ಒಂದೇ ವರ್ಷ 1086 ಕೋಟಿ ಸಾಲ ಮರುಪಾವತಿ

Team Udayavani, Aug 4, 2019, 3:07 AM IST

bbmp2

ಬೆಂಗಳೂರು: ಆಸ್ತಿಗಳನ್ನು ಅಡವಿಟ್ಟು ಆರ್ಥಿಕ ಅಶಿಸ್ತು ಪ್ರದರ್ಶಿಸಿದ್ದ ಬಿಬಿಎಂಪಿ, ಈಗ ಅಡಮಾನವಿರಿಸಿದ್ದ ಆಸ್ತಿಗಳನ್ನು ಋಣಮುಕ್ತಗೊಳಿಸುತ್ತಿದೆ. ತಾನು ಅಡವಿಟ್ಟಿದ್ದ 11 ಆಸ್ತಿಗಳ ಪೈಕಿ ಈಗಾಗಾಲೇ 10 ಆಸ್ತಿಗಳನ್ನು ಬಿಡಿಸಿಕೊಂಡಿರುವ ಪಾಲಿಕೆ, ಕಳೆದ ಒಂದು ವರ್ಷದಲ್ಲಿ ಆರು ಆಸ್ತಿಗಳನ್ನು ಋಣಮುಕ್ತಗೊಳಿಸಿದೆ.

ಗಂಗಾಂಬಿಕೆ ಮಲ್ಲಿಕಾರ್ಜುನ್‌ ಪಾಲಿಕೆಯ ಮೇಯರ್‌ ಆಗಿ ಒಂದು ವರ್ಷ ಪೂರೈಸುವ ಮುನ್ನವೇ ಪಾಲಿಕೆಯ ಆರು ಆಸ್ತಿಗಳನ್ನು ಸಾಲದ ಸುಳಿಯಿಂದ ಬಿಡಿಸಿದಂತಾಗಿದೆ. ಒಂದೇ ವರ್ಷದಲ್ಲಿ ಸುಮಾರು 1086 ಕೋಟಿ ಸಾಲ ಹಿಂತಿರುಗಿಸಿರುವ ಪಾಲಿಕೆ, ಮತ್ತೆ ತನ್ನ ಆಸ್ತಿಗಳನ್ನು ತಮ್ಮದಾಗಿಸಿಕೊಂಡಿದೆ. ಈ ರೀತಿ ವರ್ಷವೊಂದರಲ್ಲಿ ಅತೀ ಹೆಚ್ಚು ಸಾಲ ಮರುಪಾವತಿ ಮಾಡಿರುವುದು ಪಾಲಿಕೆ ಇತಿಹಾಸದಲ್ಲೇ ಇದೇ ಮೊದಲ ಬಾರಿ.

2015-16ನೇ ಸಾಲಿನ ಆರ್ಥಿಕ ವರ್ಷದ ಅಂತ್ಯಕ್ಕೆ 11 ಆಸ್ತಿಗಳನ್ನು ಅಡವಿಟ್ಟಿದ್ದ ಬಿಬಿಎಂಪಿ 1796.41 ಕೋಟಿ ಸಾಲವನ್ನು ಹೊಂದಿತ್ತು. ನಂತರದ ಎರಡು ವರ್ಷಗಳಲ್ಲಿ 713 ಕೋಟಿ ಮರುಪಾವತಿಸಿದ ಬಿಬಿಎಂಪಿ, ಕೆಂಪೇಗೌಡ ಮ್ಯೂಸಿಯಂ, ಮೆಯೋ ಹಾಲ್‌, ಜಾನ್ಸನ್‌ ಮಾರ್ಕೆಟ್‌ ಮತ್ತು ಮಲ್ಲೇಶ್ವರ ಮಾರುಕಟ್ಟೆಗಳನ್ನು ಋಣಮುಕ್ತಗೊಳಿಸಿತ್ತು.

2018ರ ಆಗಸ್ಟ್‌ನಲ್ಲಿ ಮೇಯರ್‌ ಆಗಿ ಆಯ್ಕೆಯಾದ ಗಂಗಾಂಬಿಕೆ, ತಮ್ಮ ಅಧಿಕಾರಾವಧಿಯಲ್ಲಿ 1086 ಕೋಟಿ ರೂ. ಸಾಲ ಮರು ಪಾವತಿ ಮಾಡಿದ್ದಾರೆ. ಆರಮಭದಲ್ಲೇ 871 ಕೋಟಿ ರೂ. ಸಾಲ ಮರುಪಾವತಿಸಿ ದಾಸಪ್ಪ ಆಸ್ಪತ್ರೆ ಕಟ್ಟಡ, ಪಬ್ಲಿಕ್‌ ಯುಟಿಲಿಟಿ ಕಟ್ಟಡ, ಬಿಬಿಎಂಪಿ ಕಚೇರಿ- ಪೂರ್ವ ಮತ್ತು ಕಲಾಸಿಪಾಳ್ಯ ಮಾರುಕಟ್ಟೆಯನ್ನು ಋಣಮುಕ್ತಗೊಳಿಸಿದ್ದರು.

ಇನ್ನು ಅಧಿಕಾರಾವಧಿ ಒಂದು ತಿಂಗಳು ಬಾಕಿ ಇರವಾಗ ಮತ್ತೆ 211.68 ಕೋಟಿ ಸಾಲ ಮರುಪಾವತಿಸಿ ಸ್ಲಾಟರ್‌ ಹೌಸ್‌ ಮತ್ತು ರಾಜಾಜಿನಗರ ಆಸ್ತಿಯನ್ನು ಹಿಂಪಡೆದಿದ್ದಾರೆ. ಈ ಮೂಲಕ 1796 ಕೋಟಿ ಸಾಲ ಮೊತ್ತ 463 ಕೋಟಿಗೆ ಇಳಿದಿದೆ.

ಈಗಾಗಲೇ ಪಾಲಿಕೆ ಮಾಡಿದ್ದ ಸಾಲವನ್ನು ತೀರಿಸುವ ಉದ್ದೇಶದಿಂದ, ಸರ್ಕಾರ ನೀಡುತಿದ್ದ ಅನುದಾನ ಮತ್ತು ಪಾಲಿಕೆಯ ತೆರಿಗೆ ಹಣವನ್ನು ಸರಿಯಾಗಿ ಬಳಕೆ ಮಾಡಲು ತೀರ್ಮಾನಿಯಲಾಗಿತ್ತು.
-ಎನ್‌.ಮಂಜುನಾಥ್‌ ಪ್ರಸಾದ್‌, ಪಾಲಿಕೆ ಆಯುಕ್ತ

ಪಾಲಿಕೆಯ ಆಸ್ತಿ ಕಾಪಾಡುವುದು ನಮ್ಮ ಕರ್ತವ್ಯವಾಗಿದ್ದು, ಆರ್ಥಿಕ ಶಿಸ್ತು ಕಾಪಾಡಲು ಯೋಜನೆ ರೂಪಿಸಲಾಗಿತ್ತು. ಅದರಂತೆ ಒಂದು ವರ್ಷದ ಅಧಿಕಾರಾವಧಿಯಲ್ಲಿ ಆರು ಆಸ್ತಿಗಳನ್ನು ಋಣಮುಕ್ತಗೊಳಿಸಲಾಗಿದೆ.
-ಗಂಗಾಂಬಿಕೆ ಮಲ್ಲಿಕಾರ್ಜುನ್‌, ಮೇಯರ್‌

ಟಾಪ್ ನ್ಯೂಸ್

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

1(1)

Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.