ರಾಷ್ಟ್ರೀಯ ಹಬ್ಬಕ್ಕೆ ಬಾರದ ಅಧಿಕಾರಿಗೆ ನೋಟಿಸ್ ನೀಡಿ
Team Udayavani, Aug 4, 2019, 11:49 AM IST
ಮೂಡಲಗಿ: ಪುರಸಭಾ ಭವನದಲ್ಲಿ ಸ್ವಾತಂತ್ರೋತ್ಸವದ ಪೂರ್ವಭಾವಿ ಸಭೆಯಲ್ಲಿ ಚಿದಾನಂದ ಮುಗುಳಖೋಡ ಮಾತನಾಡಿದರು.
ಮೂಡಲಗಿ: ಸ್ವಾತಂತ್ರೋತ್ಸವ, ಪ್ರಜಾರಾಜ್ಯೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಇನ್ನಿತರ ರಾಷ್ಟ್ರೀಯ ಕಾರ್ಯಕ್ರಮಗಳಿಗೆ ಹಾಗೂ ಸರಕಾರದಿಂದ ಜರುಗುವ ಮಹಾತ್ಮರ ಜಯಂತಿಗಳಲ್ಲಿ ಭಾಗವಹಿಸದ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ನೀಡಿ ಕ್ರಮ ಜರುಗಿಸಬೇಕೆಂದು ಪುರಸಭೆ ಮಾಜಿ ಅಧ್ಯಕ್ಷ ಎಸ್.ಆರ್. ಸೋನವಾಲ್ಕರ ಆಗ್ರಹಿಸಿದರು.
ಪುರಸಭೆ ಭವನದಲ್ಲಿ ಸ್ವಾತಂತ್ರೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಕಾರ್ಯಕ್ರಮಗಳು ಕೆಲವು ಮುಖಂಡರಿಗೆ, ಪುರಸಭೆ ಮತ್ತು ಶಿಕ್ಷಣ ಇಲಾಖೆಗೆ ಹಾಗೂ ಪತ್ರಕರ್ತರಿಗೆ ಮಾತ್ರ ಶಿಮೀತವಾಗಿವೆ. ಇಂತಹ ಕಾರ್ಯಕ್ರಮಗಳಿಗೆ ಮತ್ತು ಪೂರ್ವಭಾವಿ ಸಭೆಗಳಿಗೆ ಭಾಗವಹಿಸದ ಪೊಲೀಸ್, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಪಶು ಇಲಾಖೆ, ಸಂಘ-ಸಂಸ್ಥೆಗಳಿಗೆ ಪೂರ್ವಭಾವಿಯಾಗಿ ಮಾಹಿತಿ ನೀಡಿ ಭಾಗವಹಿಸುವಂತೆ ಕ್ರಮ ಕೈಕೊಳ್ಳಬೇಕೆಂದು ತಹಶೀಲ್ದಾರರಿಗೆ ಒತ್ತಾಯಿಸಿದರು.
ತಹಶೀಲ್ದಾರ್ ಮುರಳಿಧರ ತಳ್ಳಿಕೇರಿ ಮಾತನಾಡಿ, ಕ್ರೀಡಾಕೂಟದಲ್ಲಿ ವಿಜಯ ಶಾಲಿಯಾದ ಪ್ರತಿಭೆಗಳಿಗೆ ಕಂದಾಯ ಇಲಾಖೆ ಮತ್ತು ಪುರಸಭೆಯಿಂದ ಸತ್ಕರಿಸುವುದಾಗಿ ಹೇಳಿದರು. ಹಿರಿಯ ಆರೋಗ್ಯ ನಿರೀಕ್ಷಕ ಚಿದಾನಂದ ಮುಗುಳಖೋಡ ಮಾತನಾಡಿ, ಹಿಂದಿನ ವರ್ಷದ ನಡಾವಳಿಗಳನ್ನು ಓದಿದರು. ಪದ್ಧತಿಯಂತೆ ಪ್ರಭಾತಪೇರಿ, ಸಾರ್ವಜನಿಕ ಸಮಾರಂಭದಲ್ಲಿ ತಹಶೀಲ್ದಾರರು ಸಂದೇಶ ವಾಚನ, ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಗಣ್ಯರಾದ ಎಸ್.ಆರ್. ಸೋನವಾಲ್ಕರ ಸ್ವಾತಂತ್ರೋತ್ಸವ ಕುರಿತು ಮಾತನಾಡಲು ತೀರ್ಮಾನಿಸಲಾಯಿತು. ಎಸ್.ಎ. ನಾಡಗೌಡರ, ಎಸ್.ಎಸ್. ಯಲಿಗಾರ, ಎಸ್.ಜಿ. ಗೋಡಿಗೌಡರ, ಕೆ.ಟಿ. ಗಾಣಿಗೇರ ಮತ್ತು ವಿವಿಧ ಶಾಲೆಗಳ ಮುಖ್ಯಸ್ಥರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.