‘ವಸತಿ ನಿಲಯಕ್ಕೆ ನಿವೇಶನ ಪಡೆಯಲು ಪ್ರಯತ್ನ’
Team Udayavani, Aug 3, 2019, 5:00 AM IST
ಪುತ್ತೂರು: ಕೆಲವು ದಿನಗಳ ಹಿಂದೆ ಬಿರುಗಾಳಿಗೆ ಸಿಕ್ಕಿ ಛಾವಣಿಯ ಸಿಮೆಂಟ್ ಶೀಟ್ ಹಾರಿಹೋಗಿ ಅವಾಂತರ ಸೃಷ್ಟಿಸಿದ ನಗರದ ಉರ್ಲಾಂಡಿಯಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಅನಂತರದ ವಿದ್ಯಾರ್ಥಿ ನಿಲಯಕ್ಕೆ ಶುಕ್ರವಾರ ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ವಿದ್ಯಾರ್ಥಿ ನಿಲಯದ ಕಟ್ಟಡವು ಮಕ್ಕಳ ವಾಸ್ತವ್ಯಕ್ಕೆ ಅನುಕೂಲಕರವಾಗಿಲ್ಲ ಎಂಬ ಅಂಶವನ್ನು ಮನಗಂಡ ಶಾಸಕರು, ವಿದ್ಯಾರ್ಥಿ ನಿಲಯದ ಸ್ವಂತ ಕಟ್ಟಡವನ್ನು ನಿರ್ಮಿಸಲು ನಗರದ ಬೊಳುವಾರು ಪರಿಸರದಲ್ಲಿ ಸರಕಾರಿ ಹೊಸ ನಿವೇಶನವನ್ನು ಪಡೆದುಕೊಳ್ಳಲಾಗುವುದು. ಅಲ್ಲಿಯವರೆಗೆ ವಿದ್ಯಾರ್ಥಿನಿ ನಿಲಯದ ನಿವಾಸಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಶಾಸಕರಿಂದ ಸೂಚನೆ
ಭದ್ರತೆಯ ದೃಷ್ಟಿಯಿಂದಲೂ ಉರ್ಲಾಂಡಿಯ ಕಟ್ಟಡವು ಮತ್ತೆ ವಿದ್ಯಾರ್ಥಿ ನಿಲಯವನ್ನು ಆರಂಭಿಸಲು ಸೂಕ್ತವಾಗಿಲ್ಲ ಎಂಬ ಅಂಶವನ್ನು ಇಲಾಖಾ ಅಧಿಕಾರಿಗಳಿಗೆ ತಿಳಿಸಿದ ಶಾಸಕರು ವಿದ್ಯಾರ್ಥಿ ನಿಲಯವನ್ನು ಆರಂಭಿಸಲು ಬಾಡಿಗೆ ಕಟ್ಟಡಗಳನ್ನು ಆಯ್ಕೆ ಮಾಡುವ ಮೊದಲು ಅಲ್ಲಿನ ಮೂಲ ಸೌಕರ್ಯಗಳು, ಕಟ್ಟಡದ ಭದ್ರತೆ ಮತ್ತು ನಗರಸಭೆಯಿಂದ ಪಡೆದುಕೊಂಡ ಪರವಾನಿಗೆಯ ಕುರಿತು ದೃಢೀಕರಿಸುವ ಕೆಲಸ ಮಾಡಬೇಕು. ಏಕಾಏಕಿ ಯಾವುದೇ ಕಟ್ಟಡಗಳನ್ನು ವಿದ್ಯಾರ್ಥಿ ನಿಲಯಕ್ಕಾಗಿ ಆಯ್ಕೆ ಮಾಡಬಾರದು ಎಂದು ಶಾಸಕರು ಸೂಚನೆ ನೀಡಿದರು.
ನಗರಸಭೆ ಸದಸ್ಯರಾದ ಕೆ. ಜೀವಂಧರ್ ಜೈನ್, ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ತಾರಾನಾಥ್, ವಿದ್ಯಾರ್ಥಿ ನಿಲಯ ಪಾಲಕ ಜೋಸೆಫ್, ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ರಾಮ್‌ದಾಸ್ ಹಾರಾಡಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.