ಶಿರಸಿ: ಹೆಚ್ಚಿದೆ ಗಾಂಜಾ ಮಾರಾಟಗಾರರ ಜಾಲ

ಜಾಲ ಬೇಧಿಸಲು ಹೊರಟಿದೆ ಪೊಲೀಸ್‌ ಪಡೆ | ಬೇಕಿದೆ ಸಾರ್ವಜನಿಕರ ಸಹಕಾರ

Team Udayavani, Aug 3, 2019, 4:02 PM IST

Udayavani Kannada Newspaper

ಶಿರಸಿ: ನಗರದಲ್ಲಿ ಗಾಂಜಾ ಮಾರಾಟ ಮಾಡುವವರ ಆಯಕಟ್ಟಿನ ಸ್ಥಳಗಳು ಹೆಚ್ಚಾಗಿದ್ದು, ಒಂದೆಡೆಗೆ ಇದು ಮಕ್ಕಳ ಮೇಲೆ ಪಾಲಕರು ಕಣ್ಗಾವಲು ಇಡಬೇಕಾದ ಸ್ಥಿತಿ ನಿರ್ಮಾಣವಾದರೆ, ಇನ್ನೊಂದೆಡೆ ಪೊಲೀಸರು ಗಾಂಜಾ ಮಾರಾಟ ಸ್ಥಳಗಳ ಮೇಲೆ ವಿಶೇಷ ನಿಗಾ ಇಟ್ಟಿದೆ. ಹೆಚ್ಚುತ್ತಿರುವ ಗಾಂಜಾ ಮಾರಾಟಕ್ಕೆ ಕಡಿವಾಣ ಹಾಕಲು ಪೊಒಲೀಸ್‌ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ.

ಎರಡು ದಿನಗಳ ಹಿಂದಷ್ಟೇ ಗಾಂಜಾ ಮಾರಾಟ ಮಾಡತ್ತಿದ್ದ ಮೂವರನ್ನು ಬಂಧಿಸಿದ್ದ ಪೊಲೀಸರು ಇನ್ನೂ ಅನೇಕ ಸ್ಥಳಗಳ ಮೇಲೆ ಕಣ್ಗಾವಲು ಹಾಕಿದೆ. ಅಕ್ರಮ ಚಟುವಟಿಕೆ ಮಟ್ಟ ಹಾಕುವವರ ವಿರುದ್ಧ ಮಟ್ಟ ಹಾಕಿ ನಗರದಲ್ಲಿ ಇಂತಹ ಮಾದಕ ವ್ಯಸನಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತ ಆಗಿದ್ದು ಗಮನಾರ್ಹವಾಗಿದೆ. ನಗರದಲ್ಲಿ ಗಾಂಜಾ ಸೇವನೆ ಮಾಡುವ 20ಕ್ಕೂ ಹೆಚ್ಚು ಅಡ್ಡೆಗಳನ್ನು ಪೊಲೀಸರು ಪತ್ತೆ ಹಚ್ಚಿರುವ ಮಾಹಿತಿ ಲಭ್ಯವಾಗಿದೆ. ಸಮೀಪದ ಸಿಸಿ ಟಿವಿ ಮುಂತಾದ ಮಾರ್ಗಗಳ ಮೂಲಕ ಸೇವಿಸುವವರನ್ನು ಪತ್ತೆ ಹಚ್ಚಲಾಗುತ್ತಿದೆ. ವಿಶೇಷ ಎಂದರೆ 16ರಿಂದ 25 ವರ್ಷದೊಳಗಿನ ಯುವ ಶಕ್ತಿಯೇ ಈ ಚಟಕ್ಕೆ ಈಡಾಗುತ್ತಿರುವದು ಇನ್ನಷ್ಟು ಆತಂಕ ಮೂಡಿಸಿದೆ.

ಗಾಂಜಾ, ಅಫೀಮುಗಳ ಚಟಕ್ಕೆ ಸಾಕಷ್ಟು ಯುವಕರು, ಕಾಲೇಜು ವಿದ್ಯಾರ್ಥಿನಿಗಳೂ ಬಲಿಯಾಗುತ್ತಿದ್ದಾರೆ ಎಂಬ ಕಳವಳ ವ್ಯಕ್ತವಾಗುತ್ತಲೇ ಇದ್ದು, ಇದೀಗ ಪೊಲೀಸರು ಕಠಿಣ ಕ್ರಮಕ್ಕೆ ಬಲೆ ಬೀಸಿದೆ. ನಗರಕ್ಕೆ ಹಾನಗಲ್, ಹಾವೇರಿ ಮುಂತಾದೆಡೆಯಿಂದ ಗಾಂಜಾ ಪೂರೈಕೆಯಾಗುತ್ತಿದೆ. ಗಾಂಜಾ ಮಾರಾಟಕ್ಕೆ ವ್ಯವಸ್ಥಿ ಜಾಲ ಕಾರ್ಯ ಮಾಡುತ್ತಿದೆ. 1 ರಿಂದ 2ಕೆಜಿವರೆಗೆ ಗಾಂಜಾ ತಂದು ನೀಡಲಾಗುತ್ತಿದ್ದು ಅದನ್ನೇ ಪತ್ತೆ ಮಾಡಲೇಬೇಕು ಎಂಬುದು ಪೊಲೀಸ್‌ ಇಲಾಖೆಯ ಪಣ ಎಂಬುದು ವಿಶ್ವಾಸನೀಯ ಮೂಲವೊಂದು ಹೇಳಿದೆ. ಈ ಮಧ್ಯೆ ಗಾಂಜಾ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ 2018ರಲ್ಲಿ 6 ಪ್ರಕರಣಗಳು, 2019ರಲ್ಲಿ 3 ಪ್ರಕರಣಗಳು ದಾಖಲಾಗಿವೆ ಎಂಬುದೂ ಗಮನಾರ್ಹವಾಗಿದೆ.

ಹಲವು ಯುವಕರು ಗಾಂಜಾ ದೊರೆಯದಿದ್ದಾಗ ವೈಟ್ನರ್‌, ಕೆಲ ಔಷಧ ಗುಳಿಗೆಗಳನ್ನು ಸುಟ್ಟು ಅದರ ಹೊಗೆ ಸೇವಿಸುವ ರೂಢಿ ಬೆಳೆಸಿಕೊಂಡಿದ್ದರು. ಇವುಗಳನ್ನು ಮಾರಾಟ ಮಾಡುವ ಅಂಗಡಿಗಳಿಗೂ ಮಕ್ಕಳಿಗೆ ಇದನ್ನು ನೀಡುವಾಗ ಕಾಳಜಿ ವಹಿಸುವಂತೆ ಇಲಾಖೆಯಿಂದ ಸೂಚಿಸಲಾಗಿತ್ತು. ಅದೀಗ ನಿಯಂತ್ರಣದಲ್ಲಿದ್ದು ಇದೀಗ ಗಾಂಜಾ ಹಾವಳಿ ತಡೆಯುವುದು ಇಲಾಖೆಗೆ ಸವಾಲಾಗಿದೆ. ವಿದ್ಯಾರ್ಥಿಗಳು ವಾಸ್ತವ್ಯ ಮಾಡುವ ಕೆಲವು ಪಿಜಿಗಳಲ್ಲಿ ಕೆಲವು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿರುವ ಶಂಕೆ ಕೂಡ ವ್ಯಕ್ತವಾಗಿದೆ. ಪಿಜಿಗಳಲ್ಲಿ ವಿದ್ಯಾರ್ಥಿಗಳು ಗಾಂಜಾ ಹೊಂದಿದ್ದಲ್ಲಿ ಅಥವಾ ಸೇವಿಸಿದಲ್ಲಿ ಆಯಾ ಪಿಜಿ ಮಾಲೀಕರೇ ನೇರ ಹೊಣೆಯಾಗುತ್ತಾರೆ. ಈಗಾಗಲೇ ಎಲ್ಲ ಪಿಜಿ ಮಾಲೀಕರಿಗೆ ತಿಳಿಸಲು ಮುಂದಾಗುತ್ತಿದ್ದೇವೆ ಎಂದೂ ಡಿವೈಎಸ್‌ಪಿ ಗೋಪಾಲಕೃಷ್ಣ ನಾಯಕ ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.