ಸೇವಾ ಮನೋಭಾವ ಬೆಳೆಸಿಕೊಳ್ಳಿ

•ಸ್ಕೌಟ್ಸ್‌-ಗೈಡ್ಸ್‌ನಿಂದ ಮಕ್ಕಳಲ್ಲಿ ಶಿಸ್ತು •ಮಾರ್ಗದರ್ಶನ ಅವಶ್ಯ

Team Udayavani, Aug 4, 2019, 10:19 AM IST

dg-tdy-2

ಹೊನ್ನಾಳಿ: ಭೂಕಂಪ, ನೆರೆ ಹಾವಳಿ ಸೇರಿದಂತೆ ನೈಸರ್ಗಿಕ ವಿಕೋಪಗಳು ಸಂಭವಿಸಿದ ಸಂದರ್ಭದಲ್ಲಿ ಸೌಟ್ಸ್‌ ಮತ್ತು ಗೈಡ್ಸ್‌ ವಿದ್ಯಾರ್ಥಿಗಳು ನೀಡುವ ನೆರವು ಅವಿಸ್ಮರಣೀಯ. ಅವರ ಸೇವಾ ಮನೋಭಾವ ಅನುಕರಣೀಯ ಹಾಗೂ ಬೆಲೆ ಕಟ್ಟಲಾಗದ್ದು ಎಂದು ಸಾಯಿ ಗುರುಕುಲ ಸಿಬಿಎಸ್‌ಇ ವಸತಿಯುತ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಜಿ. ಮರಿಗೌಡ ಹೇಳಿದರು.

ತಾಲೂಕಿನ ಎಚ್. ಕಡದಕಟ್ಟೆ ಗ್ರಾಮದ ಸಾಯಿ ಗುರುಕುಲ ಸಿಬಿಎಸ್‌ಇ ವಸತಿಯುತ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಗೆ ಆಯ್ಕೆಯಾದ ಸಂಸ್ಥೆಯ ಸ್ಕೌಟ್ಸ್‌ ಮತ್ತು ಗೈಡ್ಸ್‌ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಪ್ರಮಾಣ ಪತ್ರ-ಸ್ಮರಣಿಕೆ ವಿತರಿಸಿ ಮಾತನಾಡಿದ ಅವರು, ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಕಲಿಸುತ್ತದೆ. ಬಹು ಮುಖ್ಯವಾಗಿ ಸೇವಾ ಮನೋಭಾವವನ್ನು ಮಕ್ಕಳಲ್ಲಿ ಮೂಡಿಸುತ್ತದೆ. ಆದ್ದರಿಂದ, ಎಲ್ಲರೂ ಇದರಲ್ಲಿ ಪಾಲ್ಗೊಳ್ಳಬೇಕು. ಶಿಕ್ಷಕರು ವಿದ್ಯಾರ್ಥಿಗಳಿಗೆ ಸಮರ್ಪಕ ಮಾರ್ಗದರ್ಶನ ನೀಡಬೇಕು ಎಂದರು.

ತಾಲೂಕಿನ ಎಚ್. ಕಡದಕಟ್ಟೆ ಗ್ರಾಮದ ಸಾಯಿ ಗುರುಕುಲ ಸಿಬಿಎಸ್‌ಇ ವಸತಿಯುತ ವಿದ್ಯಾಸಂಸ್ಥೆಯಲ್ಲಿ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ವಿಶೇಷ ಆದ್ಯತೆ ನೀಡಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ. ವಿದ್ಯಾಸಂಸ್ಥೆ ಹೊನ್ನಾಳಿ ತಾಲೂಕಿನಲ್ಲೇ ಅತಿ ಹೆಚ್ಚಿನ ಮಕ್ಕಳಿಗೆ ಸ್ಕೌಟ್ಸ್‌ ಮತ್ತು ಗೈಡ್ಸ್‌ ಶಿಕ್ಷಣ ನೀಡುವ ಸಂಸ್ಥೆಯಾಗಿದೆ. ವಿದ್ಯಾರ್ಥಿಗಳನ್ನು ಇದರ ಪ್ರಯೋಜನ ಪಡೆದುಕೊಂಡು ಜೀವನದಲ್ಲಿ ಶಿಸ್ತು, ಶಾಂತಿ, ಸಂಯಮ ರೂಢಿಸಿಕೊಳ್ಳಬೇಕು ಎಂದು ಹೇಳಿದರು.

2018-19ರಲ್ಲಿ ಸಂಸ್ಥೆಯ ಸ್ಕೌಟ್ಸ್‌ ಮತ್ತು ಗೈಡ್ಸ್‌ ವಿದ್ಯಾರ್ಥಿಗಳು ಗೀತಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು ಎಂಬುದನ್ನು ಸ್ಮರಿಸಿದ ಅವರು, ಪ್ರಸ್ತುತ 2019-20ರಲ್ಲಿ ಈಚೆಗೆ ನ್ಯಾಮತಿಯಲ್ಲಿ ಜರುಗಿದ ತಾಲೂಕು ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುವುದು ಸಂತಸದ ವಿಷಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣರಾದ ಸಂಸ್ಥೆಯ ಎಲ್ಲಾ ಶಿಕ್ಷಕರನ್ನು ಅಭಿನಂದಿಸುವುದಾಗಿ ತಿಳಿಸಿದರು.

ಸಾಯಿ ಗುರುಕುಲ ಸಿಬಿಎಸ್‌ಇ ವಸತಿಯುತ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಸಿ.ಜಿ. ಸುರೇಂದ್ರ, ಉಪ ಪ್ರಾಂಶುಪಾಲ ಇಸ್ಮಾಯಿಲ್, ಶಿಕ್ಷಣ ಸಂಯೋಜಕ ಹರೀಶ್‌ಕುಮಾರ್‌, ಸೌಟ್ಸ್‌ ಮತ್ತು ಗೈಡ್ಸ್‌ ತರಬೇತುದಾರರಾದ ಚಿದಾನಂದ್‌, ದೀಪಾ, ಚೈತ್ರಾ, ಎಲ್ಲಾ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kandagal ಗ್ರಾಮಸ್ಥರಿಗೆ ಕಾಟ ಕೊಡುತ್ತಿದ್ದ ಕೋತಿ ಸೆರೆ

Kandagal ಗ್ರಾಮಸ್ಥರಿಗೆ ಕಾಟ ಕೊಡುತ್ತಿದ್ದ ಕೋತಿ ಸೆರೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Davanagere; Protest by BJP Zilla Raitamorcha condemning the price hike

Davanagere; ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾದಿಂದ ಪ್ರತಿಭಟನೆ

1-sadsadasd

Congress; ಈ ಬಾರಿಯೇ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

1-sa-dsadsa

Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.