ಮಾಯಕೊಂಡ ತಾಲೂಕು ಕೇಂದ್ರವಾಗಲಿ
Team Udayavani, Aug 4, 2019, 10:32 AM IST
ದಾವಣಗೆರೆ: ಮಾಯಕೊಂಡವನ್ನು ತಾಲೂಕು ಕೇಂದ್ರವನ್ನಾಗಿಸಲು ಆಗ್ರಹಿಸಿ ಮಾಯಕೊಂಡ ಪುರ ಅಭಿವೃದ್ಧಿ ಕ್ರಿಯಾಶೀಲ ವೇದಿಕೆ ನೇತೃತದಲ್ಲಿ ಪ್ರತಿಭಟನೆ ನಡೆಸಲಾಯಿತು.
ದಾವಣಗೆರೆ: ಮಾಯಕೊಂಡವನ್ನು ತಾಲೂಕು ಕೇಂದ್ರವನ್ನಾಗಿ ರಚಿಸುವಂತೆ ಆಗ್ರಹಿಸಿ ಶನಿವಾರ ಗ್ರಾಮದಲ್ಲಿ ಮಾಯಕೊಂಡ ಪುರ ಅಭಿವೃದ್ಧಿ ಕ್ರಿಯಾಶೀಲ ವೇದಿಕೆ ನೇತೃತದಲ್ಲಿ ಪ್ರತಿಭಟನೆ ನಡೆಯಿತು.
ದಾವಣಗೆರೆ ತಾಲೂಕಿನ ಮಾಯಕೊಂಡ ದೊಡ್ಡ ಗ್ರಾಮವಾಗಿದ್ದು, 16 ಸಾವಿರಕ್ಕಿಂತಲೂ ಹೆಚ್ಚು ಜನಸಂಖ್ಯೆ ಹೊಂದಿದೆ. ಅಲ್ಲದೇ ವಿಧಾನ ಸಭಾ ಕ್ಷೇತ್ರವೂ ಆಗಿದೆ. ಗ್ರಾಮದಲ್ಲಿ ಸರ್ಕಾರಿ ಪದವಿ ಕಾಲೇಜು, ಖಜಾನೆ, ನಾಡ ಕಚೇರಿ, ಪೊಲೀಸ್ ಠಾಣೆ, ಬ್ಯಾಂಕ್ ಕಾರ್ಯ ನಿರ್ವಹಿಸುತ್ತಿವೆ. ಈ ಹಿಂದೆ ಹುಂಡೇಕಾರ್ ಸಮಿತಿ, ಗದ್ದಿಗೌಡರ್ ಸಮಿತಿ ಹಾಗೂ ವಾಸುದೇವರಾವ್ ಸಮಿತಿ ಸಹ ಮಾಯಕೊಂಡ ತಾಲೂಕು ಕೇಂದ್ರವನ್ನಾಗಿಸಲು ಅರ್ಹತೆ ಹೊಂದಿದೆ ಎಂದು ಉಲ್ಲೇಖೀಸಲಾಗಿದೆ. ಮಾಯಕೊಂಡವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಲು ರಾಮಕೃಷ್ಣ ಹೆಗಡೆಯವರಿಂದ ಹಿಡಿದು ಇಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂಪ್ಪನವರವರೆಗೂ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಮಾಯಕೊಂಡ ಗ್ರಾಮದ ಸುತ್ತಮುತ್ತ ಎಸ್ಸಿ-ಎಸ್ಟಿ ಸಮುದಾಯದವರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಕಾರ್ಯ ನಿಮಿತ್ತ ದಾವಣಗೆರೆ ತಾಲೂಕು ಕೇಂದ್ರಕ್ಕೆ ಹೋಗಿ ಬರಲು ಆರ್ಥಿಕ ಹೊರೆ ಹಾಗೂ ಸಮಯ ವ್ಯರ್ಥವಾಗಲಿದೆ. 60 ವರ್ಷಗಳಿಂದಲೂ ಈ ಭಾಗದ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಸಾರ್ವಜನಿಕರ ಸಮಸ್ಯೆ ಅರಿತು ಈಗಲಾದರೂ ಮಾಯಕೊಂಡವನ್ನು ತಾಲೂಕು ಕೇಂದ್ರವನ್ನಾಗಿ ರಚಿಸಲು ತಕ್ಷಣ ಕ್ರಮ ವಹಿಸಬೇಕೆಂದು ವೇದಿಕೆಯ ಅಧ್ಯಕ್ಷ ಎಂ.ಎಸ್.ಕೆ.ಶಾಸ್ತ್ರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.