ಜನ ಔಷಧಿ ಮಳಿಗೆ ತೆರೆಯಲು ಆಗ್ರಹ

ಮೂರು ತಿಂಗಳ ಹಿಂದೆಯೇ ಮಳಿಗೆ ಮುಚ್ಚಿರುವ ಮಾಲಿಕ

Team Udayavani, Aug 3, 2019, 4:13 PM IST

kolar-tdy-3

ಕೋಲಾರ ಜನ ಔಷಧ ಮಳಿಗೆ ಪುನಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ರೈತ ಸಂಘದ ಮುಖಂಡರು ಡಿಎಚ್ಒ ಡಾ.ವಿಜಯಕುಮಾರ್‌ಗೆ ಮನವಿ ಸಲ್ಲಿಸಿದರು.

ಕೋಲಾರ: ಮೂರು ತಿಂಗಳಿಂದ ಮುಚ್ಚಿರುವ ಜನ ಔಷಧ ಮಳಿಗೆ ಕೂಡಲೇ ಆರಂಭಿಸುವಂತೆ ರೈತ ಸಂಘದಿಂದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿಜಯ್‌ಕುಮಾರ್‌ಗೆ ಮನವಿ ನೀಡಿ ನೀಡಲಾಯಿತು.

ಮನವಿ ನೀಡಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಬಡಜನರಿಗೆ ಔಷಧಿಗಳು ಕಡಿಮೆ ದರದಲ್ಲಿ ಸಿಗಲಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರತಿ ತಾಲೂಕಿನ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜಾಗದ ಜೊತೆಗೆ ಎಲ್ಲಾ ಸೌಲಭ್ಯಗಳನ್ನು ನೀಡಿ 200 ಔಷಧಿ ಒಳಗೊಂಡ ಮಳಿಗೆ ತೆರೆಯಲು ಖಾಸಗಿಯವರಿಗೆ ಟೆಂಡರ್‌ ನೀಡಿದೆ. ಆದರೆ, ಟೆಂಡರ್‌ದಾರರು ನೆಪ ಮಾತ್ರಕ್ಕೆ ಮಳಿಗೆ ತೆರೆದು ಅಮಾಯಕರ ಹೆಸರಿನಲ್ಲಿ ಸಾವಿರಾರು ಕೋಟಿ ರೂ. ಹಣ ಲೂಟಿ ಮಾಡುತ್ತಿದ್ದಾರೆ ಎಂದು ದೂರಿದರು.ಟೆಂಡರ್‌ದಾರರು ಮೂರೇ ದಿನಕ್ಕೆ ಮಳಿಗೆ ಮುಚ್ಚಿ ನಾಪತ್ತೆಯಾಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮೌನಕ್ಕೆ ಶರಣಾಗಿ ಖಾಸಗಿ ಮೆಡಿಸಿನ್‌ ಕಂಪನಿಗಳಿಗೆ ಅನುಕೂಲ ಮಾಡಿಕೊಡುತ್ತಿದ್ದಾರೆ. ನೊಂದ ರೋಗಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಬಂಗವಾದಿ ನಾಗರಾಜಗೌಡ ಮಾತನಾಡಿ, ಆರೋಗ್ಯ ಇಲಾಖೆ ಖಾಸಗಿ ಆಸ್ಪತ್ರೆಗಳ ಕೈಗೊಂಬೆಯಾಗಿದೆ. 3 ತಿಂಗಳಿಂದ ಜನ ಔಷಧ ಮಳಿಗೆ ಮುಚ್ಚಿದ್ದರೂ ಟೆಂಡರ್‌ದಾರರ ವಿರುದ್ಧ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಕೇಳಿದ್ರೆ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಬೇಜವಾಬ್ದಾರಿ ಉತ್ತರ ನೀಡುತ್ತಾರೆ. ಕೂಡಲೇ ಕಾಣೆಯಾಗಿರುವ ಜನ ಔಷಧ ಮಳಿಗೆ ಮಾಲಿಕರ ವಿರುದ್ಧ ಕಾನೂನು ಕ್ರಮ ಕೈಗೊಂಡು, ಕೂಡಲೇ ಮಳಿಗೆ ಪ್ರಾರಂಭಿಸಬೇಕೆಂದು ಒತ್ತಾಯಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿಜಯ್‌ಕುಮಾರ್‌, ಜನ ಔಷಧ ಮಳಿಗೆ ಮುಚ್ಚಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಸಮಸ್ಯೆ ಬಗೆಹರಿಸಿ ಮಳಿಗೆ ಪ್ರಾರಂಭ ಮಾಡುವ ಜೊತೆಗೆ ಜನರಿಗೆ ಕರ ಪತ್ರದ ಮೂಲಕ ಜಾಗೃತಿ ಮೂಡಿಸುವ ಭರವಸೆ ನೀಡಿದರು. ಮನವಿ ನೀಡುವಾಗ ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್‌, ಮಂಗಸಂದ್ರ ನಾಗೇಶ್‌, ತಿಮ್ಮಣ್ಣ, ವೆಂಕಟೇಶಪ್ಪ, ಮೀಸೆ ವೆಂಕಟೇಶಪ್ಪ, ನಲ್ಲಾಂಡಹಳ್ಳಿ ಕೇಶವ, ವೇಣು, ಈಕಂಬಳ್ಳಿ ಮಂಜುನಾಥ್‌, ತೆರ್ನಹಳ್ಳಿ ಆಂಜಿನಪ್ಪ, ವಡ್ಡಹಳ್ಳಿ ಮಂಜುನಾಥ್‌, ಕ್ಯಾಸಂಬಳ್ಳಿ ಪ್ರತಾಪ್‌, ಚಂದ್ರಪ್ಪ, ರಾಮಕೃಷ್ಣಪ್ಪ ಮುಂತಾದವರಿದ್ದರು.

ಟಾಪ್ ನ್ಯೂಸ್

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

11

Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ‌ ನಿರೀಕ್ಷಣಾ ಜಾಮೀನು ಮಂಜೂರು

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

3

Mangaluru: ರಾಜ್ಯದ 2ನೇ ಐಟಿ ಕೇಂದ್ರವಾಗಿ ಅಭಿವೃದ್ಧಿಗೆ ಅವಕಾಶ ಇದ್ದರೂ ಆದ್ಯತೆ ನೀಡದ ಸರಕಾರ

8-uv-fusion

Lockdown Days: ಲಾಕ್‌ಡೌನ್‌ ಎಂಬ ದಪ್ಪಕ್ಷರದಲ್ಲಿ ಬರೆದ ಇತಿಹಾಸ!

7-uv-fusion

UV Fusion: ಮಾತಲ್ಲಿರಲಿ ಗಮ್ಮತ್ತು; ಅಳತೆ ಮೀರಿದರೆ ಆಪತ್ತು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.