ಸಮಾಜಮುಖಿ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಿದಾಗ ಯಶಸ್ಸು: ವಂ| ಹೆರಾಲ್ಡ್

ರಾಮಕೃಷ್ಣ ಮಿಷನ್‌ ಸ್ವಚ್ಛ ಮಂಗಳೂರು ಅಭಿಯಾನ

Team Udayavani, Aug 5, 2019, 5:32 AM IST

c-29

ಮಹಾನಗರ: ರಾಮಕೃಷ್ಣ ಮಿಷನ್‌ ಮಾರ್ಗದರ್ಶನದಲ್ಲಿ ಜರಗುತ್ತಿರುವ ಸ್ವಚ್ಛ ಮಂಗಳೂರು ಅಭಿಯಾನದ 5ನೇ ಹಂತದ 35ನೇ ಶ್ರಮದಾನವನ್ನು ಮಾರ್ನಮಿಕಟ್ಟೆ ಪರಿಸರದಲ್ಲಿ ಆಯೋಜಿಸಲಾಗಿತ್ತು.

ಕಾಸ್ಸಿಯಾ ಚರ್ಚ್‌ನ ಧರ್ಮಗುರು ವಂ| ಹೆರಾಲ್ಡ್ ಮಸ್ಕರೇನ್ಹಸ್‌ ಅಭಿಯಾನಕ್ಕೆ ಚಾಲನೆ ನೀಡಿದರು. ಬಳಿಕ ಸ್ವಚ್ಛ ಮಂಗಳೂರು ಅಭಿಯಾನದಡಿ ಮೋರ್ಗನ್ಸ್‌ಗೇಟ್ ರಸ್ತೆ ಮಾರ್ನಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಲಾದ ಪ್ರಯಾಣಿಕರ ತಂಗುದಾಣವನ್ನು ಮಾಜಿ ಶಾಸಕ ಜೆ.ಆರ್‌. ಲೋಬೋ ಲೋಕಾರ್ಪಣಗೊಳಿಸಿದರು. ಅಭಿಯಾನದ ಸಂಚಾಲಕ ಸ್ವಾಮಿ ಏಕಗಮ್ಯಾನಂದಜಿ, ಸತೀಶ್‌ ಭಟ್, ಪ್ರವೀಣ ಶೆಟ್ಟಿ, ಸಚಿನ್‌ ಕಾಮತ್‌, ಕರಣಜಿ, ಶಿವರಾಂ ಆಡೂರ್‌, ರಾಮಕೃಷ್ಣ ಕೊಟ್ಟಾರಿ ಮೊದಲಾದವರು ಉಪಸ್ಥಿತರಿದ್ದರು.

ವಂ| ಹೆರಾಲ್ಡ್ ಮಸ್ಕರೇನ್ಹಸ್‌ ಮಾತನಾಡಿ, ಸಮಾಜಮುಖೀ ಕಾರ್ಯಗಳನ್ನು ಮಾಡುವಾಗ ತಾನು ಮಾಡುವುದರ ಜತೆಗೆ ಎಲ್ಲರನ್ನೂ ಜೋಡಿಸಿಕೊಂಡು ಮುನ್ನಡೆದಾಗ ಯಾವುದೇ ಕಾರ್ಯ ಯಶಸ್ವಿಯಾಗುತ್ತದೆ. ಸ್ವಚ್ಛ ಮಂಗಳೂರು ನನಸಿಗಾಗಿ ಶ್ರಮಪಡುತ್ತಿರುವ ರಾಮಕೃಷ್ಣ ಮಿಷನ್‌ ಈ ನಿಟ್ಟಿನಲ್ಲಿ ಸಮಾಜದ ಸಕಲರನ್ನು ಒಗ್ಗೂಡಿಸಿಕೊಂಡು ಈ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ. ಸ್ವಚ್ಛತೆಯನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ಮುಂದುವರಿಸಿಕೊಂಡು ಹೋಗಬೇಕು. ಹಾಗಾದಾಗ ಮಾತ್ರ ನಮ್ಮ ನಗರ ಸ್ವಚ್ಛ ಸುಂದರವಾಗಿ ಕಾಣುತ್ತದೆ ಎಂದರು.

ಜೆ.ಆರ್‌. ಲೋಬೋ ಮಾತನಾಡಿ, ನಗರದ ಸ್ವಚ್ಛತೆಯಲ್ಲಿ ಅತಿಪ್ರಮುಖ ಪಾತ್ರವಹಿಸಿದಂತಹ ರಾಮಕೃಷ್ಣ ಮಿಷನ್‌ ಕಾರ್ಯ ದೇಶಕ್ಕೆ ಮಾದರಿಯಾಗಿದೆ. ಹೊರ ಊರಿಗೆ ಹೋಗಿ ಬಂದಾಗ ನಮ್ಮೂರಿನ ಸ್ವಚ್ಛತೆಯ ನೈಜ ಅರಿವು ನಮಗೆ ಮೂಡುತ್ತದೆ. ಇತ್ತೀಚಿಗೆ ಜನರಲ್ಲಿ ನಿಧಾನವಾಗಿ ಜಾಗೃತಿ ಮೂಡಿಬರುವುದು ಕಂಡುಬರುತ್ತಿದೆ. ಇದು ಮುಂದುವರಿದು ನಮ್ಮ ನಗರ ಎಲ್ಲ ನಗರಗಳಿಗೆ ಮಾದರಿಯಾಗಬೇಕು; ಅಂತಹ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಿ ಮುಂದುವರಿಯೋಣ ಎಂದು ತಿಳಿಸಿದರು.

ಶ್ರಮದಾನ
ಸ್ವಚ್ಛತಾ ಅಭಿಯಾನದ ಪ್ರಧಾನ ಸಂಯೋಜಕ ಉಮಾನಾಥ್‌ ಕೋಟೆಕಾರ್‌ ನೇತೃತ್ವದಲ್ಲಿ ಮಾರ್ನಮಿಕಟ್ಟೆ ವೃತ್ತದಿಂದ ಮೋರ್ಗನ್ಸ್‌ ಗೇಟ್ ರಸ್ತೆಯಲ್ಲಿ ಸ್ವಚ್ಛತೆ ಮಾಡಲಾಯಿತು. ಕಾರ್ಯಕರ್ತರು ರೈಲ್ವೇ ಮೇಲ್ಸೇತುವೆ ಬಳಿಯಿದ್ದ ಅಪಾರ ಪ್ರಮಾಣದ ಹಸಿತ್ಯಾಜ್ಯ ಹಾಗೂ ಹಲವು ವರ್ಷಗಳಿಂದ ಬಿದ್ದಿದ್ದ ತ್ಯಾಜ್ಯವನ್ನು ತೆರವು ಮಾಡಿದರು. ಬಳಿಕ ಅಲ್ಲಿದ್ದ ತೊಟ್ಟಿಯನ್ನು ತೆಗೆದು ಹಸನು ಮಾಡಿದರು. ಅಲ್ಲಿ ಹೂಗಿಡಗಳನ್ನಿಟ್ಟು ಆ ಜಾಗವನ್ನು ಅಂದಗೊಳಿಸಲಾಗಿದೆ.

ಮತ್ತೂಂದು ತಂಡ ಮೇಲ್ಸೇತುವೆಯ ಮೇಲ್ಭಾಗದಲ್ಲಿದ್ದ ಹುಲ್ಲನ್ನು ಕತ್ತರಿಸಿ, ಅಲ್ಲಿದ್ದ ಮಣ್ಣು ಸಹಿತ ಕಸವನ್ನು ತೆಗೆದು ಸ್ವಚ್ಛಗೊಳಿಸಿತು. ಹರೀಶ್‌ ಪ್ರಭು, ಉಮಾಕಾಂತ ಸುವರ್ಣ ಹಾಗೂ ಕಾರ್ಯಕರ್ತರು ನೂತನ ತಂಗುದಾಣದ ಸುತ್ತಮುತ್ತಲಿನ ಜಾಗವನ್ನು ಸ್ವಚ್ಛಗೊಳಿಸಿದರು.

ಮುಖೇಶ್‌ ಆಳ್ವ ಮಾರ್ಗದರ್ಶನದಲ್ಲಿ ಕಳೆಕೊಚ್ಚುವ ಯಂತ್ರದ ಸಹಾಯದಿಂದ ಅಲ್ಲಲ್ಲಿ ಬೆಳೆದಿದ್ದ ಹುಲ್ಲು, ಕಳೆಯನ್ನು ತೆಗೆದು ಸ್ವಚ್ಛ ಮಾಡಲಾಯಿತು. ಮೂರು ಮಾರ್ಗಸೂಚಕ ಫಲಕಗಳನ್ನು ಸ್ವಚ್ಛಗೊಳಿಸಿ, ನವೀಕರಿಸಲಾಯಿತು.

ರಾಮಕೃಷ್ಣ ಮಿಷನ್‌ ವತಿಯಿಂದ ನಗರದಲ್ಲಿ ಪ್ರಯಾಣಿಕರ ತಂಗುದಾಣವನ್ನು ಮೋರ್ಗನ್ಸ್‌ಗೇಟ್ ರಸ್ತೆ, ಮಾರ್ನಮಿಕಟ್ಟೆಯಲ್ಲಿ ನಿರ್ಮಿಸಲಾಗಿದೆ. ಪ್ರತಿನಿತ್ಯ ನೂರಾರು ಜನ ಉಪಯೋಗಿಸುತ್ತಿದ್ದ ಪಾಳುಬಿದ್ದ ಸ್ಥಿತಿಯಲ್ಲಿದ್ದ ಹಳೆಯ ತಂಗುದಾಣವನ್ನು ತೆರವು ಮಾಡಿ, ಇದೀಗ ಅಲ್ಲಿ ನೂತನ ತಂಗುದಾಣವನ್ನು ನಿರ್ಮಿಸಲಾಗಿದೆ. ಕುಳಿತುಕೊಳ್ಳುವ ಸ್ವತಂತ್ರ ಆಸನಗಳು, ಮೇಲ್ಛಾವಣಿ, ಉತ್ತಮ ನೆಲಹಾಸು ಹೊಂದಿದ ಈ ತಂಗುದಾಣದ ನಿರ್ಮಾಣವನ್ನು ದ.ಕ. ಬಸ್‌ ಮಾಲಕರ ಸಂಘದ ಅಧ್ಯಕ್ಷ ದಿಲ್ರಾಜ್‌ ಆಳ್ವ ಮಾರ್ಗದರ್ಶನದಲ್ಲಿ ನಡೆಸಲಾಗಿದೆ. ಇದು ಸ್ವಚ್ಛ ಮಂಗಳೂರು ಅಭಿಯಾನದಡಿ ನಿರ್ಮಿಸಲಾದ ಪ್ರಯಾಣಿಕರ 7ನೇ ತಂಗುದಾಣವಾಗಿದೆ. ರಾಮಕೃಷ್ಣ ಮಿಷನ್‌ ಸ್ವಚ್ಛತಾ ಅಭಿಯಾನದ ಈ ಎಲ್ಲ ಚಟುವಟಿಕೆಗಳಿಗೆ ಎಂ.ಆರ್‌.ಪಿ.ಎಲ್ ಸಂಸ್ಥೆ ಪ್ರಾಯೋಜಕತ್ವ ನೀಡಿ ಪ್ರೋತ್ಸಾಹಿಸುತ್ತಿದೆ.

ನೂತನ ಪ್ರಯಾಣಿಕರ ತಂಗುದಾಣ

ಟಾಪ್ ನ್ಯೂಸ್

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.