ಆರು ಮಂದಿ ಅಪಹರಣಕಾರರ ಸೆರೆ

Team Udayavani, Aug 4, 2019, 3:03 AM IST

arrest2

ಬೆಂಗಳೂರು: ಐವತ್ತು ಮಂದಿ ಪೊಲೀಸರ ಕೋಟೆ ಭೇದಿಸಿ 15 ಲಕ್ಷ ರೂ. ಹಣವಿದ್ದ ಬ್ಯಾಗ್‌ ಪಡೆದು ಸಿನಿಮೀಯ ರೀತಿಯಲ್ಲಿ ಎಸ್ಕೇಪ್‌ ಆಗಿದ್ದ ಅಪಹರಣಕಾರರನ್ನು ಚಾಮರಾಜಪೇಟೆ ಠಾಣೆ ಪೊಲೀಸರು ಕಡೆಗೂ ಬಂಧಿಸಿದ್ದಾರೆ. ಗುಜರಾತ್‌ ಮೂಲದ ವ್ಯಾಪಾರಿ ಸತೀಶ್‌ ಬೋಹ್ರಾ (28) ಎಂಬಾತನನ್ನು ಅಪಹರಿಸಿ 15 ಲಕ್ಷ ರೂ. ಪಡೆದ ಆರೋಪ ಪ್ರಕರಣ ಸಂಬಂಧ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿ ಆರು ಲಕ್ಷ ರೂ. ಜಪ್ತಿ ಮಾಡಿಕೊಂಡಿದ್ದಾರೆ.

ಕಾಟನ್‌ಪೇಟೆಯ ಅಕರ್‌ ಪಾಷಾ (29) ಮತ್ತು ಆತನ ಸ್ನೇಹಿತರಾದ ನಾಸೀರ್‌ ಪಾಷಾ (29), ವಿಜಯನಗರದ ವಸೀಂಅಕ್ರಂ (30) ಹಾಗೂ ಶಿವಾಜಿನಗರದ ಇಮ್ರಾನ್‌ ಖಾನ್‌ (31),ಪಾದರಾಯನಪುರದ ಸೈಯ್ಯದ್‌ ರೋಷನ್‌ (30), ಆತನ ಸ್ನೇಹಿತರಾದ ಜೆಜೆನಗರ ಗೋರಿಪಾಳ್ಯದ ಅಫ್ಜಲ್‌ ಬೇಗ್‌ (28)ಬಂಧಿತರು.

ಸತೀಶ್‌ ಬೋಹ್ರಾ ಎರಡು ವರ್ಷಗಳಿಂದ ಸಿಟಿ ಮಾರುಕಟ್ಟೆಯಲ್ಲಿ ಮಳಿಗೆ ಇಟ್ಟುಕೊಂಡು ಸ್ಟೀಲ್‌ ವ್ಯಾಪಾರ ಮಾಡಿಕೊಂಡಿದ್ದರು. ಈತನ ಬಳಿ ಅಕºರ್‌ ಪಾಷಾ ಕೆಲಸ ಮಾಡುತ್ತಿದ್ದು, ಪ್ರತಿದಿನ ನಡೆಯುತ್ತಿದ್ದ ಲಕ್ಷಾಂತರ ರೂ.ಗಳ ವಹಿವಾಟು ನೋಡಿದ್ದ. ಮಾಲೀಕ ಸತೀಶ್‌ರನ್ನು ಅಪಹರಿಸಿ ಹಣಕ್ಕೆ ಡಿಮ್ಯಾಂಡ್‌ ಮಾಡಿದರೆ ಸುಲಭವಾಗಿ ಹಣ ಪಡೆಯಬಹುದು ಎಂದು ಯೋಜನೆ ರೂಪಿಸಿದ ಅಕರ್‌, ಉಳಿದ ಆರೋಪಿಗಳಿಗೆ ಸಂಚು ತಿಳಿಸಿದ್ದ.

ಅದಕ್ಕೆ ಅವರೂ ಒಪ್ಪಿಕೊಂಡಿದ್ದರು. ಅದರಂತೆ ಜೂ.14ರಂದು ರಾತ್ರಿ 9 ಗಂಟೆಗೆ ಅಂಗಡಿಗೆ ಬೀಗ ಹಾಕಿ ಮನೆಗೆ ಹೊರಟಿದ್ದ ಸತೀಶ್‌ನನ್ನು ಕಾರಿನಲ್ಲಿ ಅಪಹರಿಸಿ, ಬಿಡದಿ ಬಳಿಯ ನಿರ್ಜನ ಪ್ರದೇಶದಲ್ಲಿ ಬಚ್ಚಿಟ್ಟಿದ್ದರು. ಬಳಿಕ ಆತನ ಕುಟುಂಬಕ್ಕೆ ಫೋನ್‌ ಮಾಡಿ 15 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದರು.

ಭದ್ರಕೋಟೆ ಭೇದಿಸಿದರು: ಸತೀಶ್‌ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ ಚಾಮರಾಜಪೇಟೆ ಪೊಲೀಸರಿಗೆ ಪ್ರಾಥಮಿಕ ತನಿಖೆಯಲ್ಲಿ ಅವರ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಅಕರ್‌ ಪಾತ್ರವಿರುವುದು ಧೃಡವಾಗಿತ್ತು. ಅದರಂತೆ ಸತೀಶ್‌ ತಂದೆ ಮಾಂಗಿಲಾಲ್‌ ಮೂಲಕ ಆರೋಪಿಗಳಿಗೆ ಕರೆ ಮಾಡಿಸಿ, ಹಣ ನೀಡುವುದಾಗಿ ಹೇಳಿಸಿದ್ದರು.

ಅದರಂತೆ ಜೂನ್‌ 16ರಂದು ಕಾಟನ್‌ ಪೇಟೆ, ಕೆ.ಆರ್‌.ಮಾರುಕಟ್ಟೆ, ಚಾಮರಾಜಪೇಟೆ ಠಾಣೆಗಳ 50ಕ್ಕೂ ಹೆಚ್ಚು ಸಿಬ್ಬಂದಿ ಆರೋಪಿಗಳಿಗೆ ಹಣ ನೀಡುವಾಗಲೇ ಬಂಧಿಸಬೇಕು ಎಂದು ನಿರ್ಧರಿಸಿದ ಪೊಲೀಸರು, ಮೈಸೂರು ರಸ್ತೆಗೆ ಬರುವಂತೆ ಮಾಂಗಿಲಾಲ್‌ ಆರೋಪಿಗಳಿಗೆ ಹೇಳಿಸಿದ್ದರು. ತಡರಾತ್ರಿ ಒಂದು ಗಂಟೆ ಸುಮಾರಿಗೆ ಆರೋಪಿಗಳು ಬರುವುದಾಗಿ ತಿಳಿಸಿದ್ದರು.

50ಕ್ಕೂ ಹೆಚ್ಚು ಪೊಲೀಸರು ಆರೋಪಿಗಳು ಬಂದ ತಕ್ಷಣ ಬಂಧಿಸಲು ತಯಾರಿ ನಡೆಸಿದ್ದರು. ಆದರೆ ಬುಲೆಟ್‌ನಲ್ಲಿ ಬಂದ ಅಕರ್‌ ಮತ್ತು ಸೈಯದ್‌, ಮಾಂಗಿಲಾಲ್‌ ಬಳಿ ಇದ್ದ 15 ಲಕ್ಷ ರೂ.ಗಳ ಬ್ಯಾಗ್‌ ಕಸಿದುಕೊಂಡು ಸತೀಶ್‌ರನ್ನು ಬೈಕ್‌ನಿಂದ ತಳ್ಳಿ ಪರಾರಿಯಾಗಿದ್ದರು. ಪರಾರಿಯಾಗಿದ್ದ ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯಾಚರಣೆ ನಡೆಸಿ ಇದೀಗ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದರು.

ಟಾಪ್ ನ್ಯೂಸ್

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.