ಸೌಹಾರ್ದ ಸಂಬಂಧ ಬೆಸೆಯುವ ಕ್ರೀಡೆ
•ಶಿಕ್ಷಣ ಇಲಾಖೆ ಕಾರ್ಯಕ್ರಮಗಳೇ ಹಳ್ಳಿ ಮಕ್ಕಳಿಗೆ ವೇದಿಕೆ
Team Udayavani, Aug 3, 2019, 3:59 PM IST
ಯಲಬುರ್ಗಾ: ಸಾಲಬಾವಿ ಗ್ರಾಮದಲ್ಲಿ ನಡೆದ ಅಂತರ್ ವಲಯ ಮಟ್ಟದ ಪ್ರಾಥಮಿಕ ಶಾಲೆ ಕ್ರೀಡಾಕೂಟಕ್ಕೆ ಜಿಪಂ ಸದಸ್ಯೆ ಗಿರಿಜಾ ಸಂಗಟಿ ಚಾಲನೆ ನೀಡಿದರು.
ಯಲಬುರ್ಗಾ: ಗ್ರಾಮೀಣ ಮಕ್ಕಳಲ್ಲಿ ಕ್ರೀಡೆಯ ಆಸಕ್ತಿ ಮೂಡಿಸಿ ಉತ್ತಮ ಕ್ರೀಡಾಪಟುವನ್ನಾಗಿಸಬೇಕು. ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಸಾಧನೆ ತೋರುವುದರ ಜತೆಗೆ ಕ್ರೀಡಾ ಕ್ಷೇತ್ರದಲ್ಲಿ ಹೆಸರು ಮಾಡುವಂತಾಗಬೇಕು ಎಂದು ತಾಪಂ ಅಧ್ಯಕ್ಷೆ ಲಕ್ಷ್ಮೀ ದ್ಯಾಮಪ್ಪ ಗೌಡ್ರ ಹೇಳಿದರು.
ತಾಲೂಕಿನ ಸಾಲಬಾವಿ ಗ್ರಾಮದಲ್ಲಿ ಶುಕ್ರವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಕ್ಕಮ್ಯಾಗೇರಿ, ವಜ್ರಬಂಡಿ, ಬಂಡಿ ಪ್ರಾಥಮಿಕ ಶಾಲೆಗಳ ಅಂತರ ವಲಯಮಟ್ಟದ ಕ್ರೀಡಾಕೂಟದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಶಿಕ್ಷಣ ಇಲಾಖೆ ನಡೆಸುವ ಕಾರ್ಯಕ್ರಮಗಳೇ ಬಹುತೇಕ ವಿದ್ಯಾರ್ಥಿಗಳಿಗೆ ವೇದಿಕೆ ಕಲ್ಪಿಸುತ್ತಿವೆ ಎಂದರು. ಕ್ರೀಡೆಗಳು ಸೌಹಾರ್ದ ಸಂಬಂಧಗಳನ್ನು ಬೆಸೆಯುತ್ತವೆ. ಜತೆಗೆ ಮನುಷ್ಯನ ಬೌದ್ಧಿಕ ಶಕ್ತಿಯನ್ನು ವೃದ್ಧಿಸುತ್ತಿದ್ದು, ವಿದ್ಯಾರ್ಥಿಗಳ ಅಭ್ಯಾಸಕ್ಕೆ ಸಹಕಾರಿಯಾಗಿದೆ. ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ. ಸೋಲು-ಗೆಲುವು ನೆಪ ಮಾತ್ರ. ಪ್ರತಿ ವಿದ್ಯಾರ್ಥಿಯೂ ಕ್ರೀಡೆಗಳಲ್ಲಿ ಭಾಗವಹಿಸಿ ತಮ್ಮ ದೈಹಿಕ ಮತ್ತು ಬೌದ್ಧಿಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು.
ಜಿಪಂ ಸದಸ್ಯೆ ಗಿರಿಜಾ ರೇವಣಪ್ಪ ಸಂಗಟಿ ಮಾತನಾಡಿ, ನಿರ್ಣಾಯಕರು ನೀಡುವ ತೀರ್ಪನ್ನು ಎಲ್ಲ ಕ್ರೀಡಾಪಟುಗಳು ಗೌರವದಿಂದ ಪಾಲಿಸಬೇಕು, ಕ್ರೀಡಾ ಮನೋಭಾವವನ್ನು ಜೀವನದಲ್ಲೂ ಅಳವಡಿಸಿಕೊಂಡು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಲಿಂಗನಬಂಡಿ ಮೌನೇಶ್ವರಮಠದ ಉಳಿವೇಂದ್ರಸ್ವಾಮಿ ಮೌನೇಶ್ವರಮಠ ಸಾನಿಧ್ಯ ವಹಿಸಿದ್ದರು. ವಜ್ರಬಂಡಿ ಗ್ರಾಪಂ ಅಧ್ಯಕ್ಷೆ ಲಕ್ಷ ್ಮವ್ವ ಕೆಂಚಣ್ಣನವರ್ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸದಸ್ಯರಾದ ಓಬಳೆಪ್ಪ ಕುಲಕರ್ಣಿ, ಸಾವಿತ್ರಿ ಗೊಲ್ಲರ್, ಎಸ್‌ಡಿಎಂಸಿ ಅಧ್ಯಕ್ಷ ಮಾನಪ್ಪ ಸೂಳಿಕೇರಿ, ಗ್ರಾಪಂ ಸದಸ್ಯ ಗುಂಡನಗೌಡ ಮಾಲಿಪಾಟೀಲ್, ಮುಖಂಡರಾದ ಹನಮಗೌಡ ಪೂಜಾರ್, ಗೋಪಾಲಗೌಡ ಮಾಲಿಪಾಟೀಲ, ಹನಮಪ್ಪ ಮದಲಗಟ್ಟಿ, ರಾಮಣ್ಣ ಮಾಲಿಪಾಟೀಲ, ಹನಮಪ್ಪ ಗುರಿಕಾರ, ದೇವಪ್ಪ ಹಿರೇಮನಿ, ಬಸವರಾಜ ಜಂಬಳ್ಳಿ, ಮುಖ್ಯಶಿಕ್ಷಕ ಶಿವಾನಂದ ಬಾಗೇವಾಡಿಮಠ, ದೈಹಿಕ ಶಿಕ್ಷಣಾಧಿಕಾರಿ ಶರಣಪ್ಪ ವೀರಾಪೂರ್, ಸಿದ್ಧಲಿಂಗಪ್ಪ ಶ್ಯಾಗೋಟಿ, ಬಾಲದಂಡಪ್ಪ ತಳವಾರ್, ಬಸವರಾಜ ಅಡಿವೆಪ್ಪನವರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.