುವ ಸಾಧ್ಯತೆಯಿದೆ. 519.60 ಮೀ. ಎತ್ತರದ ಆಲಮಟ್ಟಿ ಜಲಾಶಯವು ಭರ್ತಿಯಾಗಲು ಇನ್ನು ಕೇವಲ 25 ಸೆಂ.ಮೀ. ಬಾಕಿಯಿದೆ.
ಇದರ ಪರಿಣಾಮವಾಗಿ ಆಲಮಟ್ಟಿ ಜಲಾಶಯದಿಂದ ಸುಮಾರು ಎರಡು ಲಕ್ಷ ಕ್ಯೂಸೆಕ್ ನೀರನ್ನು ನಾರಾಯಣಪುರ ಜಲಾಶಯಕ್ಕೆ ಹರಿ ಬಿಡಲಾಗುತ್ತಿದೆ. ಮಹಾರಾಷ್ಟ್ರದಿಂದ ಸತತವಾಗಿ ಹರಿದು ಬರುತ್ತಿರುವ ನೀರಿನಿಂದಾಗಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳ ಕೃಷ್ಣಾ ಹಾಗೂ ಭೀಮಾ ನದಿಗಳಲ್ಲಿ ನೆರೆಹಾವಳಿಯ ಭೀತಿ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.