ಖಾನಾಪುರದಲ್ಲಿ 10 ಸೆಂ.ಮೀ.ಮಳೆ
Team Udayavani, Aug 3, 2019, 3:00 AM IST
ಬೆಂಗಳೂರು: ಶುಕ್ರವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಉತ್ತರ ಒಳನಾಡಿನಲ್ಲಿ ನೈಋತ್ಯ ಮಾರುತಗಳು ಹೆಚ್ಚು ಸಕ್ರಿಯವಾಗಿದ್ದರೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಉತ್ತರ ಒಳನಾಡಿನ ಬಹುತೇಕ ಎಲ್ಲೆಡೆ, ಕರಾವಳಿಯ ಹಲವೆಡೆ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಯಿತು. ಬೆಳಗಾವಿ ಜಿಲ್ಲೆಯ ಖಾನಾಪುರ ಮತ್ತು ಲೋಂಡಾದಲ್ಲಿ ರಾಜ್ಯದಲ್ಲಿಯೇ ಅಧಿಕ, 10 ಸೆಂ. ಮೀ.ಮಳೆ ಸುರಿಯಿತು. ಇದೇ ವೇಳೆ, ಹುಬ್ಬಳ್ಳಿ-ಧಾರವಾಡದಲ್ಲೂ ಧಾರಾಕಾರ ಮಳೆಯಾಗಿದೆ.
ಆದರೆ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ವರುಣನ ಅಬ್ಬರ ಕಡಿಮೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆ ಕಡಿಮೆಯಾಗಿದ್ದು, ದೇವಬಾಗ್ದ ಅಂಬಿಗವಾಡ ಬಳಿ ಕಡಲ್ಕೊರೆತಕ್ಕೆ ರಸ್ತೆ ಕಿತ್ತು ಹೋಗಿದೆ. ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಪಂ ವ್ಯಾಪ್ತಿಯ ತಳಕೇಬೈಲ್ ಬಳಿ ಕೈಗಾ-ಇಳಕಲ್ ರಾಜ್ಯ ಹೆದ್ದಾರಿ 6ರ ಪಕ್ಕ ಭೂಕುಸಿತ ಉಂಟಾಗಿದೆ. ಮಂಗಳೂರು ಸುತ್ತಮುತ್ತ ಕೆಲವೆಡೆ ಮಳೆಯಾಗಿದ್ದು, ಉಚ್ಚಿಲದ ಎರ್ಮಾಳು ಬಡಾ, ಪಡುಬಿದ್ರಿ ಬೀಚ್, ಕಾಡಿಪಟ್ಣ, ನಡಿಪಟ್ಣ, ಮಧ್ವನಗರ ಪರಿಸರದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ಕಡಲ್ಕೊರೆತ ಶುಕ್ರವಾರವೂ ಮುಂದುವರಿದಿದೆ.
ಕೆಲವೆಡೆ ಗಾಳಿ ಮರಗಳು ಸಮುದ್ರ ಪಾಲಾಗಿದ್ದು, ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಭಾನುವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ, ಉತ್ತರ ಒಳನಾಡಿನ ಹಲವೆಡೆ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.