ನೆರೆಯಿಂದ ಏನೇ ನಷ್ಟವಾದರೂ ಅದಕ್ಕೆ ಸೂಕ್ತ ಪರಿಹಾರ: BSY
Team Udayavani, Aug 5, 2019, 10:31 AM IST
ಬಳ್ಳಾರಿ: ನೆರೆ ಹಾವಳಿಯಿಂದ ಏನೇ ನಷ್ಟವಾದರೂ ಅದಕ್ಕೆ ಸೂಕ್ತ ಪರಿಹಾರ ನೀಡಲು ಸರ್ಕಾರ ಸಿದ್ದವಾಗಿದೆ ಎಂದು ಬಿ.ಎಸ್‌ಯಡಿಯೂರಪ್ಪ ಹೇಳಿದರು.
ಜಿಲ್ಲೆಯ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಸೊಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಆಲಮಟ್ಟಿ ಜಲಾಶಯದಿಂದ 2.11 ಲಕ್ಷ ಕ್ಯೂಸೆಕ್, ನಾರಾಯಣಪುರ ಜಲಾಶಯದಿಂದ 2.9 ಲಕ್ಷ ಕ್ಯೂಸೆಕ್ ಸೇರಿ ಒಟ್ಟು 4 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಎನ್ ಡಿಆರ್ ಎಫ್ ಸಹ ಕಾರ್ಯಾಚರಣೆಗೆ ಇಳಿದಿದೆ. ಕೇಂದ್ರದಿಂದಲೂ ಮಿಲಿಟರಿ ಪಡೆ ಬಂದಿದೆ. ಭಾನುವಾರ ವೀಡಿಯೋ ಕಾನ್ಫರೆನ್ಸ್ ನಡೆಸಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹಾಗಾಗಿ ನೆರೆಹಾವಳಿಯಿಂದ ಏನೇ ಸಮಸ್ಯೆ, ನಷ್ಟವಾದರೂ ಯಾವುದೇ ಪರಿಹಾರ ನೀಡಲು ಸರ್ಕಾರ ಸಿದ್ದವಾಗಿದೆ ಎಂದು ತಿಳಿಸಿದರು.
ಈ ಹಿಂದೆಯೂ ನಾನು ಮುಖ್ಯಮಂತ್ರಿ ಆಗಿದ್ದಾಗ ನೆರೆಹಾವಳಿ ಸಮಸ್ಯೆಯಾಗಿತ್ತು ಎಂದ ಸಿಎಂ ಯಡಿಯೂರಪ್ಪ, ಆಗ ಇದಕ್ಕಿಂತಲೂ ಹೆಚ್ಚು ಸಮಸ್ಯೆಯಾಗಿತ್ತು. ಅದಕ್ಕೆ ಹೋಲಿಸಿದರೆ ಈಗ ಕಡಿಮೆಯಾಗಿದೆ ಎಂದರು.
ಬಳ್ಳಾರಿಯಲ್ಲಿ ಮಳೆಯಿಲ್ಲ. ಮಲೆನಾಡು ಪ್ರದೇಶವಾದ ಶಿವಮೊಗ್ಗದಲ್ಲೂ ಮಲೆಯಿಲ್ಲ. ಹೀಗೆ ರಾಜ್ಯದಲ್ಲಿ ವಿಚಿತ್ರ ಪರಿಸ್ಥಿತಿ ಇದೆ. ಈವಾರವಾದರೂ ಒಳ್ಳೆಯ ಮಳೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.
ಈ ವೇಳೆ ಶಾಸಕ ಸೋಮಶೇಖರರೆಡ್ಡಿ, ಡಿಸಿ ಎಸ್.ಎಸ್. ನಕುಲ್, ಐಜಿಪಿ ಎಂ.ನಂಜುಂಡಸ್ವಾಮಿ, ಎಸ್ ಪಿ .ಸಿ.ಕೆ.ಬಾಬಾ, ಹೆಚ್ಚುವರಿ ಎಸ್.ಪಿ ಲಾವಣ್ಯ, ಮಾಜಿ ಶಾಸಕ ಟಿ.ಎಚ್.ಸುರೇಶ್ ಬಾಬು, ಪಾಲಿಕೆ ಆಯುಕ್ತೆ ತುಷಾರಮಣಿ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.