ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದತಿಗೆ ಸಂಭ್ರಮ
Team Udayavani, Aug 6, 2019, 11:28 AM IST
ಹೊನ್ನಾಳಿ: ಜಮ್ಮು-ಕಾಶ್ಮೀರ್ ವಿಶೇಷ ಸ್ಥಾನಮಾನದ ವಿಧಿ 370, 35(ಎ) ರದ್ದು ಮಾಡಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ಶಾಸಕ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಸೋಮವಾರ ಪಟ್ಟಣದ ಸಂಗೊಳ್ಳಿರಾಯಣ್ಣ ವೃತ್ತದಲ್ಲಿ ತಾಲೂಕು ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಶಾಸಕ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ಒಂದು ದೇಶದಲ್ಲಿ ಎರಡು ಕಾನೂನು, ಎರಡು ಧ್ವಜ ಸೇರಿದಂತೆ ವಿವಿಧ ಪ್ರತ್ಯೇಕ ವ್ಯವಸ್ಥೆಗಳನ್ನು ಅಂದಿನಿಂದ ಇಂದಿನವರೆಗೂ ಬೆಂಬಲಿಸಿಕೊಂಡು ಬಂದ ಪ್ರತ್ಯೇಕತಾವಾದಿಗಳು ಹಾಗೂ ಭಯೋತ್ಪಾದಕರು ಅಲ್ಲಿನ ಜನ ಸಾಮಾನ್ಯರ ಬದುಕಿನ ಜತೆ ಚೆಲ್ಲಾಟ ಆಡುತ್ತಿದ್ದರು. ಈಗ ಆ ಎಲ್ಲದಕ್ಕೂ ಕೇಂದ್ರ ಸರ್ಕಾರ ಐತಿಹಾಸಿಕ ಕ್ರಮ ಕೈಗೊಂಡು ಪೂರ್ಣವಿರಾಮ ಹಾಕಿದೆ ಎಂದು ಹೇಳಿದರು.
ಸ್ವಾತಂತ್ರ್ಯಾನಂತರ ಅಲ್ಲಿ ನಮ್ಮ ರಾಷ್ಟ್ರಧ್ವಜ ಹಾರಾಡುವುದೂ ಕಷ್ಟಸಾಧ್ಯವಾಗಿತ್ತು. ನಮ್ಮ ಕಾಶ್ಮೀರಿ ಪಂಡಿತರ ಕುಟುಂಬಗಳನ್ನು ಹಿಂಸಿಸಿ ಮನೆಯಿಂದ ಹೊರಹಾಕಿ ಅಟ್ಟಹಾಸ ಮೆರೆಯುತ್ತಿದ್ದನ್ನು ನಾವು ನೀವೆಲ್ಲ ನೋಡಿದ್ದಾಗಿದೆ. ಅಂತಹ ಎಲ್ಲಾ ದುಷ್ಕೃತ್ಯಕ್ಕೆ ಕೊನೆ ಹಾಕಲಾಗಿದೆ ಎಂದರು.
ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಆರ್ಟಿಕಲ್ 370, 35(ಎ) ಅನ್ನು ಬಹುವಾಗಿ ವಿರೋಧಿಸಿದ್ದ ಅಂದಿನ ಜನಸಂಘದ ಮುಖಂಡರಾದ ಶ್ಯಾಂಪ್ರಕಾಶ್ ಮುಖರ್ಜಿ 1953ರಲ್ಲಿ ರೈಲಿನಲ್ಲಿ ಹೋಗುವಾಗ ಕೊಲೆ ಮಾಡಿಸಲಾಯಿತು. ಇದರಿಂದ ಕೊನೆಗೂ ಅವರು ಜಮ್ಮು ಕಾಶ್ಮೀರ ತಲುಪಲೇ ಇಲ್ಲ ಎಂದರು.
ರಾಜಕೀಯ ತುಷ್ಟೀಕರಣದಿಂದಾಗಿ ಅಲ್ಲಿನ ಹಿಂದೂಗಳ ಗೋಳನ್ನು ಕೇಳುವವರು ಯಾರೂ ಇಲ್ಲದಂತಾಗಿತ್ತು. ಸುಮಾರು 2 ಲಕ್ಷ ಹಿಂದೂಗಳನ್ನು ಜಮ್ಮು ಮತ್ತು ಕಾಶ್ಮೀರದಿಂದ ಓಡಿಸಲಾಯಿತು. ಅವರೆಲ್ಲ ದೆಹಲಿ, ಪಂಜಾಬ್, ರಾಜಸ್ಥಾನ್, ಉತ್ತರಪ್ರದೇಶ ಹಾಗೂ ಇನ್ನಿತರ ರಾಜ್ಯಗಳ ಬೀದಿ ಬದಿಯಲ್ಲಿ ಆಶ್ರಯ ಪಡೆಯುವಂತಾಯಿತು. ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದತಿಗೆ ಹೋರಾಟ ಮಾಡುತ್ತ ಪ್ರಾಣತ್ಯಾಗ ಮಾಡಿದ ಎಲ್ಲರ ಆತ್ಮಕ್ಕೆ ಇಂದು ಶಾಂತಿ ಲಭಿಸಿದೆ ಎಂದರು.
ತಾಲೂಕು ಬಿಜೆಪಿ ಅಧ್ಯಕ್ಷ ಡಿ.ಜಿ.ರಾಜಪ್ಪ, ನೆಲಹೊನ್ನೆ ಮಂಜುನಾಥ್, ಕುಬೇರಪ್ಪ, ಸತೀಶ್, ರಂಗನಾಥ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.