ಅನರ್ಹ ಶಾಸಕರ ಮುಂದಿನ ಹಾದಿ ನಿಗೂಢ


Team Udayavani, Aug 3, 2019, 3:09 AM IST

anarha

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದೊಂದು ತಿಂಗಳಲ್ಲಿ ಉಂಟಾದ ದಿಢೀರ್‌ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅನರ್ಹಗೊಂಡಿರುವ 17 ಶಾಸಕರ ಮುಂದಿನ ನಡೆಯೇನು ಎಂಬುದು ನಿಗೂಢವಾಗಿದೆ. ಒಂದು ವೇಳೆ, ಸುಪ್ರೀಂಕೋರ್ಟ್‌ ಈ ಶಾಸಕರ ಅನರ್ಹತೆಯನ್ನು ಅನೂರ್ಜಿತಗೊಳಿಸಿದರೆ ಮುಂದೇನು? ಸುಪ್ರೀಂಕೋರ್ಟ್‌ ಮಧ್ಯಪ್ರವೇಶಿಸಿ, ಇವರ ಅನರ್ಹತೆ ರದ್ದುಪಡಿಸಿ, ರಾಜೀನಾಮೆ ಅಂಗೀಕರಿಸಿದರೆ ಉಪ ಚುನಾವಣೆಯಲ್ಲಿ ಎಲ್ಲರೂ ಸ್ಪರ್ಧೆ ಮಾಡ್ತಾರಾ ಎಂಬ ಪ್ರಶ್ನೆ ಮೂಡಿದೆ.

ಯಾಕೆಂದರೆ, ಅನರ್ಹತೆಗೊಂಡಿರುವ ಶಾಸಕರಲ್ಲಿ ಕೆಲವರು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇವೆ ಎಂದು ಹೇಳುತ್ತಿದ್ದರೆ, ಮತ್ತೆ ಕೆಲವರು ಪಕ್ಷೇತರರಾಗಿ ಸ್ಪರ್ಧೆ ಮಾಡ್ತೇವೆ ಎಂದು ಹೇಳುತ್ತಿರುವುದರಿಂದ ಅವರ ನಡೆ ಕುತೂಹಲಕ್ಕೆ ಕಾರಣವಾಗಿದೆ. ಈ ಮಧ್ಯೆ, ಎಚ್‌.ವಿಶ್ವನಾಥ್‌ ಸೇರಿ ಕೆಲವರು ಉಪ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ವಿಧಾನಪರಿಷತ್‌ ಸದಸ್ಯರಾಗಿ ಸಚಿವರಾಗಲಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ. ಜತೆಗೆ, “ನಾನು ಬಿಜೆಪಿ ಸೇರುವುದಿಲ್ಲ. ಹೀಗಾಗಿ, ಅನರ್ಹತೆಗೊಂಡಿರುವವರೆಲ್ಲಾ ಸೇರಿ ಹೊಸ ಪಕ್ಷ ಕಟ್ಟಬಾರದೇಕೆ’ ಎಂದೂ ಹೇಳಿದ್ದಾರೆ. ಹೀಗಾಗಿ, ಸುಪ್ರೀಂಕೋರ್ಟ್‌ ಮೊರೆ ಹೋಗಿರುವ ಅನರ್ಹತೆಗೊಂಡಿರುವ ಶಾಸಕರ ಮುಂದಿನ ನಡೆ ಹಾಗೂ ರಾಜಕೀಯ ಹೆಜ್ಜೆ ಏನಿರಬಹುದು ಎಂದು ರಾಜಕೀಯ ವಲಯಗಳಲ್ಲಿ ಚರ್ಚೆ ನಡೆದಿದೆ.

ಹಿಂದೆ ನರೇಂದ್ರಸ್ವಾಮಿ, ಶಿವರಾಜ ತಂಗಡಗಿ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಪ್ರಕರಣ ಒಂದು ವರ್ಷಕ್ಕೂ ಮೇಲ್ಪಟ್ಟು ನಡೆದ ಕಾರಣ ಅದುವರೆಗೂ ಉಪ ಚುನಾವಣೆಯೂ ಘೋಷಣೆಯಾಗಿರಲಿಲ್ಲ. ಈಗಲೂ ಪ್ರಕರಣ ಇತ್ಯರ್ಥವಾಗುವವರೆಗೆ ಉಪ ಚುನಾವಣೆ ದಿನಾಂಕ ನಿಗದಿ ಅನುಮಾನವೇ ಎಂದೂ ಹೇಳಲಾಗುತ್ತಿದೆ. ಅನರ್ಹತೆಗೊಂಡಿರುವ ಶಾಸಕರಾದ ಎಂ.ಟಿ.ಬಿ. ನಾಗರಾಜ್‌, ಎಸ್‌.ಟಿ.ಸೋಮಶೇಖರ್‌, ಬೈರತಿ ಬಸವ ರಾಜ್‌ ಅವರು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇವೆ. ಜನರು ಬಯಸಿದರೆ ಪಕ್ಷೇತರರಾಗಿ ಸ್ಪರ್ಧೆ ಮಾಡುತ್ತೇವೆ ಎಂಬ ಮಾತುಗಳನ್ನು ಆಡುತ್ತಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಅನರ್ಹಗೊಂಡಿರುವ ಶಾಸಕರ ವಿಚಾರ ನ್ಯಾಯಾಲ ಯದ ಅಂಗಳಕ್ಕೆ ಹೋಗಿದ್ದು, ಅಲ್ಲಿಂದ ಇತ್ಯರ್ಥ ಗೊಂಡ ನಂತರವಷ್ಟೇ ಮುಂದಿನ ವಿಚಾರ ಅಲ್ಲವೇ ಎಂಬ ವಾದವನ್ನು ಬಿಜೆಪಿ ನಾಯಕರು ಮುಂದಿಡು ತ್ತಾರೆ. ಹೀಗಾಗಿ, ಬಿಜೆಪಿಯ ನಡೆಯ ಹಿಂದೆ ನಾನಾ ಲೆಕ್ಕಾಚಾರಗಳು ಇರುವ ವ್ಯಾಖ್ಯಾನಗಳು ಕೇಳಿ ಬರುತ್ತಿವೆ. ಅನರ್ಹತೆಯಾಗಿರುವ ಶಾಸಕರ ಪರ ನ್ಯಾಯಾಲಯ ದಲ್ಲಿ ತೀರ್ಪು ಬಂದರೆ ಅವರು ಪಕ್ಷೇತರರಾಗಿಯೇ ಸ್ಪರ್ಧೆ ಮಾಡಿದರೆ ಬಿಜೆಪಿ ಆಗ ಅಭ್ಯರ್ಥಿ ಹಾಕುವುದಿಲ್ಲವಾ?,

ಒಂದೊಮ್ಮೆ ಬಿಜೆಪಿ ಅಭ್ಯರ್ಥಿ ಹಾಕದಿದ್ದರೆ ಅಲ್ಲಿ ಬಿಜೆಪಿ ಚಿಹ್ನೆಯಡಿ ಅಭ್ಯರ್ಥಿಗಳು ಇಲ್ಲದಿದ್ದರೆ ಬಿಜೆಪಿ ಮತಗಳು ಪಕ್ಷೇತರರಿಗೆ ಅಷ್ಟು ಸುಲಭವಾಗಿ ವರ್ಗಾವಣೆ ಆಗುತ್ತಾ?, ಆ ಕ್ಷೇತ್ರಗಳಲ್ಲಿನ ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳ ನಡೆ ಏನಾಗಬಹುದು ಎಂಬ ಪ್ರಶ್ನೆಗಳು ಮೂಡಿವೆ. ಕಾಂಗ್ರೆಸ್‌-ಜೆಡಿಎಸ್‌ ಒಟ್ಟುಗೂಡಿ ಮೈತ್ರಿ ಮಾಡಿ ಕೊಂಡು ಚುನಾವಣಾ ಕಣಕ್ಕಿಳಿದರೆ, ಅನರ್ಹಗೊಂಡಿರುವ ಶಾಸಕರು ಪಕ್ಷೇತರರಾಗಿ ಕಣಕ್ಕಿಳಿದರೆ ಗೆಲುವು ಅಷ್ಟು ಸುಲಭವಲ್ಲ. ಜತೆಗೆ, ಇವರು ಪಕ್ಷೇತರರಾಗಿ ಗೆದ್ದರೆ ಮುಂದೆ ಯಾವುದೇ ಸರ್ಕಾರಕ್ಕೆ ಬೆಂಬಲ ಕೊಡಲು ಸ್ವತಂತ್ರರಾಗುತ್ತಾರೆ. ಹೀಗಾಗಿ, ಬಿಜೆಪಿ ಅದಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

ಪ್ರತ್ಯೇಕ ಆಸನದಲ್ಲಿ ಕೂರ್ತಾರಾ?: ಮತ್ತೂಂದು ಮೂಲಗಳ ಪ್ರಕಾರ, ಒಂದೊಮ್ಮೆ ನ್ಯಾಯಾಲಯದಲ್ಲಿ ಅನರ್ಹತೆ ರದ್ದಾಗಿ ರಾಜೀನಾಮೆ ಸ್ವೀಕಾರ ವಿಚಾರ ಮತ್ತೆ ಸ್ಪೀಕರ್‌ ಅಂಗಳಕ್ಕೆ ಬಂದರೆ ಆಗ ಅವರು ಶಾಸಕರಾಗಿಯೇ ಇರಲಿದ್ದಾರೆ. ಎರಡೂ ಪಕ್ಷಗಳು ಅವರನ್ನು ಉಚ್ಚಾಟನೆ ಮಾಡಿರುವುದರಿಂದ ವಿಧಾನಸಭೆಯಲ್ಲಿ ಪ್ರತ್ಯೇಕ ಆಸನ ವ್ಯವಸ್ಥೆಗೂ ಕೋರಬಹುದು ಎಂದು ಹೇಳಲಾಗುತ್ತಿದೆ. ಆದರೆ, ಅವರು ಶಾಸಕರಾಗಿಯೇ ಮುಂದುವರಿದರೆ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಲು ಸಾಧ್ಯವಿಲ್ಲ. ಹೀಗಾಗಿ, ರಾಜೀನಾಮೆ ಅಂಗೀಕಾರ ಮಾಡಿಸಿಕೊಂಡು ಉಪ ಚುನಾವಣೆಗೆ ಹೋಗಬೇಕಾಗುತ್ತದೆ.

12 ಜನರಿಗೆ ಸಚಿವಗಿರಿ ಭರವಸೆ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸರ್ಕಾರ ರಚನೆಯಾಗಲು ಕಾರಣವಾಗಿರುವ 17 ಶಾಸಕರ ಪೈಕಿ 12 ಜನರಿಗೆ ಸಚಿವಗಿರಿ ಭರವಸೆ ನೀಡಲಾಗಿದೆ. ಸಂಪುಟ ವಿಸ್ತರಣೆ ಯಾದರೂ ಮೊದಲ ಹಂತದಲ್ಲಿ 22 ಸ್ಥಾನ ಮಾತ್ರ ಭರ್ತಿಯಾಗಲಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಕೋಟಾದಡಿ ನಾಲ್ಕು ಸ್ಥಾನ ಖಾಲಿ ಇರಲಿದೆ ಎಂದು ತಿಳಿದು ಬಂದಿದೆ. ಇದರ ನಡುವೆ, ಶಾಸಕರ ಅನರ್ಹತೆ ವಿಚಾರ ಇತ್ಯರ್ಥವಾಗುವವರೆಗೆ ಬೆಂಗಳೂರಿನ ಸಚಿವಾಕಾಂಕ್ಷಿಗಳಿಗೆ ಅವಕಾಶ ಕೊಟ್ಟು ಆ ನಂತರ ರಾಜೀನಾಮೆ ಕೊಡಿಸುವ ಬಗ್ಗೆಯೂ ಚಿಂತನೆ ನಡೆದಿದೆ. ನ್ಯಾಯಾಲಯದ ತೀರ್ಮಾನ ಬರುವವರೆಗೆ ಮಾತ್ರ ನಿಮಗೆ ಅವಕಾಶ ಎಂದು ಷರತ್ತು ವಿಧಿಸಿಯೇ ಸಚಿವಗಿರಿ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರಲ್ಲಿ ಯಾರ್ಯಾರಿಗೆ ಸಚಿವ ಸ್ಥಾನ?: ಅನರ್ಹತೆ ವಿಚಾರ ಇತ್ಯರ್ಥಗೊಂಡರೆ ಬಿಜೆಪಿ ಸರ್ಕಾರದಲ್ಲಿ ಬೆಂಗಳೂರು ನಗರದಿಂದ ಎಸ್‌.ಟಿ. ಸೋಮಶೇಖರ್‌, ಬೈರತಿ ಬಸವರಾಜ್‌, ಗೋಪಾಲಯ್ಯ, ಬೆಂಗಳೂರು ಗ್ರಾಮಾಂತರದಿಂದ ಎಂ.ಟಿ.ಬಿ. ನಾಗರಾಜ್‌ ಸಚಿವರಾಗುವ ಸಾಧ್ಯತೆಯಿದೆ. ಬಿಜೆಪಿಯಲ್ಲಿ ಬೆಂಗಳೂರಿನಿಂದ ಆರ್‌.ಅಶೋಕ್‌, ಅರವಿಂದ ಲಿಂಬಾವಳಿ, ಎಸ್‌.ಆರ್‌.ವಿಶ್ವನಾಥ್‌, ಡಾ.ಅಶ್ವಥ್‌ ನಾರಾಯಣ್‌, ಸುರೇಶ್‌ಕುಮಾರ್‌ ಸಚಿವಗಿರಿ ರೇಸ್‌ನಲ್ಲಿದ್ದಾರೆ. ಇವರಲ್ಲಿ ಯಾರ್ಯಾರಿಗೆ ಅವಕಾಶ ಸಿಗಲಿದೆ ಎಂಬುದನ್ನು ನೋಡಬೇಕಾಗಿದೆ. ಇನ್ನು, ರೋಷನ್‌ಬೇಗ್‌ ಅವರು ಬಿಜೆಪಿ ಸಂಪುಟ ಸೇರಲಿದ್ದಾರೆ ಎಂಬ ಮಾತಿದೆಯಾದರೂ ಆರ್‌ಎಸ್‌ಎಸ್‌ ನಾಯಕರಿಗೆ ಅದು ಇಷ್ಟವಿಲ್ಲ ಎನ್ನಲಾಗಿದೆ. ಹೀಗಾಗಿ, ಅವರು, ರಾಜೀನಾಮೆ ವಿಚಾರ ಇತ್ಯರ್ಥವಾದ ನಂತರ ಕ್ಷೇತ್ರವನ್ನು ತಮ್ಮ ಪುತ್ರನಿಗೆ ಬಿಟ್ಟು ಕೊಟ್ಟು ಬಿಜೆಪಿಯಿಂದ ಕಣಕ್ಕಿಳಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ನಿರ್ಧಾರ ಕೈಗೊಂಡಿಲ್ಲ: ಉಪಚುನಾವಣೆಯಲ್ಲಿ ಜೆಡಿಎಸ್‌ನಿಂದ ನಿಖೀಲ್‌ ಕುಮಾರಸ್ವಾಮಿ ಸ್ಪರ್ಧೆ ಕುರಿತು ಸುದ್ದಿಗಾರರ ಪ್ರಶ್ನೆಗೆ ರಾಮನಗರದಲ್ಲಿ ಪ್ರತಿಕ್ರಿಯಿಸಿರುವ ಶಾಸಕಿ ಅನಿತಾ ಕುಮಾರಸ್ವಾಮಿ,” ಸದ್ಯ ನಿಖೀಲ್‌ ಹೊಸ ಪ್ರೊಡಕ್ಷನ್‌ನಲ್ಲಿ ಕೆಲಸ ಮಾಡಲು ಸಹಿ ಹಾಕಿದ್ದಾನೆ. ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧಾರ ಕೈಗೊಂಡಿಲ್ಲ’ ಎಂದು ತಿಳಿಸಿದ್ದಾರೆ.

* ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.